Agriculture ವಿವಿಯಿಂದ ರೈತರಿಗೆ ಅನಗತ್ಯ ತೊಂದರೆ; ಇರುವಕ್ಕಿ ಗ್ರಾಮಸ್ಥರ ಪ್ರತಿಭಟನೆ
Team Udayavani, Jan 19, 2024, 6:36 PM IST
ಸಾಗರ: ತಾಲೂಕಿನ ಇರುವಕ್ಕಿ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ರೈತರ ಜಮೀನು ಹೊರತುಪಡಿಸಿ, ಉಳಿದ ಜಮೀನು ಕೃಷಿ ವಿವಿಗೆ ಡಿನೋಟಿಫಿಕೇಶನ್ ಮಾಡಿ ಕೊಡಬೇಕು. ಸ್ಥಳೀಯ ರೈತರಿಗೆ ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಗುರುವಾರ ಇರುವಕ್ಕಿ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ, ಇರುವಕ್ಕಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ರೈತರು ನೂರಾರು ವರ್ಷಗಳಿಂದ ಕೃಷಿ ಇನ್ನಿತರೆ ಚಟುವಟಿಕೆ ಮಾಡಿಕೊಂಡು ಬರುತ್ತಿದ್ದಾರೆ. ಈಚೆಗೆ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು ಸುಮಾರು 772 ಎಕರೆ ಜಾಗವನ್ನು ವಿವಿಗೆ ಮಂಜೂರು ಮಾಡಲಾಗಿದೆ. ವಿವಿಗೆ ಮಂಜೂರು ಮಾಡಿರುವ ಜಾಗದಲ್ಲಿ ರೈತರ ಜಮೀನು, ಮನೆ, ಕೊಟ್ಟಿಗೆ ಬರುತ್ತಿದೆ. ವಿಶ್ವವಿದ್ಯಾಲಯ ಸುತ್ತಲೂ ಬೇಲಿ ಹಾಕಿ ತನ್ನ ಜಮೀನು ಬಂದೋಬಸ್ತು ಮಾಡಲು ಮುಂದಾಗಿದ್ದು ರೈತರ ಓಡಾಟದ ರಸ್ತೆಯನ್ನು ಮುಚ್ಚಲಾಗಿದೆ. ಕೃಷಿ ವಿಶ್ವವಿದ್ಯಾಲಯ ಬಂದಿದ್ದು ಒಳ್ಳೆಯದು. ಆದರೆ ರೈತರಿಗೆ ಅನಗತ್ಯ ತೊಂದರೆ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ರೈತರ ಮನೆ ಜಮೀನು ಕೆರೆಕಟ್ಟೆಗಳಿವೆ. ರೈತರು ಕೆರೆ ಅಭಿವೃದ್ಧಿ ಮಾಡಿದ್ದು ಅದು ಸಹ ವಿಶ್ವವಿದ್ಯಾಲಯ ಬೌಂಡರಿಯಲ್ಲಿ ಸೇರಿದೆ. ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬಾರದು. ರೈತರ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದು ಶಾಸಕರು ಜಿಲ್ಲಾಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬೇಡಿ ಎಂದು ಸೂಚನೆ ನೀಡಿದ್ದಾರೆ. ಸರ್ಕಾರ ಕೃಷಿ ವಿಶ್ವವಿದ್ಯಾಲಯಕ್ಕೆ ಭೂಮಿ ಡಿನೋಟಿಫಿಕೇಶನ್ ಮಾಡಿಕೊಡುವಾಗ ರೈತರ ಜಮೀನು ಬಿಟ್ಟು ಮಂಜೂರಾತಿ ಕೊಡಬೇಕು ಎಂದರು.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಅರುಣ್ ಕರಡಿಮನೆ, ಉಮೇಶ್ ಕುಮಾರ್, ಸೋಮಶೇಖರ್, ಪ್ರವೀಣ್ ಕೆ.ವಿ., ಶಂಕರಪ್ಪ, ನವೀನ್, ತಾರಾಮೂರ್ತಿ, ಆನಂದ ಭೀಮನೇರಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.