Thirthahalli; ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ
Team Udayavani, Aug 12, 2023, 7:56 PM IST
ತೀರ್ಥಹಳ್ಳಿ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ- ತೀರ್ಥಹಳ್ಳಿ ರಸ್ತೆಯ ಮಾಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ಯೂನಸ್, ಲತೀಫ್, ಮನೋಜ್ ಎನ್ನುವವರಾಗಿದ್ದಾರೆ.
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಗಾಂಜಾ ಸಾಗಿಸಲಾಗುತ್ತಿದ್ದು, ಕಾರಿನಲ್ಲಿ ಗಾಂಜಾ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಕೋಣಂದೂರು ಸಮೀಪ ಅಡಿಕೆ ತೋಟದಲ್ಲಿ ಗಾಂಜಾ ಬೆಳೆದ ಪ್ರಕರಣ ದಾಖಲಾಗಿತ್ತು.
ತೀರ್ಥಹಳ್ಳಿಯಲ್ಲಿ ಗಾಂಜಾ ವಿಪರೀತ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದು ಪೊಲೀಸರು ವಿಶೇಷ ತನಿಖೆ ನಡೆಸಲು ಮುಂದಾಗಿದ್ದಾರೆ. ಕೋಣಂದೂರಿನಲ್ಲಿ ತೋಟವೊಂದರಲ್ಲಿ ಬೆಳೆದಿದ್ದ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಾಳೂರಿನಲ್ಲಿ ತನಿಖೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ದಾಖಲಾಗಿದೆ. ಪೊಲೀಸರ ಕೆಲಸದ ಕುರಿತು ಸಾರ್ವಜನಿಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಡಿವೈಎಸ್‌ಪಿ ಗಜಾನನ ವಾಮನ ಸುತರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾಳೂರು ಎಸ್‌ಐ ನವೀನ್ ಮಠಪತಿ, ಎಎಸ್‌ಐ ಶಿವಾನಂದ, ಧರಣಯ್ಯ ಸಿಬ್ಬಂದಿಗಳಾದ ಸುರಕ್ಷಿತ್, ಸಂತೋಷ್, ವಿವೇಕ್, ರಾಮಣ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.