Thirthahalli; ತಲ್ವಾರ್ ದಾಳಿ ಪ್ರಕರಣ: ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್

Team Udayavani, Jul 13, 2023, 4:34 PM IST

police

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಗಲಾಟೆಗೆ ಕಾರಣವೇನು?

ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ನಂತರ ಮಧ್ಯಾಹ್ನ 1-30 ರ ವೇಳೆಯಲ್ಲಿ ಆಸ್ಪತ್ರೆಯ ಪಕ್ಕದಲ್ಲಿರುವ ಬಾರ್ ಗೆ ಕುಡಿಯಲು ಹೋಗಿದ್ದಾರೆ.

ಬಾರ್ ನಿಂದ ಈ ನಾಲ್ವರು ಹೊರ ಬರುತ್ತಿದ್ದ ವೇಳೆ ಸ್ನೇಹಿತರೊಂದಿಗೆ ಬಂದ ಸಮೀರ್ ಮತ್ತು ಆತನ ಸಹಚರರು ಅಫ್ರೋಜ್ ಗೆ ಅವ್ಯಾಚ್ಯ ಶಬ್ದಗಳೊಂದಿಗೆ ಬೈದು ಜಗಳವಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ವಾಪಾಸ್ ಕಳುಹಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಕುಡಿದು ಗಲಾಟೆ!

ಇದಾದ ಸ್ವಲ್ಪ ಸಮಯದ ನಂತರ ಮತ್ತೆ ಎಣ್ಣೆ ಹೊಡೆಯಲು ನಿರ್ಧರಿಸಿದ‌ ನಾಲ್ವರು ಯುವಕರು ಆಗುಂಬೆ ಬಸ್ ನಿಲ್ದಾಣದ ಬಳಿಯಿರುವ ಬಾರ್ ಗೆ ಹೋಗಿ ಅಲ್ಲಿಂದ ಅಫ್ರೋಜ್ ಚೋರ್ ಸಮೀರ್ ಗೆ ಕರೆ ಮಾಡಿ ಮಧ್ಯಾಹ್ನ ಆಸ್ಪತ್ರೆಯ ಬಳಿಯಿದ್ದ ಬಾರ್ ನಲ್ಲಿ ನನ್ನನ್ನ ಬೈದಿದ್ದೇಕೆ ಎಂದು ಪ್ರಶ್ನಿಸಿದ್ದಾನೆ. ನಂತರ ಚೋರ್ ಸಮೀರ್ ಎಲ್ಲಿದೀಯ ಎಂದು ವಾಪಾಸ್ ಕೇಳಿದ್ದಾನೆ.

ಆಗುಂಬೆ ಬಸ್ ನಿಲ್ದಾಣದ ಬಾರ್ ಬಳಿ ಇದ್ದೇನೆ ಎಂದು ಅಫ್ರೋಜ್ ಹೇಳಿದ್ದಕ್ಕೆ ಏಕಾಏಕಿ ಚೋರ್ ಸಮೀರ್ ಬಾರ್ ಬಳಿ ಬಂದು ಅಫ್ರೋಜ್ ಗೆ ಆವಾಜ್ ಹಾಕಿದ್ದಾನೆ. ಇಲ್ಲೂ ಸಹ ಪೊಲೀಸರು ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ನಂತರ ನಡು ರಸ್ತೆಯಲ್ಲಿ ಆಭರಣ ಜ್ಯುವೆಲ್ಲರಿ ಬಳಿ ನಡೆದುಕೊಂಡು ಹೋಗುತ್ತಿದ್ದ ಅಫ್ರೋಜ್ ಮತ್ತು ಆತನ ಸ್ನೇಹಿತರನ್ನು ಸಫನ್ ಮತ್ತು ಇತರೆ ನಾಲ್ವರ ಜೊತೆ ಬಂದ ಚೋರ್ ಸಮೀರ್ ಅಫ್ರೋಜ್ ಮೇಲೆ ಮಚ್ಚು ಬೀಸಿದ್ದಾನೆ.

ಈ ಸಮಯದಲ್ಲಿ ಅಪ್ರೋಜ್ ತಲೆಗೆ ಗಾಯವಾಗಿದೆ. ಈ ವೇಳೆ ಜೀವಿತ್ ಗೂ ಗಾಯವಾಗಿದೆ. ಗ್ಯಾಂಗ್ ಕಟ್ಟಿಕೊಂಡು ಬಂದು ಹಲ್ಲೆ ನೆಡೆಸಲಾಗಿದೆ. ಹಲ್ಲೆ ನೆಡೆಸಿದ್ದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.