ಮಧುಮೇಹ ನಿಯಂತ್ರಣಕ್ಕೆ ಉತ್ತಮ ಜೀವನ ಶೈಲಿ ಅಗತ್ಯ

Team Udayavani, Nov 15, 2019, 11:28 AM IST

15-November-30

ಶಿವಮೊಗ್ಗ: ನಿಯಮಿತ ವ್ಯಾಯಾಮ, ನಡಿಗೆ ಮತ್ತು ಸಮತೋಲಿತ ಆಹಾರ ಸೇವನೆ ಕ್ರಮದಿಂದ ಮಧುಮೇಹ ಮುಂತಾದ ಕಾಯಿಲೆಗಳನ್ನು ನಿಯಂತ್ರಣ ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಹೇಳಿದರು.

ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಚಟುವಟಿಕೆಯುಕ್ತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ದೇಹದ ತೂಕವನ್ನು ನಿಯಂತ್ರಿಸಿಕೊಳ್ಳುವುದರ ದುಶ್ಚಟಗಳಿಂದ ದೂರವಿರುವುದು ಹಾಗೂ ನಿಯಮಿತವಾಗಿ ವೈದ್ಯರ ಸಲಹೆ, ಚಿಕಿತ್ಸೆ ಔಷಧೋಪಚಾರ ಪಡೆಯುವುದೇ ಪರಿಹಾರ ಕ್ರಮವಾಗಿದೆ ಎಂದರು.

ಅತಿಯಾದ ತೂಕ, ಚಟುವಟಿಕೆ ರಹಿತ ಜೀವನಶೈಲಿ, ಹೆಚ್ಚಿನ ಕೊಬ್ಬಿನ ಅಂಶ ಹೊಂದಿರುವುದು, ಅತಿಯಾದ ಧೂಮಪಾನ ಮತ್ತು ಮದ್ಯಪಾನ ಸೇವನೆ, ಅನುವಂಶೀಯತೆ, ಅನಾರೋಗ್ಯಕರ ಆಹಾರ ಸೇವನೆ, ಅತಿಯಾದ ಉಪ್ಪು ಬಳಕೆ ಮತ್ತು ಎಣ್ಣೆಯಿಂದ ಮಾಡಿದ ಖಾದ್ಯಗಳ ಸೇವನೆ ಮಧುಮೇಹಕ್ಕೆ ಕಾರಣಗಳಾಗಿವೆ ಎಂದ ಅವರು ಅವುಗಳಿಂದ ದೂರವಿರುವುದು ಕ್ಷೇಮ ಎಂದರು.

ದೇಶದಲ್ಲಿ ಮಧುಮೇಹ ಕಾಯಿಲೆಯಿಂದ 62ಮಿಲಿಯನ್‌ ಜನರು ಬಳಲುತ್ತಿದ್ದಾರೆ. ಪ್ರತಿ ವರ್ಷ ಒಂದು ಮಿಲಿಯನ್‌ಗಿಂತ ಹೆಚ್ಚಿನ ಜನ ಈ ಕಾಯಿಲೆಯಿಂದ ಮರಣ ಹೊಂದುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ 2030ರ ವೇಳೆಗೆ 98 ಮಿಲಿಯನ್‌ ಭಾರತೀಯರು ಈ ಕಾಯಿಲೆಯಿಂದ ಬಳಲಬಹುದು ಎಂದು ಅಂದಾಜಿಸಲಾಗಿದೆ. ಸದ್ಯದಲ್ಲಿ ಭಾರತ ದೇಶವು ವಿಶ್ವದಲ್ಲೇ ಸಕ್ಕರೆ ಕಾಯಿಲೆಯ ರಾಜಧಾನಿಯಾಗಲಿದೆ ಎಂದ ಅವರು, ದೇಶದ ಗ್ರಾಮೀಣ ಭಾಗದ ಜನರಲ್ಲಿ 5-6ರಷ್ಟು ಹಾಗೂ ನಗರಪ್ರದೇಶದಲ್ಲಿ 10-12ರಷ್ಟು ಜನ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮಧುಮೇಹ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬಾಧಿತರು ತಪಾಸಣೆ ಮಾಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದ ಅವರು, ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿಲ್ಲದ ಸೇವೆಗಳಿಗೆ ಎ.ಬಿ.ಆರ್‌.ಕೆ. ಕಾರ್ಯಕ್ರಮದಡಿ ನೋಂದಾಯಿತ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಚಿಕಿತ್ಸೆ ನೀಡಲಾಗುವುದು. ಅಲ್ಲದೆ ಆರೋಗ್ಯ ಇಲಾಖೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ ಕಾಯಿಲೆ ಕುರಿತು ಜನಜಾಗೃತಿ, ಆರೋಗ್ಯ ಶಿಕ್ಷಣ, ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿ ಡಾ| ನಾಗರಾಜ್‌ ನಾಯ್ಕ, ಜಿಲ್ಲಾ ಎನ್‌.ಸಿ.ಡಿ. ಘಟಕದ ಕಾರ್ಯಕ್ರಮಾಧಿ ಕಾರಿ ಡಾ| ಶಂಕರಪ್ಪ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ| ಪರಮೇಶ್ವರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.