ಕುವೆಂಪು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಆರಂಭ


Team Udayavani, Nov 4, 2020, 6:45 PM IST

ಕುವೆಂಪು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಆರಂಭ

ಶಿವಮೊಗ್ಗ: ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಕಾವ್ಯಪ್ರತಿಭೆ, ಲೋಕದರ್ಶನ ಮತ್ತು ಮೌಲ್ಯಾದರ್ಶಗಳ ಕುರಿತು ಹೆಚ್ಚಿನ ಸಂಶೋಧನೆ ಕೈಗೊಳ್ಳುವ ನಿಟ್ಟಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಪ್ರಾರಂಭಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಪ್ರೊ. ಎಸ್‌. ಪಿ. ಹಿರೇಮಠ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ಪ್ರತಿನಿ ಧಿಗಳು ಮತ್ತು ಕೆಲವು ಸಂಘಟನೆಗಳು ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ್ದವು. ಈ ಕುರಿತು ಸಿಂಡಿಕೇಟ್‌ನಲ್ಲಿ ಚರ್ಚಿಸಿ ಅನುಮೋದನೆ ಪಡೆದು ವಿವಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಪ್ರಾರಂಭ ಮಾಡಲಾಗಿದ್ದು, ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕನ್ನಡ ಭಾರತಿಯ ಪ್ರಾಧ್ಯಾಪಕ ಪ್ರೊ. ಜಿ ಪ್ರಶಾಂತ್‌ ನಾಯಕ ಮಾತನಾಡಿ, ದಾರ್ಶನಿಕರ ಜಯಂತಿಗಳು ಕೇವಲ ಆಯಾ ಸಮುದಾಯಗಳಿಗೆ ಸೀಮಿತವಾಗದೆ, ಸಾರ್ವತ್ರಿಕವಾಗಿ ಆಚರಣೆಗೊಳ್ಳಬೇಕು. ವಾಲ್ಮೀಕಿ,ಬುದ್ಧ, ಬಸವರಂಥಹ ಮಹಾನ್‌ ವ್ಯಕ್ತಿಗಳು ಯಾವುದೇ ಒಂದು ಸಮುದಾಯದ ಸ್ವತ್ತಲ್ಲ. ಅವರು ಎಲ್ಲ ಕಾಲಕ್ಕೂ ಎಲ್ಲ ಸಮುದಾಯಗಳಿಗೂ ಸಲ್ಲುವ ವಿಚಾರಧಾರೆಯನ್ನು ಪ್ರತಿಪಾದಿಸಿದ ಶ್ರೇಷ್ಠ ಮಾನವತಾವಾದಿಗಳು. ಹೀಗಾಗಿ, ವಾಲ್ಮೀಕಿಯನ್ನೊಳಗೊಂಡು ಎಲ್ಲ ಶ್ರೇಷ್ಠ ದಾರ್ಶನಿಕರ ಮೌಲ್ಯಾದರ್ಶಗಳು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಸಾರ್ವತ್ರಿಕವಾಗಿರಬೇಕು ಎಂದರು.

ಭಾರತಕ್ಕೆ ಸಾವಿರಾರು ದಾರ್ಶನಿಕರ ಪರಂಪರೆಯಿದೆ. ಜ್ಞಾನ ಮೇಲ್ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಕಾಲಘಟ್ಟದಲ್ಲಿ ಮೊದಲ ಮಹಾಕಾವ್ಯ ಬರೆಯಲು ವಾಲ್ಮೀಕಿ ಅವರಂಥಹ ಕೆಳಸಮುದಾಯದ ಕವಿಯೇ ಬರಬೇಕಾಯಿತು.ಅಕ್ಷರ ಜ್ಞಾನಕ್ಕಿಂತ ಲೋಕಜ್ಞಾನದೊಡ್ಡದು. ವಾಲ್ಮೀಕಿ ಲೋಕಜ್ಞಾನದ ಪ್ರತೀಕ. ಅವರ ಕಾವ್ಯ ಜೀವಂತವಾಗಿರುವುದು ಅಕ್ಷರಗಳಿಂದಲ್ಲ, ಲೋಕಜ್ಞಾನದಿಂದ ಎಂದರು.

ಕುಲಸಚಿವ ಪ್ರೊ. ಎಸ್‌. ಎಸ್‌. ಪಾಟೀಲ್‌, ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್‌ ಮಾತನಾಡಿದರು. ಹಣಕಾಸು ಅ ಧಿಕಾರಿ ಎಸ್‌. ರಾಮಕೃಷ್ಣ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಘಟಕದ ಸಂಚಾಲಕ ಡಾ| ಉದ್ದಗಟ್ಟಿ ವೆಂಕಟೇಶ್‌ ಸ್ವಾಗತಿಸಿದರು. ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.