ಯಡಿಯೂರಪ್ಪ ಡೋಂಗಿ ರಾಜಕಾರಣಿ: ಸಿದ್ದರಾಮಯ್ಯ
Team Udayavani, Oct 26, 2018, 6:15 AM IST
ಭದ್ರಾವತಿ/ಕುಂದಾಪುರ: 2009ರ ಲೋಕ ಸಭಾ ಚುನಾವಣೆಯಲ್ಲಿ ಬಂಗಾರಪ್ಪನವರ ಸೋಲಿಗೆ ಕಾರಣನಾದ ರಾಘವೇಂದ್ರನನ್ನು ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ಸೋಲಿಸಿ ಮಧು ಬಂಗಾರಪ್ಪ ಅವರನ್ನು ಜಯಶಾಲಿಯಾಗಿ ಮಾಡಿದರೆ ದಿವಂಗತ ಬಂಗಾರಪ್ಪನವರ ಆತ್ಮಕ್ಕೆ ಶಾಂತಿ ನೀಡಿದಂತಾ ಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭದ್ರಾವತಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಯಡಿಯೂರಪ್ಪ ಸಂಸದರಾಗಿದ್ದಾಗ, ಮುಖ್ಯ ಮಂತ್ರಿ ಯಾಗಿದ್ದಾಗ ಶಿವಮೊಗ್ಗ ಜಿಲ್ಲೆಗೆ,ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಏನನ್ನೂ ಮಾಡಲಿಲ್ಲ. ಇಂತಹ ಯಡಿಯೂರಪ್ಪನನ್ನು ಭದ್ರಾವತಿಯೊಳಗೆ ಸೇರಿಸಲೇಬಾರದು.
ಈ ಚುನಾವಣೆ ಯಾರಿಗೂ ಬೇಕಿರಲಿಲ್ಲ. ಜನತೆ ಒಮ್ಮೆ ಸಂಸದನಾಗಿ ಕಾರ್ಯ ನಿರ್ವಹಿಸಲು ಅಧಿಕಾರ ನೀಡಿದಾಗ ಯಡಿಯೂರಪ್ಪ 5 ವರ್ಷ ಸಂಸದರಾಗಿ ಸೇವೆ ಸಲ್ಲಿಸಬೇಕಿತ್ತು. ಆದರೆ, ಜನತೆಗೆ ಹೇಳದೆ ಕೇಳದೆ ರಾಜೀನಾಮೆ ನೀಡಿ ಈಗ ಉಪಚುನಾವಣೆಗೆ ಕಾರಣರಾಗಿದ್ದಾರೆ. ಅವರೊಬ್ಬ ಡೋಂಗಿ ರಾಜಕಾರಣಿ ಎಂದು ದೂರಿದರು. ಇದಕ್ಕೂ ಮೊದಲು ಕುಂದಾಪುರದಲ್ಲಿ ಮಾತನಾಡಿ, ಕಾಂಗ್ರೆಸ್- ಜೆಡಿಎಸ್ ಮೈತ್ರಿಯ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಉಪಚುನಾವಣೆ ಬಳಿಕ ಸರಕಾರ ಉರುಳುತ್ತದೆ ಎನ್ನುವುದು ಶೋಭಾ ಕರಂದ್ಲಾಜೆ, ಬಿಎಸ್‌ವೈ ಅವರ ಭ್ರಮೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.