ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ
Team Udayavani, Aug 16, 2021, 9:53 AM IST
ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು.
ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ವಾಜಪೇಯಿಯಂತಹ ನಾಯಕರ ಬಗ್ಗೆ ಮಾತನಾಡುವುದು, ಯಾವುದೇ ಪಕ್ಷದವರಿಗೆ ಶೋಭೆ ತರುವುದಿಲ್ಲ ಎಂದರು.
ವರಿಷ್ಠರು ನಿರ್ಧರಿಸುತ್ತಾರೆ: ಯಡಿಯೂರಪ್ಪ ಅವರು ಹಿಂದೆ ರಾಜ್ಯದಲ್ಲಿ ಹೋರಾಟ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು, ಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕೆಂ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ರಾಘವೇಂದ್ರ ಅವರಾಗಲಿ, ನಾನಾಗಲಿ ಯಾವುದೇ ಸ್ಥಾನ ಗುರುತಿಸಿಕೊಂಡು ಕೆಲಸ ಮಾಡ್ತಿಲ್ಲ. ಮಾಡುತ್ತಿರುವ ಕೆಲಸವನ್ನು ಜನ ಗುರುತಿಸಬೇಕು. ನಾವಾಗಿಯೇ ಮಂತ್ರಿಯಾಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವಂತಹ ಪ್ರಶ್ನೆ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಯಾವುದೇ ಪ್ರಾದೇಶಿಕ ಪಕ್ಷವಲ್ಲ. ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಇದ್ದಾರೆ. ಯಾವಾಗ ಯಾವ ಸ್ಥಾನಮಾನ ಕೊಡಬೇಕು ಎಂಬುದನ್ನ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.
ಹಳೇ ಮೈಸೂರು ಭಾಗಕ್ಕೆ ಒತ್ತು: ರಾಜ್ಯದ ಉಪಾಧ್ಯಕ್ಷನಾಗಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರಿಗೆ ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕು ಎಂಬ ಅಪೇಕ್ಷೆ ಅವರಿಗೆ ಇದೆ. ಕೆ.ಆರ್.ಪೇಟೆ, ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಅಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಿದ್ದೆ. ಆ ಭಾಗದಲ್ಲಿ ಪಕ್ಷವನ್ನು ಇನ್ನು ಗಟ್ಟಿಗೊಳಿಸಲು ಅವಕಾಶ ಇದೆ ಎಂದರು.
ಇದನ್ನೂ ಓದಿ:ಸಂಸತ್‌ನಲ್ಲಿ ಅರ್ಥಪೂರ್ಣ ಚರ್ಚೆಗಳಿಲ್ಲ :ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ ವಿಷಾದ
ಯಾವುದೇ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ಬಿಜೆಪಿ 104, 110 ಸ್ಥಾನಕ್ಕೆ ಬಂದು ನಿಂತಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು ಎಂಬುದು ಯಡಿಯೂರಪ್ಪನವರ ಕನಸು. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಕನಸು ಸಹ ಅದೇ ಆಗಿದೆ. ಆ ಕನಸು ನನಸು ಆಗಬೇಕು ಅಂದರೆ ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಹೀಗಾಗಿಯೇ ಆ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು.
ತಮ್ಮ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರಯತ್ನಿಸಿದ ಅವರು, ಯತ್ನಾಳ್ ಹಿರಿಯರಿದ್ದಾರೆ. ನನ್ನ ಮೇಲೆ ಪ್ರೀತಿ ಜಾಸ್ತಿ ಅನಿಸುತ್ತೆ. ಹೀಗಾಗಿ ಅವರ ಹೇಳಿಕೆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಪ್ರಯತ್ನಿಸಿದ ವಿಜಯೇಂದ್ರ, ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ರಾಜ್ಯ ಮಟ್ಟದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಚರ್ಚೆ ನಡೆಯುತ್ತಿವೆ ಎಲ್ಲಿಯವರೆಗೆ ಹೋಗುತ್ತದೆ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.