Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Team Udayavani, May 3, 2024, 2:47 PM IST
ತೀರ್ಥಹಳ್ಳಿ: ಜೂನ್. 3ಕ್ಕೆ ನೈಋತ್ಯ ಶಿಕ್ಷಕರ ಪದವಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಕಳೆದ ಎರಡು ಬಾರಿ ನಾನು ಸ್ಪರ್ಧೆ ಮಾಡಿ ಗೆಲುವು ಕಾಣುವಲ್ಲಿ ವಿಫಲನಾಗಿದ್ದೆ. ಈ ಬಾರಿ ನನ್ನೆಲ್ಲಾ ಶಿಕ್ಷಕ ಮಿತ್ರರು ಅವಕಾಶ ನೀಡಲು ಮನವಿ ಮಾಡುತ್ತೇನೆ ಎಂದು ಅಭ್ಯರ್ಥಿ ಅರುಣ್ ಹೊಸಕೊಪ್ಪ ಹೇಳಿದರು.
ಶುಕ್ರವಾರ ಪಟ್ಟಣದ ಅನ್ನಪೂರ್ಣ ಗ್ರಾಂಡ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹಾಲಿ ಸದಸ್ಯರು, ಶಿಕ್ಷಕರು ಅಲ್ಲದೆ ಇದ್ದರೂ ಕೂಡ ಅವರನ್ನು ಗೆಲ್ಲಿಸಿದ್ದರು. ಆದರೆ ಅವರು ಶಿಕ್ಷಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು. ಶಿಕ್ಷಕರಲ್ಲದೇ ಇರುವವರನ್ನು ಆಯ್ಕೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲ. ಹಾಗಾಗಿ ಈ ಬಾರಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಕೊಡಗು, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಸೇರಿ ಹಲವು ಜಿಲ್ಲೆಯ ಶಿಕ್ಷಕರು ಚುನಾವಣೆಗೆ ಮತ ಹಾಕಲು ಅವಕಾಶ ಇದೆ. ಕ್ರಿಯಾಶೀಲವಾಗಿ ಕೆಲಸ ಮಾಡಲು ನಾನು ಸಿದ್ದನಿದ್ದೇನೆ. ಹಾಲಿ ಸದಸ್ಯರು ಒಬ್ಬ ರಾಜಕಾರಣಿ, ಶಿಕ್ಷಕರ ಸಮಸ್ಯೆ ಪರಿಹಾರ ಮಾಡುವಲ್ಲಿ ಅವರು ಸಫಲರಾಗಿಲ್ಲ. ಖಾಸಗಿ ಹಾಗೂ ಸರ್ಕಾರಿ ಶಾಲೆಯ ಶಿಕ್ಷಕರಲ್ಲಿ ಹಲವು ರೀತಿಯಲ್ಲಿ ಸಮಸ್ಯೆ ಇದೆ. ಆ ಎಲ್ಲಾ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸ ನಾನು ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.