![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 17, 2024, 4:34 PM IST
ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ
ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಅಕ್ಕಪಕ್ಕದ ಊರಿನ ಗ್ರಾಮದ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನಮ್ಮ ಊರಿಗೆ ಹೋಗುವ ರಸ್ತೆಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಮಳೆಗಾಲದಲ್ಲಿ ಗೊಚ್ಚೆಯ ಸಮಸ್ಯೆ ಹಾಗೂ ಬೇಸಿಗೆಯಲ್ಲಿ ಧೂಳಿನ ಸಮಸ್ಯೆ ಇದ್ದು ವರ್ಷಪೂರ್ತಿ ಈ ರಸ್ತೆಯ ಸಮಸ್ಯೆಯಿಂದ ಅನಾರೋಗ್ಯ ಕೂಡ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅದೇ ರೀತಿ ಅಕ್ಕಪಕ್ಕದ ಊರಿನ ರಸ್ತೆಯ ನಿರ್ಮಾಣವನ್ನು ನೋಡಿದರೆ ದ್ವೇಷದ ರಾಜಕಾರಣ ನಡೆಯುತ್ತಿರಬಹುದು ಎಂಬ ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು 40 ವರ್ಷಗಳ ರಸ್ತೆಯ ಬೇಡಿಕೆಯು ಬೇಡಿಕೆ ಆಗಿಯೇ ಉಳಿದಿದೆ. ಆದ್ದರಿಂದ ಈ ಊರಿಗೆ ಸೌಲಭ್ಯ ದೊರಕುವವರೆಗೆ ಮುಂದಿನ ಎಲ್ಲಾ ಚುನಾವಣೆಯನ್ನು ಊರಿನ ಗ್ರಾಮಸ್ಥರು ಬಹಿಷ್ಕಾರ ನಡೆಸುವುದಾಗಿ ತಿಳಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.