ಆರೋಗ್ಯವಂತ ಮರಕ್ಕೇ ಕೊಡಲಿ ಏಟು!


Team Udayavani, Sep 14, 2020, 6:34 PM IST

ಆರೋಗ್ಯವಂತ ಮರಕ್ಕೇ ಕೊಡಲಿ ಏಟು!

ಸಾಗರ: ಅರಣ್ಯ ಇಲಾಖೆ ಅವಕೃಪೆಯಿಂದ ನೆಲ ಕಚ್ಚಿದ ರಂಜಲು ಮರ.

ಸಾಗರ: ರಸ್ತೆಯಲ್ಲಿ ಸಂಚರಿಸುವ ಜನ, ವಾಹನಗಳಿಗೆ ಅಪಾಯ ಆಗುತ್ತದೆ ಎಂಬ ಸೂಚನೆ ಸಿಕ್ಕ ತಕ್ಷಣ ಬೃಹತ್‌ ಮರಗಳನ್ನು ಕಡಿಯುವ ಪ್ರಕ್ರಿಯೆಗೆ ಚಾಲನೆ ನೀಡುವಅರಣ್ಯ ಇಲಾಖೆ, ರಸ್ತೆ ಪಕ್ಕದಲ್ಲಿರುವ ಒಣ ಮರಗಳನ್ನು ಕಟಾವು ಮಾಡುವಂತೆ ಕೋರಿ ಹತ್ತಾರು ಅರ್ಜಿ ಸಲ್ಲಿಸಿದರೂ ಗಮನ ಹರಿಸದಿರುವುದು ಕಲ್ಮನೆ ಗ್ರಾಪಂ ವ್ಯಾಪ್ತಿಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಸಾಗರದಿಂದ ಸಿಗಂದೂರು ಕಡೆಗೆ ಪಯಣಿಸಲಿರುವ ಆವಿನಹಳ್ಳಿ ರಸ್ತೆ ಸದಾಜನ, ವಾಹನಗಳಿಂದ ಕೂಡಿರುತ್ತದೆ. ಅಲ್ಲಿ ಒಣಗಿ ಬೀಳುವ ಮರಗಳಿಂದ ಅಪಾಯ ಇದ್ದೇ ಇದೆ. ಈ ಹಿಂದೆ ಹಲವು ಸಂದರ್ಭಗಳಲ್ಲಿ ಇಂತಹ ಘಟನೆ ನಡೆದಿದೆ. ಈ ಮಾರ್ಗದಲ್ಲಿ ಚಿಪ್ಪಳಿ ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಹಾಗೂ ಸಾರಿಗೆ ಇಲಾಖೆ ಕಚೇರಿಗೆ ಹೋಗುವ ರಸ್ತೆ ಸೇರುವಲ್ಲಿ ಒಣ ಮರಗಳು ಹತ್ತಾರು ತಿಂಗಳಿನಿಂದ ರಸ್ತೆ ಪಕ್ಕದಲ್ಲಿವೆ. ಅದನ್ನು ತೆರವುಗೊಳಿಸುವ ವಿಚಾರದಲ್ಲಿ ಸಾರ್ವಜನಿಕರು ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಆ ಮರಗಳ ವಿಚಾರದಲ್ಲಿ ಅರಣ್ಯ ಇಲಾಖೆ ಸ್ವಲ್ಪವೂ ತಲೆಕೆಡಿಸಿಕೊಂಡಂತಿಲ್ಲ.

