ಶಿವಮೊಗ್ಗ-ಮೈಸೂರು ರೈಲು ವೇಳೆ ಬದಲಾವಣೆ
ರೈಲ್ವೆ ಅಧಿಕಾರಿಗಳೊಂದಿಗೆ ಸಭೆ
Team Udayavani, Jan 23, 2021, 7:05 PM IST
ಶಿವಮೊಗ್ಗ: ಪ್ರತಿದಿನ ರಾತ್ರಿ ಶಿವಮೊಗ್ಗದಿಂದ ಮೈಸೂರಿಗೆ ಹೊರಡುವ ರೈಲು ಬೆಳಗಿನ ಜಾವ 3.50ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ತಲುಪುತ್ತಿತ್ತು. ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಮಯ ಬದಲಾವಣೆ ಮಾಡಿದ್ದು, ಜ.31ರಿಂದ ಬೆಳಗ್ಗೆ 5ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ. ಇದರಿಂದಾಗಿ ಪ್ರಯಾಣಿಕರು ತಮ್ಮ ನಿರೀಕ್ಷಿತ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಲು ಸಾಧ್ಯವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶುಕ್ರವಾರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ರೈಲ್ವೆ ಅಧಿಕಾರಿಗಳೊಂದಿಗೆ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ವೆà ಪ್ರಗತಿಯ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದ ಅವರು, ಪ್ರತಿನಿತ್ಯ ಯಶವಂತಪುರ-ಶಿವಮೊಗ್ಗ ಹಾಗೂ ಶಿವಮೊಗ್ಗ ಯಶವಂತಪುರದವರೆಗೆ ಚಲಿಸುತ್ತಿದ್ದ ಜನಶತಾಬ್ಧಿ ರೈಲಿನ ಸೇವೆಯನ್ನು ಮೆಜಸ್ಟಿಕ್‌ವರೆಗೆ ವಿಸ್ತರಿಸಲಾಗಿದೆ.
ಪ್ರತಿದಿನ ಬೆಳಗ್ಗೆ 5.30ಕ್ಕೆ ಹೊರಡುತ್ತಿದ್ದ ಈ ರೈಲು ಮುಂದಿನ ದಿನಗಳಲ್ಲಿ ಬೆಳಗ್ಗೆ 5.15ಕ್ಕೆ ಹೊರಟು ಬೆಳಗ್ಗೆ 9.50ಕ್ಕೆ ಮೆಜಸ್ಟಿಕ್ ತಲುಪಲಿದೆ. ಇದರಿಂದಾಗಿ ವೈಯಕ್ತಿಕ ಹಾಗೂ ಕಚೇರಿ ಕೆಲಸಗಳಿಗಾಗಿ ಒಂದೇ ದಿನದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗಿ ಬರುವವರಿಗೆ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ : ಹೈಕೋರ್ಟ್‌ನಲ್ಲಿ ಸಿಕ್ತು ಲೆಕ್ಕ ಶಾಸ್ತ್ರಕ್ಕೆ ಶೇ. 100 ಅಂಕ!
ಅಲ್ಲದೆ ಶಿವಮೊಗ್ಗ-ಚೆನ್ನೈ, ಶಿವಮೊಗ್ಗ-ರೇಣಿಗುಂಟ ರೈಲು ಮಾರ್ಗವನ್ನು ಅಲ್ಪ ಪ್ರಮಾಣದಲ್ಲಿ ಮಾರ್ಪಡಿಸಿ, ಸಮಯ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಇದರಿಂದಾಗಿ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ಹಾಗೂ ಚೆನ್ನೈಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಈ ರೈಲು ಮಾರ್ಗದ ತಡೆ ಮಾಡಲಾಗುವುದಿಲ್ಲ ಎಂದ ಅವರು, ಅರಸಾಳು ನಿಲ್ದಾಣವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಐತಿಹಾಸಿಕವೆನ್ನುವಂತೆ ರೂಪಿಸಲಾಗಿರುವ ಈ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ರೈಲ್ವೆ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಗಳ ನಿರ್ಮಾಣ ಕಾರ್ಯಕ್ಕೆ ಸಂಬಂಸಿಧಿದಂತೆ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಚಾಲನೆ ನೀಡುವುದಾಗಿ ರೈಲ್ವೆ ಜನರಲ್ ಮ್ಯಾನೇಜರ್ ಎ.ಕೆ. ಸಿಂಗ್ ಅವರು ಭರವಸೆ ನೀಡಿದ್ದಾರೆ. 150- 200 ಕೋಟಿ ರೂ.ಗಳ ವೆಚ್ಚದಲ್ಲಿ ಸಾಗರ ಮತ್ತು ತಾಳಗುಪ್ಪ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ನೆರವಿನಿಂದ ಮೆಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾ.31ರೊಳಗಾಗಿ 4 ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಮತ್ತು ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಚಾಲನೆ ಹಾಗೂ ಶಿವಮೊಗ್ಗ- ಶಿಕಾರಿಪುರ- ರಾಣೆಬೆನ್ನೂರು ಹೊಸ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಈ ಕಾಮಗಾರಿಗಳ ಚಾಲನೆಗೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಆಹ್ವಾನಿಸಲಾಗುವುದು ಎಂದರು.
ತಾಳಗುಪ್ಪ- ಹುಬ್ಬಳ್ಳಿ ಹೊಸ ರೈಲು ಮಾರ್ಗದ ಸರ್ವೆ ಕಾರ್ಯಕ್ಕೆ ಸರ್ಕಾರ ಈಗಾಗಲೇ 15ಲಕ್ಷ ರೂ. ಗಳನ್ನು ಮಂಜೂರು ಮಾಡಿದೆ. ಸಮೀಕ್ಷೆ ವರದಿಯ ನಂತರ ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು. ಸಭೆಯಲ್ಲಿ ಹುಬ್ಬಳ್ಳಿ ರೈಲ್ವೆ ಜನರಲ್ ಮ್ಯಾನೇಜರ್ ಎ.ಕೆ. ಸಿಂಗ್, ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್‌ವಾಲ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಹುಬ್ಬಳ್ಳಿ ರೈಲ್ವೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ವಿಜಯ, ವಿಭಾಗೀಯ ಹಿರಿಯ ವಾಣಿಜ್ಯ ಅ ಧಿಕಾರಿ ಡಾ| ಮಂಜುನಾಥ್, ವಿಭಾಗೀಯ ಹಿರಿಯ ಅಧಿಕಾರಿಗಳಾದ ಡಾ| ಸತೀಶ್, ಎಚ್.ಎಸ್. ವರ್ಮಾ, ಅನಿಲ್ ಪವಿತ್ರನ್, ರೂಪಾ ಸಾವಿತ್ರನ್, ವಿಫುಲ್ ಜೈನ್, ರವಿಕುಮಾರ್, ರಾಜಶೇಖರ್, ಸರೋಜ ಸೇರಿದಂತೆ ರೈಲ್ವೆಯ ವಿವಿಧ ಶ್ರೇಣಿಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ : ರೈತರ ಪರೇಡ್ ಲಾಂಛನ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.