Thirthahalli; ನಾಳೆ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥರ ಪುರಪ್ರವೇಶ
Team Udayavani, Dec 29, 2023, 7:39 PM IST
ತೀರ್ಥಹಳ್ಳಿ: ಜಗದ್ಗುರು ಶ್ರೀಮಧ್ವಾಚಾರ್ಯರು ಭಕ್ತರ ಕಲ್ಯಾಣಕ್ಕಾಗಿ ಉಡುಪಿಯಲ್ಲಿ ಎಂಟು ನೂರಕ್ಕೂ ಹೆಚ್ಚು ವರ್ಷಗಳ ಹಿಂದೆ ಪ್ರತಿಷ್ಠಾಪಿಸಿದ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಸರ್ವಜ್ಞಪೀಠಾರೋಹಣವನ್ನು ನಾಲ್ಕನೇ ಬಾರಿಗೆ ಮಾಡಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರೊಡನೆ ಶನಿವಾರ( ಡಿ 30) ಸಂಜೆ ತೀರ್ಥಹಳ್ಳಿಗೆ ಆಗಮಿಸುವರು.
ಭಾನುವಾರ(ಡಿ 31) ಬೆಳಗ್ಗೆ 9.30 ಕ್ಕೆ ಕಾರ್ಯಕ್ರಮದ ಸಂಚಾಲಕರಾದ ಸೊಪ್ಪುಗುಡ್ಡೆ ರಾಘವೇಂದ್ರ ಮುಂದಾಳತ್ವದಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲು ಧರ್ಮಸ್ಥಳ ಸ್ವಸಹಾಯ ಸಂಘದ ಭಜನಾ ಮಂಡಳಿಯ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರಿಂದ ಪಟ್ಟಣದ ಕೊಪ್ಪ ಸರ್ಕಲ್ ನಿಂದ ಕುರುವಳ್ಳಿಯ ಪುತ್ತಿಗೆ ಮಠದ ವರೆಗೆ ಪೂರ್ಣಕುಂಭ ಮೆರವಣಿಗೆಯೊಂದಿಗೆ ಶ್ರೀಗಳನ್ನು ಸ್ವಾಗತಿಸಲಾಗುವುದು.
ಮಠದ ಪಕ್ಕದಲ್ಲೇ ಇರುವ ಆರ್‌ಎಸ್‌ಬಿ ಸಮಾಜದ ಸಭಾಭವನದಲ್ಲಿ ಭಕ್ತರಿಂದ ಸಾಮೂಹಿಕ ಪಾದಪೂಜೆ ಹಾಗೂ ಸಂಸ್ಥಾನ ಮಹಾಪೂಜೆ ಹಾಗೂ ಗುರುಗಳಿಂದ ಅನುಗ್ರಹ ಸಂದೇಶ ನಡೆಯಲಿದೆ. ಮಧ್ಯಾಹ್ನ ತೀರ್ಥ ಪ್ರಸಾದ ಮತ್ತು ಭೋಜನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಕೋಟಿ ಗೀತ ಲೇಖನಾ ಯಜ್ಞದ ಅಭಿಯಾನ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಕೃಷ್ಣ-ಪಾಂಡುರಂಗ ವಿಟ್ಠಲ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಪುತ್ತಿಗೆ ಮಠದ ವ್ಯವಸ್ಥಾಪಕರು ಮತ್ತು ಅರ್ಚಕ ವೃಂದದವರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.