ಕೇಂದ್ರದಿಂದ ರೈತರಿಗೆ ಅನ್ಯಾಯ: ತೀನ


Team Udayavani, Jan 15, 2021, 3:52 PM IST

Unfair to the farmers from the center

ಶಿವಮೊಗ್ಗ: ಅಡಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ತೀ.ನ. ಶ್ರೀನಿವಾಸ್‌ ಹೇಳಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು 2018 ರಲ್ಲಿ ತೀರ್ಥಹಳ್ಳಿಗೆ ಬಂದಿದ್ದಾಗ ಅಡಕೆ ಬೆಳೆಗಾರರ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ, ಈಗ ಅವರು ಕೊಟ್ಟ ಮಾತನ್ನೇ ಮರೆತಿದ್ದಾರೆ ಎಂದರು.

ಕಳೆದ 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಅಡಕೆ ಬೆಳೆಗಾರರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಕರ್ನಾಟಕದಲ್ಲಿ ಸುಮಾರು 15 ಸಂಸದರು, 100 ಶಾಸಕರು ಅಡಕೆ ಬೆಳೆಗಾರರಿದ್ದಾರೆ. ಇವರ್ಯಾರು ಕೂಡ ಅಡಕೆ ಬೆಳೆಗಾರರ ಹಿತ ಕಾಯುವಲ್ಲಿ ಮುಂದೆ ಬಂದಿಲ್ಲ ಎಂದು ದೂರಿದರು. ಈಗ ಅಮಿತ್‌ ಶಾ ಅವರು ಶಿವಮೊಗ್ಗ ಜಿಲ್ಲೆಗೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಬಿಜೆಪಿ ನಾಯಕರು ಅವರು ತೀರ್ಥಹಳ್ಳಿಗೆ ಬಂದಿದ್ದಾಗ ಅಡಕೆ ಬೆಳೆಗಾರರ ರಕ್ಷಣೆ ಮಾಡುವುದಾಗಿ ಮಾತು ಕೊಟ್ಟಿದ್ದನ್ನು ನೆನಪಿಸಿ ತಕ್ಷಣವೇ ಸುಪ್ರೀಂ ಕೋರ್ಟ್‌ ಗೆ ಮನವಿ ಮಾಡಿ ಸಂಶೋಧನೆಗೆ ಸಮಿತಿ ರಚಿಸುವಂತೆ ಅಡಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಕೋರ್ಟ್‌ ಗೆ ಮನದಟ್ಟು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಸಂಭ್ರಮ-ಸಡಗರದ ಸಂಕ್ರಾಂತಿ

ಕರ್ನಾಟಕದಲ್ಲಿ ಅಡಕೆ ಸಂಶೋಧನೆಗಾಗಿ ಎಂ.ಎಸ್‌. ರಾಮಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಹಿಸಲಾಗಿದೆ. ಆದರೆ, ಈ ಸಂಶೋಧನೆಯನ್ನು ಸುಪ್ರೀಂ ಕೋರ್ಟ್‌ ಒಪ್ಪುವುದಿಲ್ಲ. ಸುಪ್ರೀಂಕೋರ್ಟ್‌ ನಿಂದಲೇ ನೇರವಾಗಿ ಸಮಿತಿ ರಚಿಸಬೇಕು, ಈ ಹಿನ್ನಲೆಯಲ್ಲಿ ಸಂಸದ ರಾಘವೇಂದ್ರ ಮತ್ತು ಇತರ ಸಂಸದರು ಒತ್ತಡ ತರಬೇಕು. ಅಮಿತ್‌ ಶಾ ಅವರಿಗೆ ಇದನ್ನು ವಿವರಿಸಿ ತಿಳಿಸಬೇಕು ಎಂದು ಆಗ್ರಹಿಸಿದರು. ಕಸ್ತೂರಿ ರಂಗನ್‌ ವರದಿ ಜಾರಿಯಾಗಬಾರದು. ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಬಗೆಹರಿಸಬೇಕು. ವಿಐಎಸ್‌ ಎಲ್‌, ಎಂಪಿಎಂ ಉಳಿಯಬೇಕು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದು ಹೇಳಿದರು.

ಬಿ.ವೈ. ರಾಘವೇಂದ್ರ ಅವರು ಇತ್ತೀಚೆಗೆ ಬುರುಡೆ ಬಿಡುವುದನ್ನು ಕಲಿತಿದ್ದಾರೆ. ರೈತರ ಪರ ಅವರ ಮಾತುಗಳು ಕೇವಲ ಬೂಟಾಟಿಕೆ. ಅವರ ಡೋಂಗಿ ಮಾತುಗಳಿಗೆ ಅಡಕೆ ಬೆಳೆಗಾರರು, ಸಾಗುವಳಿದಾರರು ಮರುಳಾಗುತ್ತಿದ್ದಾರೆ ಅಷ್ಟೆ. ಸಾಗುವಳಿದಾರರ ಪರವಾಗಿ ಹೋರಾಟನಡೆಸಿದ್ದ ಇವರು ಇಂದು ಬಾಯಿಗೆ ಬೀಗ  ಹಾಕಿಕೊಂಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ರವಿ ಜಂಬಗಾರು, ಸುಭಾಷ್‌ ಇದ್ದರು.

ಟಾಪ್ ನ್ಯೂಸ್

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Jammu Kashmir: Two terrorists hit in an encounter

Jammu Kashmir: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

13-anadapura

Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ

Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.