ಶೌಚಾಲಯ ಸ್ವಚ್ಛಗೊಳಿಸಿದ ಬಿಇಒ ತಳವಾರ

Team Udayavani, Nov 27, 2021, 4:45 PM IST

25clean

ಆಲಮಟ್ಟಿ: ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಅವರು ಬೇನಾಳ ಆರ್‌.ಎಸ್‌. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯಗಳನ್ನು ಸ್ವತ್ಛಗೊಳಿಸುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛತಾ ಅಭಿಯಾನಕ್ಕಾಗಿ ನಿತ್ಯ ಜಾಗೃತಿ ಮೂಡಿಸುವದು ಹಾಗೂ ಅವುಗಳ ಸ್ವಚ್ಛತೆಗಾಗಿ ಹಣ ಖರ್ಚು ಮಾಡುತ್ತಿದ್ದರೂ ಸಂಪೂರ್ಣ ಯಶಸ್ಸು ಕಾಣದಿರುವುದರಿಂದ ಅದರ ಯಶಸ್ವಿಗಾಗಿ ತಾಲೂಕಿನ ಪ್ರತಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೌಚಾಲಯ ಸ್ವತ್ಛಗೊಳಿಸುವುದರ ಜತೆಗೆ ಶಾಲಾ ಆವರಣ ಸ್ವತ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಬೇನಾಳ ಆರ್‌ಎಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉರ್ದು ಪ್ರಾಥಮಿಕ ಶಾಲೆ, ಬೇನಾಳ ಎನ್‌ಎಚ್‌ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳ ಶೌಚಾಲಯಗಳನ್ನು ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿ ತಳವಾರ ಅವರೇ ಪೊರಕೆ ಹಿಡಿದು, ಬಕೆಟ್‌ ಮೂಲಕ ನೀರು ಹಾಕಿ ಸ್ವಚ್ಛಗೊಳಿಸಿದರು.

ಜೀವನ ಪೂರ್ತಿ ಇದನ್ನೊಂದು ಮಹತ್ವದ ಕಾರ್ಯವೆಂದು ಭಾವಿಸುತ್ತೇನೆ. ಈ ಮಹತ್ವದ ಕಾರ್ಯಕ್ಕೆ ಮಹಾತ್ಮ ಗಾಂಧಿ ಅವರು ಮಾಡಿದ ಸ್ವತ್ಛತಾ ಆಂದೋಲನವೇ ನನಗೆ ಸ್ಪೂರ್ತಿಯಾಗಿದೆ. ನನ್ನ ಈ ಸೇವಾ ಕಾರ್ಯ ಅವರ ದಾರಿಯಲ್ಲಿಯೇ ಸಾಗುತ್ತದೆ. ನನ್ನ ವಾಹನದಲ್ಲಿ ಸದಾ ಕಾಲಕ್ಕೂ ಸ್ವಚ್ಛತೆ ಮಾಡುವ ಪರಿಕರಗಳನ್ನು ಇಟ್ಟು ಭೇಟಿ ಮಾಡುವ ಯಾವುದೇ ಶಾಲೆ ಇರಲಿ ಅಲ್ಲಿಯ ಶೌಚಾಲಯಗಳನ್ನು ಸ್ವಚ್ಛ ಗೊಳಿಸುತ್ತೇನೆ ಎಂದರು.

ಇದು ನನಗೆ ಆತ್ಮ ತೃಪ್ತಿಯ ಕೆಲಸವಾಗಿದೆ, ಪ್ರಚಾರಕ್ಕಾಗಿ ಅಲ್ಲ. ಇದು ಒಂದೇ ದಿನ ಮಾಡಿ ಈ ಕೆಲಸ ಕೈ ಬಿಡುವುದಿಲ್ಲ. ಈ ಪ್ರಕ್ರಿಯೆ ನಿರಂತರ ನಡೆಯುತ್ತದೆ. ಇದರಿಂದಾದರೂ ತಾಲೂಕಿನ ಎಲ್ಲಾ ಶಾಲೆಗಳು ಸ್ವಚ್ಛವಾಗಿರಲಿ ಎಂಬುದು ಇದರ ಹಿಂದಿನ ಉದ್ದೇಶ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ. ಗೌಡರ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೈಗೊಂಡ ಕಾರ್ಯದಿಂದ ಸ್ವಚ್ಛತೆ ಮಾಡಬೇಕಾದವರು ಮೈ ಮರೆತರೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಪರಿಸರದ ಅಗತ್ಯತೆಯ ಬಗ್ಗೆ ಸೂಚ್ಯವಾಗಿ ಸಂದೇಶ ನೀಡಿದಂತಾಗಿದೆ.

ವಿ.ಪಿ. ಜುಳಜುಳಿ, ಆರ್‌.ಎ. ನದಾಫ್‌, ಸಲೀಂ ದಡೇದ, ಬಿ.ಎಸ್‌ ಇಜೇರಿ, ಆರ್‌.ಎಸ್‌. ವಂದಗನೂರ, ಜಿ.ಡಿ. ಆಸಂಗಿ, ಪಿಡಿಓ ಬಿಳೇಕುದರಿ, ಶಶಿ ಭಾವಿಕಟ್ಟಿ, ಸುರೇಶ ಹುರಕಡ್ಲಿ, ಎನ್‌.ಬಿ. ದಾಸರ, ಬಿ. ಹನುಮಂತಪ್ಪ, ಎಸ್‌.ಸಿ. ರಾಠೊಡ, ಆರ್‌.ಎಸ್‌. ಕಮತ, ಕೆ.ವಿ. ಕುಕನೂರ ಮೊದಲಾದವರಿದ್ದರು. ನಂತರ ಮಕ್ಕಳ ಕಲಿಕಾ ಪ್ರಗತಿಯನ್ನು ಪರಿಶೀಲಿಸಿ ಸಲಹೆಯನ್ನು ನೀಡಿದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.