ಜೀವನ್ಮರಣ ಸ್ಥಿತಿಯಲ್ಲಿದ್ದ ಮಹಿಳೆ ಕರೆದೊಯ್ಯಲು ಝೀರೋ ಟ್ರಾಫಿಕ್!
Team Udayavani, Jun 13, 2018, 6:00 AM IST
ಶಿವಮೊಗ್ಗ: ಜೀವ ನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರ ಹೆಚ್ಚಿನ ಚಿಕಿತ್ಸೆಗಾಗಿ ತುರ್ತಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಮತ್ತವರ ಸಿಬಂದಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ಅಪರೂಪದ ಘಟನೆ ನಡೆದಿದೆ.
ಮಹಾನಗರಗಳಲ್ಲಿ ಒಂದು ಆಸ್ಪತ್ರೆ ಯಿಂದ ಇನ್ನೊಂದು ಆಸ್ಪತ್ರೆಗೆ ಹೃದಯ, ಕಿಡ್ನಿ ಸಾಗಿಸುವ ಸಂದರ್ಭ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಸಾಮಾನ್ಯ. ಆದರೆ ಶಿವಮೊಗ್ಗದಲ್ಲೂ ಇಂತಹದ್ದೇ ಒಂದು ಘಟನೆ ಮಂಗಳವಾರ ನಡೆದಿದ್ದು, ಶಿವಮೊಗ್ಗ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆವರೆಗೂ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಪೊಲೀಸರ ಈ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಆಗಿದ್ದೇನು: ಕಳೆದ ಎರಡು ದಿನದ ಹಿಂದೆ ಸಾಗರ ತಾಲೂಕಿನ ಮಕ್ಕಿಮನೆ ನಿವಾಸಿ ಸುಜಾತಾ (32) ತೀವ್ರ ಅಸ್ವಸ್ಥರಾಗಿದ್ದರು. ಇವರ ಪತಿ ಪತಿ ಪದ್ಮರಾಜ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಪಾಸಣೆ ಬಳಿಕ ಸುಜಾತ ಅವರ ಕಿಡ್ನಿ ಹಾಗೂ ಲಿವರ್‌ನಲ್ಲಿÉ ಗಂಭೀರ ಸಮಸ್ಯೆ ಇರುವುದು ಕಂಡುಬಂದಿದೆ. ಕೂಡಲೇ ಚಿಕಿತ್ಸೆ ದೊರೆಯದಿದ್ದರೆ ಪ್ರಾಣಕ್ಕೆ ಅಪಾಯ ಎಂದು ವೈದ್ಯರು ತಿಳಿಸಿದ್ದಾರಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸೂಚಿಸಿದ್ದಾರೆ. ಆದರೆ ಸಂಚಾರ ದಟ್ಟಣೆ ಮಧ್ಯೆ ನಿಗದಿತ ಸಮಯಕ್ಕೆ ಮಣಿಪಾಲ ತಲುಪುವುದು ಸುಲಭವಾಗಿರಲಿಲ್ಲ. ಹೀಗಾಗಿ ಪದ್ಮರಾಜ್, ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಅಭಿವನ್ ಖರೆ ಅವರಿಗೆ ವಿಷಯ ತಿಳಿಸಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಸಮಸ್ಯೆ ಆಲಿಸಿದ ಎಸ್ಪಿ ಅಭಿನವ ಖರೆ ತತ್‌ಕ್ಷಣವೇ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಇಲಾಖೆ ಸಿಬಂದಿಗೆ ಸೂಚನೆ ನೀಡಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ನಂಜಪ್ಪ ಆಸ್ಪತ್ರೆಯಿಂದ ಎನ್‌ಟಿ ರಸ್ತೆ ಮೂಲಕ ತೀರ್ಥಹಳ್ಳಿ, ಆಗುಂಬೆ ಮಾರ್ಗದುದ್ದಕ್ಕೂ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಧ್ಯಾಹ್ನ 1.30ಕ್ಕೆ ಶಿವಮೊಗ್ಗದಿಂದ ಹೊರಟ ಆ್ಯಂಬುಲೆನ್ಸ್ 4. 15ರ ಸುಮಾರಿಗೆ ಮಣಿಪಾಲ ತಲುಪಿದೆ ಎನ್ನಲಾಗಿದೆ.
ಅತ್ತ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಅಭಿನವ್ ಖರೆ ಅವರು ಅಲ್ಲಿಯೂ ಇದೇ ವ್ಯವಸ್ಥೆ ಕಲ್ಪಿಸಲು ನೆರವಾದರು. ಪೊಲೀಸರ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.