Mahatma Gandhi NREGA ಯೋಜನೆ ಅನುಷ್ಠಾನದಲ್ಲಿ ಮಾದರಿಯಾದ ಜಿಲ್ಲಾ ಪಂಚಾಯತ್‌, ಶಿವಮೊಗ್ಗ


Team Udayavani, Aug 15, 2023, 6:32 PM IST

shivaMahatma Gandhi NREGA ಯೋಜನೆ ಅನುಷ್ಠಾನದಲ್ಲಿ ಮಾದರಿಯಾದ ಜಿಲ್ಲಾ ಪಂಚಾಯತ್‌, ಶಿವಮೊಗ್ಗ

ಜಿಲ್ಲೆಯಲ್ಲಿ 200 ಅಮೃತ ಸರೋವರ ಕಾಮಗಾರಿಗಳ ಅನುಷ್ಠಾನ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಿಷನ್‌ ಅಮೃತ ಸರೋವರದಡಿ ಜಿಲ್ಲೆಯಲ್ಲಿ 200 (ಕೆರೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವುಗಳಿಗೆ) ಅಮೃತ ಸರೋವರ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಇವುಗಳಲ್ಲಿ ಪ್ರಮುಖವಾಗಿ  ಕೆರೆ ಹೂಳೆತ್ತುವುದು, ಕೆರೆ ದಂಡೆ ಬಲಪಡಿಸುವುದು, ಕೆರೆ ಸುತ್ತ ಸಸಿ ನೆಡುವುದು, ಕೆರೆಯ ಒಳಹರಿವು ಹಾಗೂ ಹೊರಹರಿವು ಕಾಲುವೆಗಳ ಹೂಳೆತ್ತುವ ಕೆಲಸವನ್ನು ನಿರ್ವಹಿಸಲಾಗಿದೆ.  ಆಗಸ್ಟ್‌ 15, 2023ರಂದು ಜಿಲ್ಲೆಯ ಎಲ್ಲಾ ಅಮೃತ ಸರೋವರ ಕಾಮಗಾರಿಗಳ ದಂಡೆಯ ಮೇಲೆ ಧ್ವಜಾರೋಹಣ ಮಾಡಲು ಕ್ರಮವಹಿಸಲಾಗುವುದು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 
ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಳ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಕೂಲಿಕಾರರ ಪ್ರಮಾಣ ಶೇ.54.89 ರಷ್ಟಿದ್ದು, ಕಳೆದ ಆರ್ಥಿಕ ವರ್ಷದಲ್ಲಿ 51.30 ರಷ್ಟಿದ್ದು, ಶೇ. 3.59 ರಷ್ಟು ಹೆಚ್ಚಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಸ್ವ ಸಹಾಯ ಸಂಘಗಳ ಮೂಲಕ, ರೋಜಗಾರ್ ದಿವಸ್‌ ಆಚರಣೆಗಳಲ್ಲಿ ಹಾಗೂ ಆಟೋಗಳ ಮೂಲಕ ಪ್ರಚಾರಗಳನ್ನು ಕೈಗೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ಮಹಿಳೆಯರು ಯೋಜನೆಯಡಿ ಪ್ರಮುಖವಾಗಿ ವೈಯಕ್ತಿಕ ಕಾಮಗಾರಿಗಳಲ್ಲಿ ಹಾಗೂ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.60 ರಷ್ಟು ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಕ್ರಮವಹಿಸಲಾಗುತ್ತಿದೆ ಹಾಗೂ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರಿಗೆ ಸಂಜೀವಿನಿ ಶೆಡ್‌ ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸ್ವಸಹಾಯ ಸಂಘದ ಒಕ್ಕೂಟದ ಸದಸ್ಯರಿಗೆ ಕೆಲಸ ನಿರ್ವಹಿಸಲು ಅನುಕೂಲವಾಗಿದೆ.

ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಅಭಿಯಾನ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಅವುಗಳಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಮೇ 22, ರಿಂದ ಜೂನ್‌ 22, 2023ರ ವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನವನ್ನು ಕೈಗೊಂಡು ಕೆ.ಹೆಚ್‌.ಪಿ.ಟಿ. ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ 87458 ಕೂಲಿಕಾರರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ಆರೋಗ್ಯ ತಪಾಸಣಾ ಅಭಿಯಾನದ ಬಗ್ಗೆ ಕೂಲಿಕಾರರು ಹರ್ಷ ವ್ಯಕ್ತಪಡಿಸಿರುತ್ತಾರೆ.

