ಫೇಸ್‌ಬುಕ್‌ನಲ್ಲೂ ಸಲ್ಲಿಸಬಹುದು ಅಹವಾಲು!
•ಜನಪರ ಕಾರ್ಯಕ್ಕೆ ಚಿಂತನೆ • ಪರಿಸರ ಸ್ನೇಹಿ ಕುಟುಂಬಕ್ಕೆ ಪ್ರಮಾಣ ಪತ್ರ ವಿತರಣೆ
Team Udayavani, Jul 23, 2019, 11:41 AM IST
ಶಿವಮೊಗ್ಗ: ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣ ಬಳಸಿಕೊಂಡು ಜನರ ಅಹವಾಲುಗಳಿಗೆ ಕಿವಿಯಾಗುವ ಮೂಲಕ ಶಿವಮೊಗ್ಗ ಜಿಲ್ಲಾಡಳಿತ ಹಲವು ಜನಪರ ಕಾರ್ಯಕ್ಕೆ ಮುಂದಾಗಿದೆ.
ಜಿಲ್ಲಾಧಿಕಾರಿ ಅವರ ಫೇಸ್‌ಬುಕ್ ಪೇಜ್(deputycommissioner.shivamogga) ನಿರಂತರ ಚಟುವಟಿಕೆ ಗಳಿಂದ ಕೂಡಿದ್ದು, ಜಿಲ್ಲಾಡಳಿತದ ಪ್ರತಿಯೊಂದು ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಸಾರ್ವಜನಿಕರು ಇಲ್ಲಿ ಸುಲಭವಾಗಿ ಪಡೆಯುವುದು ಸಾಧ್ಯವಾಗಿದೆ.
‘ಪ್ರತಿನಿತ್ಯ ಜಿಲ್ಲಾಧಿಕಾರಿ ಕಚೇರಿಗೆ ನೂರಾರು ಮಂದಿ ಹಲವಾರು ಅಹವಾಲುಗಳೊಂದಿಗೆ ಆಗಮಿಸುತ್ತಾರೆ. ಅವರೆಲ್ಲರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಇದರೊಂದಿಗೆ ಫೇಸ್‌ಬುಕ್ ಮೂಲಕ ಸಹ ಅಹವಾಲು, ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತಿದೆ. ಮಲೆನಾಡಿನಂತಹ ಊರಿನಲ್ಲಿ ಸಾಮಾಜಿಕ ಜಾಲತಾಣ ಸಮರ್ಪಕವಾಗಿ ಬಳಸಿಕೊಂಡು ಜನರ ಅಹವಾಲುಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಸಾಧ್ಯವಿದೆ ಎಂಬುವುದು ಇಲ್ಲಿ ಅರಿವಾಗಿದೆ’ ಎನ್ನುತ್ತಾರೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ.
ಭಾವೈಕ್ಯದ ತಾಣವಾದ ಹಣಗರಕಟ್ಟೆಯಲ್ಲಿ ನೈರ್ಮಲ್ಯ, ಮೂಲಸೌಕರ್ಯಗಳ ಕೊರತೆ ಇತ್ಯಾದಿಗಳ ಕುರಿತು ವಾಟ್ಸಾಪ್ ಗ್ರೂಪಿನಲ್ಲಿ ಬಂದ ಪೋಸ್ಟಿಂಗ್ ಗಮನಿಸಿ ಅಂದೇ ಜಿಲ್ಲಾಧಿಕಾರಿ ಅವರು ಅಲ್ಲಿಗೆ ಭೇಟಿ ನೀಡಿದ್ದರು. ಆ ಬಳಿಕ ಅಲ್ಲಿನ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗಿತ್ತು. ಪ್ಲಾಸ್ಟಿಕ್ ಬಳಕೆ ಮಾಡದಂತೆ ಸ್ಥಳೀಯ ಅಂಗಡಿಗಳಿಗೆ ಭೇಟಿ ನೀಡಿ ಮನವಿ ಹಾಗೂ ಎಚ್ಚರಿಕೆಯನ್ನು ಸ್ವತಃ ಜಿಲ್ಲಾಧಿಕಾರಿ ಅವರು ಮಾಡಿದ್ದರು. ಈ ಎಲ್ಲಾ ಕಾರಣದಿಂದ ಹಣಗರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ದೊರೆತಿತ್ತು.
ವಸತಿ ನಿಲಯಗಳ ಬಗ್ಗೆ ನಿರಂತರ ಅಹವಾಲುಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸ್ವೀಕರಿಸುತ್ತಿದ್ದ ಜಿಲ್ಲಾಧಿಕಾರಿ ಅವರು ನಿಯಮಿತವಾಗಿ ಅಂತಹ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಸುಧಾರಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.
ನಗರ ವ್ಯಾಪ್ತಿಯಲ್ಲಿರುವ ಮನೆಗಳಲ್ಲಿ ನೀರಿನ ಸಮರ್ಪಕೆ ಬಳಕೆ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಉತ್ತೇಜಿಸಲು ಜಿಲ್ಲಾಡಳಿತ ಆರಂಭಿಸಿರುವ ಪರಿಸರ ಸ್ನೇಹಿ ಕುಟುಂಬ ಪ್ರಶಸ್ತಿ ಯೋಜನೆಗೂ ಸಾಮಾಜಿಕ ಜಾಲತಾಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿದಿನ ಅಂತಹ ಒಂದು ಮನೆಯನ್ನು ಗುರುತಿಸಿ ಸ್ವತಃ ಜಿಲ್ಲಾಧಿಕಾರಿ ಅವರು ಮನೆಗೆ ಭೇಟಿ ನೀಡಿ, ಜಿಲ್ಲಾಡಳಿತದ ವತಿಯಿಂದ ಪರಿಸರ ಸ್ನೇಹಿ ಕುಟುಂಬದ ಪ್ರಮಾಣ ಪತ್ರ ನೀಡುವ ಯೋಜನೆ ಇದಾಗಿದೆ. ಈ ಯೋಜನೆಯ ವಿಡಿಯೋಗಳನ್ನು ಲಕ್ಷಾಂತರ ಮಂದಿ ಫೇಸ್‌ಬುಕ್‌ನಲ್ಲಿ ವೀಕ್ಷಿಸಿದ್ದಾರೆ. ‘ಜನಸಾಮಾನ್ಯರನ್ನು ತಲುಪಲು ಫೇಸ್‌ಬುಕ್ ಸುಲಭ ಮಾಧ್ಯಮ ವಾಗಿದ್ದು, ಜನರ ನಾಡಿಮಿಡಿತವನ್ನು ತಕ್ಷಣ ಅರಿತುಕೊಳ್ಳಲು ಸಾಧ್ಯವಿದೆ. ಪರಿಸರ ಸ್ನೇಹಿ ಕುಟುಂಬ ಪ್ರಶಸ್ತಿಯಂತಹ ಕಾರ್ಯಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೆಲವು ಮಂದಿಯಾದರೂ ಪ್ರೇರಣೆ ಪಡೆದರೆ ಅದುವೇ ಯಶಸ್ಸು’ ಎನ್ನುತ್ತಾರೆ ಜಿಲ್ಲಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.