ಕಾಲಮಿತಿಯೊಳಗೆ ಕೇಂದ್ರದ ಯೋಜನೆ ಅನುಷ್ಠಾನಗೊಳಿಸಿ
ಯೋಜನೆ ತಲುಪಿಸಿ ಜನರ ಜೀವನಮಟ್ಟ ಸುಧಾರಿಸಲು ಶ್ರಮಿಸಿ
Team Udayavani, Mar 14, 2022, 3:02 PM IST
ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಸುಧಾರಣೆ ಮಾಡುವ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ದೀನ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣ ಕೌಶಲ್ಯ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ, ಗ್ರಾಮ ಜ್ಯೋತಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದರ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಮೂಲಸೌಕರ್ಯಗಳ ಕೊರತೆ ಬಗ್ಗೆ ಸ್ಥಳೀಯವಾಗಿ ಜನಪ್ರತಿನಿ ಧಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಬೇಕು ಎಂದರು.
ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ 36 ಲಕ್ಷ ಮಾನವ ದಿನಗಳ ಗುರಿಯಿದ್ದು, ಇದುವರೆಗೆ 34 ಲಕ್ಷ ಮಾನವ ದಿನಗಳ ಸಾಧನೆ ಮಾಡಲಾಗಿದೆ. 18380ಲಕ್ಷ ರೂ. ವಾರ್ಷಿಕ ಆರ್ಥಿಕ ಗುರಿಯಿದ್ದು, ಇದುವರೆಗೆ 13937 ಲಕ್ಷ ರೂ. ಗುರಿ ಸಾಧಿಸಲಾಗಿದೆ.
ಗ್ರಾಮ ಸಡಕ್ ಯೋಜನೆಯಡಿ 74ಕಿಮೀ ರಸ್ತೆ ನಿರ್ಮಾಣದ ಗುರಿಯಿದ್ದು, ಇದುವರೆಗೆ 64 ಕಿಮೀ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಕಾಮಗಾರಿಯಲ್ಲಿ ಐದು ವರ್ಷದ ನಿರ್ವಹಣೆ ಒಳಗೊಂಡಿದ್ದು, ಸಮರ್ಪಕವಾಗಿ ರಸ್ತೆಯ ನಿರ್ವಹಣೆಯನ್ನು ಕೈಗೊಳ್ಳಬೇಕು. ಯೋಜನೆ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ರಸ್ತೆಗಳ ನಿರ್ಮಾಣದ ಬಗ್ಗೆ ಮಾಹಿತಿ ನೀಡುವಂತೆ ಅವರು ತಿಳಿಸಿದರು.
ಅರಿವು ಮೂಡಿಸಿ: ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳು ನಿಗದಿತ ಸಮಯದ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಅನುದಾನದ ಬಗ್ಗೆ ಸಾಕಷ್ಟು ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಅಂಗವಿಕಲರಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಕುರಿತು ಜಿಲ್ಲೆಯಾದ್ಯಂತ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಧಾನಮಂತ್ರಿ ಭೇಟಿ: ಮುಂದಿನ ತಿಂಗಳು ಪ್ರಧಾನಮಂತ್ರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕೇಂದ್ರದ ಎಲ್ಲಾ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಎಲ್ಲಾ ಅರ್ಹರಿಗೆ ಪಡಿತರ ಚೀಟಿ ಮತ್ತು ಆಯುಷ್ಮಾನ್ ಆರೋಗ್ಯ ಕಾರ್ಡ್ ಈ ತಿಂಗಳ ಅಂತ್ಯದ ಒಳಗಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಗ್ರಾಮ ಒನ್ ಸೇವೆ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲು ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಪ್ರತಿಯೊಬ್ಬರಿಗೂ ನಿವೇಶನ: ಗ್ರಾಮೀಣ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನಗಳನ್ನು ಸಿದ್ಧಪಡಿಸಿ ನೀಡಬೇಕು. ಪ್ರತಿಯೊಬ್ಬ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಲು ನಿವೇಶನ ಒದಗಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.