ಸ್ವಸ್ಥ ಜೀವನಕ್ಕೆ ಯೋಗ ಸಹಕಾರಿ

Team Udayavani, Jun 22, 2018, 12:41 PM IST

shivamoga-1.jpg

ಶಿವಮೊಗ್ಗ: ಸ್ವಸ್ಥ ಜೀವನ ಹೊಂದಲು ಯೋಗ ಸಹಕಾರಿ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆಯುಷ್‌ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಯೋಗ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯೋಗ ದೇಶದ ನಾಗರಿಕರಲ್ಲಿ ಸಹೋದರತ್ವ ಮೂಡಿಸಿ ಸಹಬಾಳ್ವೆಯಿಂದ ಒಂದಾಗಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಸೇರಿದಂತೆ ದೇಶದ ಅನೇಕ ಗಣ್ಯರು ಭಾಗಿಯಾಗುತ್ತಿದ್ದಾರೆ. ವಿಶೇಷವೆಂದರೆ ಡೆಹ್ರಾಡೂನ್‌ ನಲ್ಲಿ 55,000ಕ್ಕೂ ಹೆಚ್ಚು ಮಂದಿ ಏಕಕಾಲದಲ್ಲಿ ಯೋಗ ಮಾಡಿ ದಾಖಲೆ ಬರೆಯುತ್ತಿರುವುದು ಹರ್ಷದ ಸಂಗತಿ ಎಂದರು.

ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಹಲವು ಧರ್ಮಗಳ ಪ್ರತಿನಿಧಿಗಳು ಭಾಗಿಯಾಗಿ, ಬ್ರಾತೃತ್ವದ ಮನೋಭಾವನೆಯಿಂದ ಭಾಗಿಗಳಾಗುತ್ತಿರುವುದು ಭಾರತೀಯರೆಲ್ಲರಲ್ಲೂ ಸಂತಸ ತಂದಿದೆ. ಈ ಹರ್ಷಕ್ಕೆ ನಮ್ಮ ದೇಶ ಭಾಜನವಾಗಿರುವುದು ಮತ್ತಷ್ಟು ಸಂಭ್ರಮ ತಂದಿದೆ ಎಂದು ಹೇಳಿದರು.

ಅಸಂಖ್ಯಾತ ಜನರು ಯೋಗ ಕಲಿತು ದುಶ್ಚಟಗಳಿಂದ ದೂರಾಗಿ, ತಮ್ಮ ಜೀವನ ಶೈಲಿ ಬದಲಾಯಿಸಿಕೊಂಡಿದ್ದಾರೆ. ಇದರಿಂದಾಗಿ ಭಾರತದ ವೈಶಿಷ್ಟ ವಿಶ್ವಕ್ಕೆ ಪರಿಚಯವಾಗಿದೆ. ಶಾಂತಿ ನೆಮ್ಮದಿ ತರುವ ಯೋಗ ಜನರಲ್ಲಿ ಶಾರೀರಿಕ ಮತ್ತು ಮಾನಸಿಕ ನೆಮ್ಮದಿ ಸೃಜಿಸಲು ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದರು. ಯೋಗದಿಂದ ಮನಸ್ಸು-ದೇಹದ ಆಲಸ್ಯ ದೂರಾಗುವುದು. ಯೋಗದಿಂದ ರೋಗದ ಭಯವಿಲ್ಲ. ಯಾವುದೇ ಅಡ್ಡಪರಿಣಾಮಗಳಿಲ್ಲದೇ ರೋಗಗಳನ್ನು ದೂರ ಮಾಡುವ, ದೇಹಕ್ಕೆ ನವ ಚೈತನ್ಯವನ್ನು ನೀಡುವ ಶಕ್ತಿ ಮತ್ತು ಪ್ರಭಾವಶಾಲಿ ಸಹಜ ಚಿಕಿತ್ಸೆ ಯೋಗ ಎಂದರು.

ಗ್ರಾಮಾಂತರ  ಕ್ಷೇತ್ರದ ಶಾಸಕ ಕೆ.ಬಿ. ಅಶೋಕನಾಯ್ಕ ಮಾತನಾಡಿ, ಯೋಗದಿಂದ ಮಾನವ ಸಹಜವಾದ ಸ್ನೇಹ, ಪ್ರೀತಿ, ಶಾಂತಿ, ನಿಸ್ವಾರ್ಥ ಸೇವಾ ಮನೋಭಾವ, ವಿಶ್ವಬ್ರಾತೃತ್ವದ ಶ್ರೇಷ್ಠಭಾವನೆ ಬೆಳೆದು ಬರುತ್ತದೆ. ಸುಖ-ಶಾಂತಿ-ಸಮೃದ್ಧಿ ಹಾಗೂ ಆರೋಗ್ಯವಂತ ವ್ಯಕ್ತಿ, ಸಮಾಜ ಮತ್ತು ವಿಶ್ವದ ನಿರ್ಮಾಣಕ್ಕೆ ಯೋಗಶಕ್ತಿ ಭದ್ರಬುನಾದಿಯಾಗಲಿದೆ.

ದೇಹದ ಆಂತರಿಕ ಭಾಗಗಳನ್ನು ಯೋಗದಿಂದ ನಿಯಂತ್ರಿಸಬಹುದಾಗಿದೆ ಎಂದರು. ಕಾರ್ಯಕ್ರಮಕ್ಕೆ ಮುನ್ನ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಂದ ಯೋಗ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಂತರ ಸಾರ್ವಜನಿಕರಲ್ಲಿ ಯೋಗದ ಅರಿವು ಮೂಡಿಸಲು ಜಾಥಾ ಏರ್ಪಡಿಸಲಾಗಿತ್ತು.

ಜಾಥಾದಲ್ಲಿ ಆಯುರ್ವೇದ ವೈದ್ಯರು, ಸಿಬ್ಬಂದಿಗಳು, ವಿವಿಧ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು,
ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಯೋಗ ಸಂಘ-ಸಂಸ್ಥೆಗಳ ಯೋಗಪಟುಗಳು
ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಪಂ ಉಪ ಕಾರ್ಯದರ್ಶಿ ಎ.ಎಸ್‌. ಮಣಿ, ಡಾ| ರಂಗಸ್ವಾಮಿ, ಉದ್ಯಮಿ ಡಿ.ಎಸ್‌. ಅರುಣ್‌, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌, ಆಯುಷ್‌ ಅಧಿಕಾರಿ ಡಾ| ಹರ್ಷಪುತ್ರಾಯ ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.