ಜಲ ಸಂಜೀವಿನಿ ಕಾರ್ಯಕ್ರಮ ಹಾಗೂ ಜಲ ಶಕ್ತಿ
ಅಭಿಯಾನದಡಿ ಪಂಚ ಅಭಿಯಾನಗಳ ಅನುಷ್ಠಾನ:

1. ಜಲ ಸಂಜೀವಿನಿ ಮೇಲುಸ್ಥರ ಕಾಮಗಾರಿಗಳ ಅನುಷ್ಠಾನ, ವಿಪತ್ತು ನಿರ್ವಹಣೆ ಹಾಗೂ ಗೋಮಾಳ ಅಭಿವೃದ್ಧಿ ಅಭಿಯಾನ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾದರಿಯಡಿ ಕಾಮಗಾರಿಗಳನ್ನುಅನುಷ್ಠಾನ ಮಾಡಲು 2023 24, 2024 25 ಮತ್ತು 2025 26ರ ಆರ್ಥಿಕ ವರ್ಷದಲ್ಲಿ ಅನುಷ್ಠಾನಿಸಲು ಯೋಜನೆ ರೂಪಿಸಲಾಗಿದ್ದು, ಅದರನ್ವಯ 2023 24 ನೇ ಸಾಲಿನಲ್ಲಿ ಮೇಲುಸ್ಥರದ ಕಾಮಗಾರಿಗಳನ್ನು ಹಾಗೂ ವಿಪತ್ತು ನಿರ್ವಹಣೆ ಮತ್ತು ಗೋಮಾಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಕ್ರಮವಹಿಸಲಾಗುತ್ತಿದೆ.

2. ಕೋಟಿ ವೃಕ್ಷ ಅಭಿಯಾನ:
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವನ ಮಹೋತ್ಸವವನ್ನು ಆಚರಿಸಲು ಕೋಟಿ ವೃಕ್ಷ ಅಭಿಯಾನ ಎಂಬ ವಿನೂತನ ಕಾರ್ಯಕ್ರಮವನ್ನು ಯೋಜಿಸಲಾಗಿದ್ದು, ಈ ಅಭಿಯಾನದಡಿ ಪ್ರತಿ ಗ್ರಾಮ ಪಂಚಾಯಿತಿ  ಮಟ್ಟದ ಸಮುದಾಯ ಸ್ಥಳಗಳಲ್ಲಿ ಮತ್ತು ಅಮೃತ ವನವನ್ನು ನಿರ್ಮಾಣ ಮಾಡಲು ಶಾಲಾ ಕಾಲೇಜುಗಳು, ಸ್ವ ಸಹಾಯ ಸಂಘಗಳು, ಸ್ಥಳೀಯ ಸರ್ಕಾರೇತರ ಸಂಸ್ಥೆಗಳಲ್ಲಿ  ಇದುವರೆಗೂ 38475 ಸಸಿಗಳನ್ನು ನೆಡಲಾಗಿದೆ.

3. ಕೊಳವೆ ಬಾವಿ ಪುನಶ್ಚೇತನ:

ರಾಜ್ಯದಲ್ಲಿ ಅಂತರ್ಜಲ ಮಟ್ಟವು ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಜಲಶಕ್ತಿ 2023ರ ಅಭಿಯಾನದಡಿ ಈಗಾಗಲೇ ವಿಫಲ ಬೋರ್‌ವೆಲ್‌ಗ‌ಳನ್ನು ಪುನಶ್ಚೇತನಗೊಳಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಲು ಮರುಪೂರಣ ಘಟಕ ಕಾಮಗಾರಿಗಳನ್ನು ಯೋಜನೆಯಡಿ ತೆಗೆದುಕೊಳ್ಳಲು ಈ ಅಭಿಯಾನದಡಿ ಯೋಜಿಸಲಾಗಿದ್ದು, ಇದುವರೆಗೂ 326 ಕೊಳವೆ ಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಿಸಲು ಯೋಜನೆ ರೂಪಿಸಿ ಕ್ರಮವಹಿಸಲಾಗುತ್ತಿದೆ.

