Sagara: ವಿದ್ಯಾರ್ಥಿವೇತನಕ್ಕೆ ತಡೆ; ಸರ್ಕಾರದ ಧೋರಣೆಗೆ ಎಬಿವಿಪಿ ಖಂಡನೆ


Team Udayavani, Oct 27, 2023, 3:37 PM IST

9-sagara

ಸಾಗರ: ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಆ.27ರ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಷೇಕ್ ಎಂ. ಶೆಟ್ಟಿ, ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎನ್ನುವ ಕನಿಷ್ಠ ಜ್ಞಾನ ಇಲ್ಲದಂತೆ ಆಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ ಅದಕ್ಕೆ ಹಣ ಹೊಂದಿಸುವುದು, ಸರ್ಕಾರ ಉಳಿಸಿಕೊಳ್ಳುವಲ್ಲಿಯೇ ಹೆಚ್ಚು ಆಸಕ್ತಿ ವಹಿಸುತ್ತಿರುವಂತೆ ಕಾಣುತ್ತಿದೆ. ಕಳೆದ ಒಂದು ವರ್ಷದಿಂದ ವಿದ್ಯಾರ್ಥಿ ವೇತನದಲ್ಲಿಯೆ ತಮ್ಮ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸರ್ಕಾರ ಶಾಪವಾಗಿ ಪರಿಣಮಿಸಿದೆ. 2022-23ನೇ ಸಾಲಿನ ವಿದ್ಯಾರ್ಥಿವೇತನ ದಿಢೀರ್ ನಿಲ್ಲಿಸಿರುವುದರಿಂದ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ ಎಂದು ದೂರಿದರು.

ಸರ್ಕಾರ ವಿದ್ಯಾರ್ಥಿವೇತನ ಕೊಡುತ್ತವೆಯೋ, ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು. ವಿದ್ಯಾರ್ಥಿಗಳಿಗೆ ಮೂರು ವರ್ಷದಿಂದ ಲ್ಯಾಪ್‌ಟಾಪ್ ನೀಡಿಲ್ಲ. ಲ್ಯಾಪ್‌ಟಾಪ್ ಕೊಟ್ಟಿರುವುದು ಕಳಪೆಯಾಗಿದೆ. ಸರ್ಕಾರ ವಿದ್ಯಾರ್ಥಿಗಳ ಕಣ್ಣೊರೆಸುವ ತಂತ್ರ ಅನುಸರಿಸಬಾರದು. ನೀವು ಐದು ಗ್ಯಾರಂಟಿ ಜೊತೆ ವಿದ್ಯಾರ್ಥಿಗಳಿಗೊಂದು ಗ್ಯಾರಂಟಿ ಕೊಡಿ. ಒಂದೋ ವಿದ್ಯಾರ್ಥಿವೇತನ ತಕ್ಷಣ ಬಿಡುಗಡೆ ಮಾಡಿ, ಇಲ್ಲವೇ ಪದವಿ ಪೂರೈಸಿ ಹೊರಗೆ ಬರುವ ವಿದ್ಯಾರ್ಥಿಗಳಿಗೆ ಒಂದು ಉದ್ಯೋಗದ ಗ್ಯಾರಂಟಿ ಕೊಡಿ ಎಂದು ಒತ್ತಾಯಿಸಿದ ಅವರು, ಒಂದು ತಿಂಗಳಿನೊಳಗೆ ವಿದ್ಯಾರ್ಥಿವೇತನ ಹಾಗೂ ಲ್ಯಾಪ್‌ಟಾಪ್ ಕೊಡದೆ ಹೋದಲ್ಲಿ ಎಬಿವಿಪಿ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಸಮಿತಿ ಸದಸ್ಯ ಅಕ್ಷಯ್, ಸಾಗರ ನಗರ ಕಾರ್ಯದರ್ಶಿ ಧನ್ಯಶ್ರೀ, ಅನುಶ್ರೀ, ಅನುಷಾ, ಸಮರ್ಥ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.