Shivamogga: ಅನುಮಾನಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಪೌಡರ್
ನಿಟ್ಟುಸಿರು ಬಿಟ್ಟ ಶಿವಮೊಗ್ಗದ ಜನತೆ
Team Udayavani, Nov 6, 2023, 8:12 AM IST
ಶಿವಮೊಗ್ಗ: ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಎರಡು ಅನುಮಾನಾಸ್ಪದ ಬಾಕ್ಸ್ ಗಳನ್ನು ಬಾಂಬ್ ನಿಷ್ಕ್ರೀಯ ದಳ ಸ್ಫೋಟಿಸುವ ಮೂಲಕ ತೆರೆದಿದ್ದು, ಯಾವುದೇ ಸ್ಫೋಟಕಗಳು ಇರಲಿಲ್ಲ ಬದಲಾಗಿ ಅನುಮಾನಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿರುವುದು ಉಪ್ಪು(table salt) ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಸಂಜೆ ಏಳು ಗಂಟೆಯಿಂದಲೇ ನಗರದಲ್ಲಿ ಮಳೆ ಶುರುವಾಗಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಮಧ್ಯರಾತ್ರಿ 2.40ರ ಸುಮಾರಿಗೆ ಒಂದು ಬಾಕ್ಸ್, 3.24 ಸುಮಾರಿಗೆ ಮತ್ತೊಂದು ಬಾಕ್ಸ್ ಬೀಗವನ್ನು ಸ್ಫೋಟಕ ಬಳಸಿ ತೆರೆಯಲಾಯಿತು. ಪ್ರತಿ ಬಾಕ್ಸ್ ನಲ್ಲೂ ಎರಡು ಚೀಲಗಳಲ್ಲಿ ಬಿಳಿ ಬಣ್ಣದ ಪೌಡರ್ ಮಾದರಿಯಲ್ಲಿ ಉಪ್ಪುನಂತಹ ವಸ್ತು ಇರುವುದು ತಿಳಿದು ಬಂದಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ನಮ್ಮ ಬಾಂಬ್ ನಿಷ್ಕ್ರೀಯ ದಳ ಯಶಸ್ವಿಯಾಗಿ ಬಾಕ್ಸ್ ಗಳನ್ನು ಓಪನ್ ಮಾಡಿದ್ದು ಅದರಲ್ಲಿ ಯಾವುದೇ ಸ್ಫೋಟಕ ಇರಲಿಲ್ಲ. ನಿರುಪಯುಕ್ತ ವಸ್ತು ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸತತ ಆರು ಗಂಟೆಗಳ ಕಾರ್ಯಾಚರಣೆ ಮೂಲಕ ಬಾಕ್ಸ್ ಓಪನ್ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ನಿಟ್ಟುಸಿರು ಬಿಟ್ಟರು.
ಎಂಎಲ್‌ಎ ಅನುಮಾನ:
ಬೀಗ ಒಡೆಯಲು ಸ್ಫೋಟಕ ಬಳಕೆ ಮಾಡಿದ್ದಾರೆ. ಒಂದೊಂದು ಟ್ರಂಕ್ ನಲ್ಲಿ ಎರಡೆರಡು ಬ್ಯಾಗ್ ಗಳಿವೆ. ಪೇಪರ್ ಹಾಕಿ ಕವರ್ ಮಾಡಿದ್ದಾರೆ. ಬಿಳಿ ಬಣ್ಣದ ಪೌಡರ್ ಪತ್ತೆಯಾಗಿದೆ. ವೈಟ್ ಪೌಡರ್ ಏಕೆ ಉಪಯೋಗಿಸುತ್ತಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.
ದೇವರು ದೊಡ್ಡವನು, ಈ ಹಂತದಲ್ಲಿ ತಡೆ ಹಿಡಿಯುವ ಪ್ರಯತ್ನ ಆಗಿದೆ. ಇದು ಯಾವ ಪೌಡರ್ ಎಂಬ ಬಗ್ಗೆ ರಿಪೋರ್ಟ್ ಬರಬೇಕು. ಇದು ಗಂಭೀರವಾದ ಸಂಗತಿ. ಬಹಳ ಭಾರ ಇದೆ. ಒಂದೊಂದು ಬ್ಯಾಗ್ ಬಹಳ ಭಾರ ಇದೆ. ಬಹಳ ಎಚ್ಚರಿಕೆ ವಹಿಸಬೇಕು. ಇದು ಮುಖಕ್ಕೆ ಹಚ್ಚುವ ಪೌಡರ್ ಅಂತೂ ಅಲ್ಲ. ರಾಜ್ಯ ಸರಕಾರ ಬಹಳ ಗಂಭೀರವಾಗಿ ಪರಿಗಣಿಸಬೇಕು.
ಸಿಕ್ಕಿಬಿದ್ದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸತ್ಯ ಸಂಗತಿ ಹೊರಬರಲಿ. ಮುಚ್ಚಿ ಹಾಕುವ ಪ್ರಯತ್ನ ಆಗಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.