4.ಜೈವಿಕ ಅನಿಲ ಅಭಿಯಾನ:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಟ 02 ಜೈವಿಕ ಅನಿಲ ಘಟಕಗಳನ್ನು ಅನುಷ್ಠಾನ ಮಾಡಲು ಗುರಿಯನ್ನು ನೀಡಲಾಗಿದ್ದು, ಅದರನ್ವಯ ಈಗಾಗಲೇ ಜಾನುವಾರು ಕೊಟ್ಟಿಗೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಪ್ರಥಮ ಆಧ್ಯತೆಯಲ್ಲಿ ಜೈವಿಕ ಅನಿಲ ಘಟಕ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, ಅನುಷ್ಠಾನ ಮಾಡಲು ಕ್ರಮವಹಿಸಲಾಗುವುದು.5. ಹಸಿರು ಸರೋವರ ಅಭಿಯಾನ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದವರ ನಿರ್ದೇಶನದಂತೆ ಈಗಾಗಲೇ ಅಮೃತ ಸರೋವರದ ಕಾರ್ಯಕ್ರಮದಡಿ ಕೆರೆಗಳನ್ನು ಅಭಿವೃದ್ಧಿಪಡಸಲಾಗುತ್ತಿದ್ದು, ಪ್ರಾಯೋಗಿವಾಗಿ ಜಿಲ್ಲೆಯಲ್ಲಿ 03 ಹಸಿರು ಸರೋವರಗಳನ್ನು ಅನುಷ್ಠಾನ ಗೊಳಿಸಲು  ಕ್ರಮವಹಿಸಲಾಗುತ್ತಿದೆ.

6. ಶಿಶು ಪಾಲನಾ ಕೇಂದ್ರ ಸ್ಥಾಪನೆ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ  140 ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 89 ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದೆ.

ಪ್ರಮುಖಾಂಶಗಳು:
– ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸ ನಿರ್ವಹಿಸಲು ಇಚ್ಛಿಸುವ ಪ್ರತಿ ಕುಟುಂಬಕ್ಕೆ  ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗ ಒದಗಿಸುವುದು.
-ವೈಯಕ್ತಿಕ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಜೀವನೋಪಾಯ ಚಟುವಟಿಕೆಗಳನ್ನು ಬಲಪಡಿಸುವುದು.
-ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಆಸ್ತಿಗಳ ಸೃಜನೆ.
-ವಿಕಲ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50 ರಷ್ಟು ವಿನಾಯಿತಿ.
-ಶೇ. 60ಕ್ಕಿಂತ ಹೆಚ್ಚು ಮಹಿಳಾ ಕೂಲಿಕಾರರು ಕೆಲಸ ನಿರ್ವಹಿಸುವ ಕಾಮಗಾರಿಗಳಲ್ಲಿನ ಕೆಲಸದ ಪ್ರಮಾಣದಲ್ಲಿ ಮಹಿಳೆಯರಿಗೆ ಶೇ.10 ವಿನಾಯಿತಿ.
-ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಸೌಲಭ್ಯ ಒದಗಿಸಲಾಗುವುದು.
-ಪ್ರತಿ ದಿನಕ್ಕೆ ಕೂಲಿ ಮೊತ್ತ: 316/ರೂ.ಗಳು

ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನಷ್ಠಾನ  ಮಾಡಲಾಗುತ್ತಿದ್ದು, ಸಮುದಾಯ ಆಸ್ತಿಗಳ ಸೃಜನೆ ಹಾಗೂ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನದಿಂದ ಫಲಾನುಭವಿಗಳ ಜೀವನೋಪಾಯಕ್ಕೆ ಆಧ್ಯತೆ ನೀಡಲಾಗುತ್ತಿದೆ. ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳದಿಂದ ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಾಣಬಹುದಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಹಲವಾರು ತಾಂತ್ರಿಕ ಅಂಶಗಳನ್ನು ಅಳವಡಿಸಲಾಗಿದ್ದು, ಇವುಗಳಿಂದ ಯೋಜನೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಸಾಧ್ಯವಾಗಿದೆ.
 -ಸ್ನೇಹಲ್‌ ಸುಧಾಕರ್‌ ಲೋಕಂಡೆ 
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಜಿಲ್ಲಾ ಪಂಚಾಯತ್‌, ಶಿವಮೊಗ್ಗ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.