ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುವುದು ಸವಾಲು: ನಿವೃತ್ತ ಅಧಿಕಾರಿ ಮುಕುಂದ್
Team Udayavani, Jul 30, 2022, 7:31 PM IST
![ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುವುದು ಸವಾಲು: ನಿವೃತ್ತ ಅಧಿಕಾರಿ ಮುಕುಂದ್](https://www.udayavani.com/wp-content/uploads/2022/07/tdy-19-20-620x372.jpg)
![ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುವುದು ಸವಾಲು: ನಿವೃತ್ತ ಅಧಿಕಾರಿ ಮುಕುಂದ್](https://www.udayavani.com/wp-content/uploads/2022/07/tdy-19-20-620x372.jpg)
ಹೊಳೆಹೊನ್ನೂರು: ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಕೆಲಸ ನಿರ್ವಹಿಸುವುದು ಸವಾಲಿನಿಂದ ಕೂಡಿರುತ್ತದೆ ಎಂದು ಗ್ರಾಮ ಪಂಚಾಯಿತಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಮುಕುಂದ್ ತಿಳಿಸಿದರು.
ಅವರು ಸಮೀಪ ಅರಹತೊಳಲು ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ತಮ್ಮದೇ ಬೀಳ್ಕೋಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಬೇರೆ ಬೇರೆ ಪಕ್ಷ ಹಾಗೂ ವರ್ಗದ ಜನರೊಂದಿಗೆ ಕಾರ್ಯನಿರ್ವಹಿಸುವುದು ತುಂಬಾ ಕಷ್ಟವಾಗಿರುತ್ತದೆ. ಇಂತಹ ಸವಾಲುಗಳನ್ನು ಮೆಟ್ಟಿನಿಂತು ಕೆಲಸ ಮಾಡುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಕೆಲವು ಸಂದರ್ಭಗಳಲ್ಲಿ ಕಾನೂನು ಅಡಿಯಲ್ಲಿ ಮಾನವೀಯತೇ ಹಾಗೂ ಸದಸ್ಯರ ಆದೇಶದ ಮೇರೆಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದರು.
ನಾನು ಇಂದಿನ ಬೀಳ್ಕೋಡುಗೆ ಸಮಾರಂಭವನ್ನು ಆಚರಿಸಕೊಳ್ಳುತ್ತಿದ್ದೇನೆಂದರೆ ಅದಕ್ಕೆ ನೇರ ಕಾರಣ ಇಂದಿನ ಗೃಹಮಂತ್ರಿ ಅರಗ ಜ್ಞಾನೇಂದ್ರ ರವರು ಕಾರಣ. ಏಕೆಂದರೆ, ಗ್ರಾಮ ಪಂಚಾಯಿತಿಗಳಲ್ಲಿ ಬಡ್ತಿ ಆಧಾರದ ಮೇಲೆ ಕಾರ್ಯನಿರ್ವಹಿಸಲಾಗುತ್ತದೆ. ಅಂತಹ ಸಂದರ್ಭದಲ್ಲಿ ನಮಗೆ ಕೆಲಸ ಸಿಗುವುದಿಲ್ಲ ಎಂದುಕೊಂಡಿದ್ದ ಸಂದರ್ಭದಲ್ಲಿ ಅಂದಿನ ಶಾಸಕರಾಗಿದ್ದ ಜ್ಞಾನೇಂದ್ರರವರು ತಮಗೆ ಸಲ್ಲಬೇಕಾದ ನ್ಯಾಯವನ್ನು ದೊರೆಕಿಸಿ ಕೊಡುವುದರ ಜೊತೆಗೆ ನಮಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸರ್ಕಾರಿ ಉದ್ಯೋಗವನ್ನು ಕೊಡಿಸುವಲ್ಲಿ ಸಫಲಾಗಿದ್ದರು ಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕೆಲಸ ಸಿಗುವುದು ಸಾಮಾನ್ಯದ ವಿಷಯವೇನೆಲ್ಲ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕ ಉತ್ತಮ ಕಾರ್ಯಗಳನ್ನು ಮಾಡಿ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕಾಗಿದೆ ಕಿವಿ ಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಒತ್ತಡದ ಕೆಲಸಗಳಲ್ಲೂ ಜನ ಮನ್ನಣೆಗಳಿಸುವುದು ಅಸಾಧ್ಯವಾದ ಕೆಲಸ ಆದರೆ ಮುಕುಂದ್ ರವರು ತಮ್ಮ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ನಿವೃತ್ತಿಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ತಮ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಕಾರ್ಯನಿರ್ವಹಿಸುವುದು ಅಷ್ಟು ಸುಲಭದ ಮಾತಲ್ಲ. ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸಿದರೇ ದೇಶದ ಯಾವ ಕ್ಷೇತ್ರದಲ್ಲಾದರೂ ಕೆಲಸ ನಿರ್ವಹಿಸಿಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಉಪೇಂದ್ರ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ (ರಾಜೇಶ್) ಪಾಟೀಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ಚಂದ್ರಶೇಖರ್, ಉಪಾಧ್ಯಕ್ಷರು ಶಶಿಕಲಾ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರೂ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10-Thirthahalli](https://www.udayavani.com/wp-content/uploads/2025/02/10-Thirthahalli-150x90.jpg)
![10-Thirthahalli](https://www.udayavani.com/wp-content/uploads/2025/02/10-Thirthahalli-150x90.jpg)
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
![9-shivamogga](https://www.udayavani.com/wp-content/uploads/2025/02/9-shivamogga-150x90.jpg)
![9-shivamogga](https://www.udayavani.com/wp-content/uploads/2025/02/9-shivamogga-150x90.jpg)
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
![6-thirthahalli](https://www.udayavani.com/wp-content/uploads/2025/02/6-thirthahalli-150x90.jpg)
![6-thirthahalli](https://www.udayavani.com/wp-content/uploads/2025/02/6-thirthahalli-150x90.jpg)
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
![Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ](https://www.udayavani.com/wp-content/uploads/2025/02/nikhil-150x84.jpg)
![Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ](https://www.udayavani.com/wp-content/uploads/2025/02/nikhil-150x84.jpg)
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
![ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ](https://www.udayavani.com/wp-content/uploads/2025/02/Pranavananda-Swamiji-150x91.jpg)
![ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ](https://www.udayavani.com/wp-content/uploads/2025/02/Pranavananda-Swamiji-150x91.jpg)
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