ಸಂಪದ್ಭರಿತ ದೇಶ ನಿರ್ಮಾಣಕ್ಕೆ ಒಟ್ಟಾಗಿ ಹೆಜ್ಜೆ ಇಡಿ
Team Udayavani, Aug 16, 2021, 5:15 PM IST
ಶಿವಮೊಗ್ಗ: ಭಾರತವನ್ನು ಬ್ರಿಟಿಷರು, ಪೋರ್ಚುಗೀಸರು, ಡಚ್ಚರು ಸೇರಿದಂತೆ ಅನೇಕರು ಆಳಿ ಇಲ್ಲಿನ ಸಂಪನ್ಮೂಲಗಳನ್ನು ಹೊತ್ತೂಯ್ದಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಅನೇಕರು ಹೋರಾಡಿ ಈ ದೇಶವನ್ನು ಕಾಪಾಡಿದ್ದಾರೆ. ಸ್ವಾತಂತ್ರಾ ನಂತರ ದೇಶ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಅವನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸಿ ಸಂಪದ್ಭರಿತ ದೇಶವಾಗಿ ನಿರ್ಮಿಸುವತ್ತ ಎಲ್ಲರೂ ಹೆಜ್ಜೆ ಇಡೋಣ ಎಂದು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ಕುವೆಂಪು ವಿವಿಯಲ್ಲಿ ಧ್ವಜಾರೋಹಣದ ನಂತರ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಇದನ್ನೂ ಓದಿ : ಅಮೆರಿಕ ಇತಿಹಾಸದ ಅತೀ ದೊಡ್ಡ ಸೋಲು: ತಾಲಿಬಾನ್ ಕಮಾಂಡರ್ ಘನಿ ಅಫ್ಘಾನ್ ಅಧ್ಯಕ್ಷ?
ಭಾರತ ಮೊದಲು ಆಹಾರ-ಬೇಳೆಕಾಳುಗಳಿಗಾಗಿ ಬೇರೆ ದೇಶಗಳನ್ನು ಆಶ್ರಯಿಸಿತ್ತು. ಹಸಿರು ಕ್ರಾಂತಿಯಲ್ಲಿ ಸಾಧನೆ ಮಾಡಿದ ದೇಶ ಇಂದು ಆಹಾರೋತ್ಪನ್ನಗಳನ್ನು ರಫ್ತು ಮಾಡುತ್ತಿದೆ. ದೇಶವು ಸವಾಲುಗಳನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸುವತ್ತ ಮುನ್ನಡೆಯುತ್ತಲಿದೆ. ಆದರೆ ಸಮೃದ್ಧಿ ತಲುಪುವ ಹಾದಿಯತ್ತ ಮತ್ತಷ್ಟು ಬದ್ಧತೆಯಿಂದ, ಯೋಜಿತವಾಗಿ ಹೆಜ್ಜೆಯಿಡುವ ಪಣ ತೊಡಬೇಕಾಗಿದೆ ಎಂದರು.
ಸ್ವಾತಂತ್ರ ದೊರೆತ ಸಂದರ್ಭದಲ್ಲಿ ಅಲ್ಪಪ್ರಮಾಣದ ಅಕ್ಷರಸ್ಥರು, ಕೆಲವೇ ಶಾಲೆ-ಕಾಲೇಜುಗಳು ಇದ್ದವು. ಇಂದು ಪ್ರತಿ ಜಿಲ್ಲೆಗೊಂದು ವಿವಿ-ಮೆಡಿಕಲ್ ಕಾಲೇಜುಗಳನ್ನು ನಾವು ರೂಪಿಸಿದ್ದೇವೆ. ಅದನ್ನು ಮತ್ತಷ್ಟು ಉಜ್ವಲಮಟ್ಟಕ್ಕೆ ಒಯ್ದು ಎಲ್ಲರನ್ನು ಸುಶಿಕ್ಷಿತರನ್ನಾಗಿ, ಉದ್ಯೋಗಸ್ಥರನ್ನಾಗಿ, ಸುಪ್ರಜೆಗಳನ್ನಾಗಿ ರೂಪಿಸಿ ಸದೃಢ ಭಾರತ ನಿರ್ಮಿಸಿಸಬೇಕಿದೆ ಎಂದರು.
ಧ್ವಜಾರೋಹಣ ನೆರವೇರಿಸಿದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಮಾತನಾಡಿ, ಸ್ವಾತಂತ್ರ್ಯ ಪಡೆಯಲು ಹೋರಾಡಿದ ಗಾಂಧೀಜಿ, ನೆಹರೂ, ಅಂಬೇಡ್ಕರ್‌ರಷ್ಟೇ ಪ್ರಮುಖವಾಗಿ ಸ್ಥಳೀಯ ನಾಯಕರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ, ಈಸೂರು, ಶಿವಪುರಗಳ ಸ್ವಾತಂತ್ರ ಯೋಧರನ್ನು ನೆನೆದು, ಗೌರವಿಸಬೇಕಿದೆ. ಭಾರತ ಸ್ವಾತಂತ್ರÂದ ಅಮೃತ ಮಹೋತ್ಸವದಡಿ ವರ್ಷವಿಡೀ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈಸೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ಉನ್ನತ ಶಿಕ್ಷಣ ಪರಿಷತ್ ಕುವೆಂಪು ವಿವಿಗೆ ಜವಾಬ್ದಾರಿ ವಹಿಸಿದೆ ಎಂದರು.
ಭಾರತ ಸೇನೆಯಲ್ಲಿ 15 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಯೋಧರಾದ ಬಿ ವೀರಸ್ವಾಮಿ ನಾಯ್ಕ , ರಾಜಶೇಖರ್ ನಾಯ್ಕ , ದಯಾನಂದ್ ಎಂ. ನಾಯ್ಕ , ಶಿವಾನಂದ ಮೂರ್ತಿ ನಾಯ್ಕ , ದೇವಸಗಾಯಂ ಅವರುಗಳನ್ನು ಸನ್ಮಾನಿಸಲಾಯಿತು. ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭದಲ್ಲಿ ವಿವಿ ಕುಲಸಚಿವೆ ಅನುರಾಧ ಜಿ, ಪರೀಕ್ಷಾಂಗ ಕುಲಸಚಿವ ಪ್ರೊ| ಸಿ.ಎಂ. ತ್ಯಾಗರಾಜ್, ಹಣಕಾಸು ಅಧಿ ಕಾರಿ ಎಚ್. ರಾಮಕೃಷ್ಣ, ಡಾ| ವಿರೂಪಾಕ್ಷ, ಡಾ| ಪರಿಸರ ನಾಗರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಯ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ಇದನ್ನೂ ಓದಿ : ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.