ಈ ಹಿಂದೆ ಇದೇ ಆರ್‌ಟಿಒ ಅಧಿಕಾರಿಗಳ ಮೇಲೆ ಈಗ ಒಣಗಿ ನಿಂತಿರುವ ಮರದ ಸಮೀಪವೇ ಸಾಲು ಮರದ ರೆಂಬೆ ಆರ್‌ ಟಿಒ ಜೀಪಿನ ಮೇಲೆ ಬಿದ್ದು ಇಲಾಖೆಯ ಹಲವರಿಗೆ ಗಾಯಗಳಾಗಿತ್ತು. ಒಣ ಮಾವಿನ ಮರದಿಂದ ಅನತಿ ದೂರದಲ್ಲಿ ಇನ್ನೊಂದು ಒಣ ಮರ 2 ವರ್ಷಗಳ ಹಿಂದೆ ಬೈಕ್‌ ಮೇಲೆ ಬಿದ್ದು ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇತ್ತ ಇದೇ ರಸ್ತೆಯಲ್ಲಿನ ಪೆಟ್ರೋಲ್‌ಬಂಕ್‌ ಎದುರು ಇರುವ ರಂಜಲು ಜಾತಿಯ ಆರೋಗ್ಯವಂತ ಮರದ ಮೇಲೆ ಅರಣ್ಯ ಇಲಾಖೆ ಕಣ್ಣುಬಿದ್ದಿದೆ. ಇದು ಅಕ್ಕಪಕ್ಕದ ಮನೆಗಳಿಗೆ ಅಪಾಯ ಒಡ್ಡಲಿದೆ ಎಂಬ ಅರ್ಜಿ ರೂಪಿಸಿ, ಮರವನ್ನು ಕಡಿತಲೆಗೆ ಯೋಜನೆ ರೂಪಿಸಲಾಗಿದೆ. ಯಾರ ಗಮನಕ್ಕೂ ಬಾರದಂತೆ ಕಡಿತಲೆಗೆ ಅನುಮತಿಸಿ, ಕಟಾವಿಗೆ ಹರಾಜು ಹಾಕಲಾಗಿದೆ ಎಂದು ಸಾಗರದ ಪರಿಸರಾಸಕ್ತರು ದೂರಿದ್ದಾರೆ.

ಬೆಳ್ಳಂಬೆಳಗ್ಗೆ ಜನ ಕಣ್ಣುಜ್ಜಿಕೊಂಡು ಮನೆಯಿಂದ ಹೊರಬೀಳುವ ಮುನ್ನವೇ ಯಂತ್ರಗಳು ಅದನ್ನು ಕತ್ತರಿಸಿಹಾಕಿದ್ದವು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರ ವ್ಯಕ್ತಪಡಿಸಿರುವ ಪರಿಸರ ಪ್ರೇಮಿ, ಸ್ವಾನ್‌ ಆ್ಯಂಡ್‌ ಮ್ಯಾನ್‌ ಸಂಸ್ಥೆಯ ಅಖೀಲೇಶ್‌ ಚಿಪ್ಳಿ, ಜನ ಅರಣ್ಯ ಇಲಾಖೆಯವರನ್ನು ದೂರುವುದಕ್ಕೂ, ಅವರು ಮಾಡುವುದಕ್ಕೂ ಸರಿಯಾಗಿದೆ. ಸಾಗರದಿಂದ ಆವಿನಹಳ್ಳಿಗೆ ಹೋಗುವ ರಸ್ತೆಯಲ್ಲಿ ಕಳೆದ ಐದು ವರ್ಷಗಳಿಂದ ಒಣಗಿದ ಮಾವಿನ ಮರ ರಸ್ತೆಗೆ ವಾಲಿ ನಿಂತಿದೆ. ಅದನ್ನು ಮುಟ್ಟದ ಅರಣ್ಯ ಇಲಾಖೆ ಇಲ್ಲಿಂದ ಒಂದೈವತ್ತು ಮೀಟರ್‌ ಸಾಗರದ ಕಡೆಗೆ ಹೋದರೆ ಸಿಗುವ 30, 40 ವರ್ಷದ, ಹಣ್ಣು ಬಿಡುತ್ತಿದ್ದ ರಂಜಲ ಮರವನ್ನು ಕಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ ನಾವು ಗುತ್ತಿಗೆದಾರರಿಗೆ ಪರಿಸರ ವ್ಯಾಧಿಗಳಾಗುತ್ತೇವೆ ಎಂದು ವಿಷಯ ಪ್ರಸ್ತಾಪಿಸಿದ್ದಾರೆ.

ಅರಣ್ಯ ಇಲಾಖೆ ಮರ ಕಡಿತಲೆಯ ವಿಚಾರದಲ್ಲಿ ಪಾರದರ್ಶಕತೆ ಯನ್ನು ಕಾಪಾಡ ದಿರುವುದೇ ಆ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ರಾಜ್ಯ ಸರ್ಕಾರ ಅರಣ್ಯ ಇಲಾಖೆಯನ್ನು ರದ್ದುಗೊಳಿಸಿ ಜನರಿಗೇ ಮರಗಳ ರಕ್ಷಣೆಯ ಹೊಣೆ ವಹಿಸಿದರೇ ಹೆಚ್ಚಿನ ಅರಣ್ಯ ಉಳಿಯುತ್ತದೆ ಎನಿಸುತ್ತದೆ! ಜಯಪ್ರಕಾಶ್‌ ಗೋಳಿಕೊಪ್ಪ, ಪರಿಸರ ಕಾರ್ಯಕರ್ತ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.