Shimoga; ರಾಹುಲ್ ಗಾಂಧಿಯ ಜಾತಿ ಯಾವುದು? ಮಿಶ್ರತಳಿನಾ, ಬೆರಕೆಯಾ?: ಕೆ.ಎಸ್. ಈಶ್ವರಪ್ಪ
Team Udayavani, Feb 13, 2024, 12:47 PM IST
ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು.
ಈ ವೇಳೆ ಮಾತನಾಡಿದ ಈಶ್ವರಪ್ಪ ಅವರು, ನರೇಂದ್ರ ಮೋದಿಯವರ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.
ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.