![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2024, 4:27 PM IST
ಸಾಗರ: ನಿರಂತರವಾಗಿ ಬಿಜೆಪಿಯ ಮೂಲ ಕಾರ್ಯಕರ್ತನಾಗಿದ್ದೂ ಲೋಕಸಭಾ ಚುನಾವಣೆ ಸಂದರ್ಭದ ಈ ಎರಡು ತಿಂಗಳು ಮಾತ್ರ ನಾನು ಬಿಜೆಪಿಯಲ್ಲಿ ಇಲ್ಲ ಎನ್ನುವ ನೋವು ನನ್ನನ್ನು ಕಾಡುತ್ತದೆ. ಆದರೆ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಭಾವ್ಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಮಲೆನಾಡುಸಿರಿ ಸಭಾಂಗಣದಲ್ಲಿ ಭಾನುವಾರ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ನಲವತ್ತು ವರ್ಷಗಳಿಂದ ಬಿಜೆಪಿಯಲ್ಲಿ ನಾನು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೆಟ್ ಕೊಡುತ್ತಾರೆ. ನಾವು ಟಿಕೆಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಠರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೆಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ತಿಳಿಸಿದರು.
ದೇಶ ಮತ್ತು ರಾಜ್ಯದಲ್ಲಿ ಈಶ್ವರಪ್ಪ ಸ್ಪರ್ಧೆ ಮಾಡಿರುವ ಬಗ್ಗೆ ದೊಡ್ಡಮಟ್ಟದ ಚರ್ಚೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ವಿರೋಧಿಸಿಕೊಂಡು ಬಂದಿದ್ದಾರೆ. ಈ ಲೋಕಸಭಾ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಯಾಗಲಿದೆ. ನನ್ನ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ. ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ತೊಲಗಬೇಕು ಎಂದು ಪುನರುಚ್ಚರಿಸಿದರು.
ಸಾಮಾಜಿಕ ಕಾರ್ಯಕರ್ತ ಅಬಸೆ ದಿನೇಶಕುಮಾರ್ ಜೋಷಿ ಮಾತನಾಡಿ, ಭಾರತೀಯ ಸಂಸ್ಕೃತಿ, ಹಿಂದುತ್ವ, ಸನಾತನ ಧರ್ಮ ಮತ್ತು ಸೈದ್ಧಾಂತಿಕ ನೆಲಗಟ್ಟಿನ ಮೇಲೆ ರಾಜಕಾರಣ ಮಾಡಿಕೊಂಡು ಬಂದಿರುವುದು ಜನಸಂಘ ಮತ್ತು ಬಿಜೆಪಿ ಅದನ್ನು ಕಾಲಕಾಲಕ್ಕೆ ಮುಂದುವರೆಸಿಕೊಂಡು ಬರಲಾಗುತ್ತಿದೆ. ಹಿಂದಿನಿಂದಲೂ ನಾನು ಈಶ್ವರಪ್ಪ ಅವರ ಕುಟುಂಬದ ಹಿತೈಷಿ. ವೈಯಕ್ತಿಕ ಹಿತಚಿಂತನೆ ಬದಿಗಿಟ್ಟು ದೇಶದ ಬಗ್ಗೆ ಚಿಂತನೆ ಮಾಡುವವರು ಈಶ್ವರಪ್ಪ. ಹಿಂದಿನಿಂದಲೂ ಅದನ್ನು ನಡೆಸಿಕೊಂಡು ಬಂದಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೇ ಈಶ್ವರಪ್ಪ ಅವರು ಧ್ವನಿ ಎತ್ತಿದ್ದರೆ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇತ್ತು. ಅದೇನೆ ಇದ್ದರೂ ಪ್ರಸ್ತುತ ಈಶ್ವರಪ್ಪ ಅವರ ತೆಗೆದುಕೊಂಡ ತೀರ್ಮಾನಕ್ಕೆ ಜನಾಭಿಪ್ರಾಯ ಸಂಗ್ರಹವಾಗುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ ಎಂದರು.
ವೇದಿಕೆಯಲ್ಲಿ ಎಸ್.ವಿ.ಕೃಷ್ಣಮೂರ್ತಿ, ಪ್ರಕಾಶ್ ಕುಂಠೆ, ಎಸ್.ಎಲ್.ಮಂಜುನಾಥ್, ಕಸ್ತೂರಿ ಸಾಗರ್, ಸತೀಶ್ ಹಕ್ರೆ, ನಾಗರಾಜ್ ಮೊಗವೀರ ಇನ್ನಿತರರು ಹಾಜರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.