ಕೆಎಫ್‌ಡಿ ತಡೆಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ
Team Udayavani, Oct 7, 2020, 6:22 PM IST
ಶಿವಮೊಗ್ಗ: ಮಂಗನ ಕಾಯಿಲೆ ಹರಡದಂತೆ ತಡೆಯಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಸಾಲಿನಲ್ಲಿ 5128 ಶಂಕಿತ ಮಂಗನ ಕಾಯಿಲೆ ಪ್ರಕರಣಗಳ ಪೈಕಿ 185 ಪ್ರಕರಣಗಳಲ್ಲಿ ಕೆಎಫ್‌ಡಿ ದೃಢಪಟ್ಟಿದೆ. ಇದರಲ್ಲಿ ತೀರ್ಥಹಳ್ಳಿ ತಾಲೂಕು 147, ಸಾಗರ 37 ಮತ್ತು ಶಿವಮೊಗ್ಗ ತಾಲೂಕಿನಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಮೃತಪಟ್ಟ ಎರಡು ಮಂಗಗಳಲ್ಲಿ ಪಾಸಿಟಿವ್ ದೃಢಪಟ್ಟಿದೆ. ಶೇ.79 ಪ್ರಕರಣಗಳು ತೀರ್ಥಹಳ್ಳಿ ತಾಲೂಕಿನಲ್ಲಿಹಾಗೂ ಶೇ.20 ಪ್ರಕರಣಗಳುಸಾಗರ ತಾಲೂಕಿನಲ್ಲಿ ವರದಿಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.
ಲಸಿಕೆ ಪಡೆಯಬೇಕು: ಮಂಗನ ಕಾಯಿಲೆ ಹರಡುವ ಸಾಧ್ಯತೆ ಇರುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಎಲ್ಲರಿಗೂ ಲಸಿಕೆ ಹಾಕಬೇಕು. ಒಟ್ಟು ಮೂರು ಡೋಸ್ ಲಸಿಕೆ ಹಾಕಲಾಗುತ್ತಿದ್ದು, ಎಲ್ಲಾಮೂರು ಡೋಸ್‌ಗಳನ್ನು ಸಹ ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು. ಕಳೆದ ವರ್ಷ ಮೂರು ಡೋಸ್ ತೆಗೆದುಕೊಂಡ ಯಾವುದೇ ಪ್ರಕರಣಗಳಲ್ಲಿ ಸಾವು ಸಂಭವಿಸಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಪ್ರಸ್ತುತ 32500 ಲಸಿಕೆ ಹಾಗೂ 35ಸಾವಿರ ಡಿಎಂಪಿ ತೈಲ ಲಭ್ಯವಿದ್ದು, ಅಗತ್ಯವಿರುವಷ್ಟು ಲಸಿಕೆ ಹಾಗೂ ತೈಲವನ್ನು ತರಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮನೆ- ಮನೆ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಾನುವಾರುಗಳಿಗೆ ಲಸಿಕೆ: ಮಂಗನ ಕಾಯಿಲೆ ಹರಡುವ ಸಾಧ್ಯತೆಗಳಿರುವ ವ್ಯಾಪ್ತಿಯ ಎಲ್ಲಾ ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ಹಾಕಬೇಕು. ಈಗಾಗಲೇ ಒಂದು ಹಂತ ಲಸಿಕೆ ಹಾಕಲಾಗಿದ್ದು, ನವೆಂಬರ್ ತಿಂಗಳಿನಲ್ಲಿ ಎರಡನೇ ಹಂತದ ಲಸಿಕೆ ಹಾಕಬೇಕು.ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡಬಾರದು. ಜಾನುವಾರುಗಳನ್ನು ಪ್ರತಿದಿನ ತೊಳೆಯಬೇಕು ಎಂದು ಅವರು ಹೇಳಿದರು.
ಪ್ರವೇಶ ನಿರ್ಬಂಧ: ಕಳೆದ ವರ್ಷ ಕೆಲವು ನಿಗದಿತ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ನವೆಂಬರ್‌ನಿಂದ ಮೇ ಅವ ಯಲ್ಲಿ ಅರಣ್ಯದೊಳಗೆ ಪ್ರವೇಶವನ್ನು ನಿರ್ಬಂಧಗೊಳಿಸಲಾಗಿತ್ತು. ಮಂಗನ ಕಾಯಿಲೆ ಮೂರು ಲಸಿಕೆ ಪಡೆದಿರುವ ಬಗ್ಗೆ ದೃಢೀಕರಣ ಪಡೆದಿರುವವರನ್ನು ಮಾತ್ರ ಈ ಬಾರಿಯೂ ಅರಣ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಅರಣ್ಯ ಪ್ರದೇಶದಲ್ಲಿ ಮಂಗ ಸತ್ತಿರುವುದು ಕಂಡು ಬಂದ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಹಾಗೂ ಪಿಡಿಒಗೆ ಮಾಹಿತಿ ನೀಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಡಾ| ಪಲ್ಲವಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಮೂಲಸೌಕರ್ಯ ಕಲ್ಪಿಸಿ : ತಾಲೂಕು ಮಟ್ಟದಲ್ಲಿ ಸಹ ಅಂತರ್ ಇಲಾಖಾ ಸಮನ್ವಯ ಸಮಿತಿ ರಚಿಸಿ ಸಭೆ ನಡೆಸಬೇಕು. ಮಂಗನ ಕಾಯಿಲೆ ಕಾಣಿಸಿಕೊಳ್ಳುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಟ ಸೌಲಭ್ಯ ಸಜ್ಜುಗೊಳಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೆಎಫ್‌ಡಿ ವಾರ್ಡ್ ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.