ಸ್ವಾತಂತ್ರ್ಯಕ್ಕೆ ಪ್ರೇರಕ ಶಕ್ತಿಯಾಗಿದ್ದ ಸ್ವಾಮಿ ವಿವೇಕಾನಂದರು

Team Udayavani, Nov 24, 2019, 2:48 PM IST

24-November-11

ಶಿವಮೊಗ್ಗ: ಭಾರತದ ಸನಾತನ ಸಂಸ್ಕೃತಿಯ ರಕ್ಷಣೆ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಕ ಶಕ್ತಿ ಆಗಿದ್ದವರು ಸ್ವಾಮಿ ವಿವೇಕಾನಂದರು ಎಂದು ಪಶ್ಚಿಮ ಬಂಗಾಳದ ಬೇಲೂರು ರಾಮಕೃಷ್ಣ ಮಠದ ಸಹಾಯಕ ಕಾರ್ಯದರ್ಶಿ ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್‌ ಹೇಳಿದರು.

ಸ್ವಾಮಿ ವಿವೇಕಾನಂದ ಅವರ ಚಿಕಾಗೋ ಸಮ್ಮೇಳನ ಭಾಷಣದ 125ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ನಗರದ ಪೆಸಿಟ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಯುವ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸೇರಿದಂತೆ ಜೀವನ ಚರಿತ್ರೆಯಲ್ಲಿ ಸ್ವಾಮಿ ವಿವೇಕಾನಂದರ ಪ್ರಭಾವ ಮತ್ತು ಪ್ರೇರಣೆಯ ಉಲ್ಲೇಖವಿದೆ. ಶತಮಾನ ಕಳೆದರೂ ಭಾರತದ ಯುವಸಮೂಹಕ್ಕೆ ಸ್ವಾಮಿ ವಿವೇಕರು ಅದ್ಭುತ ಸ್ಫೂರ್ತಿಯ ಶಕ್ತಿಯಾಗಿದ್ದಾರೆ ಎಂದು ತಿಳಿಸಿದರು.

ಪ್ರತಿಯೊಬ್ಬರಲ್ಲಿಯೂ ವಿಶೇಷ ಶಕ್ತಿ ಹಾಗೂ ಉಜ್ವಲ ಭವಿಷ್ಯವಿದೆ. ಆತ್ಮವಿಶ್ವಾಸ, ಶ್ರದ್ಧೆ ಹಾಗೂ ನಿರಂತರ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದರು.

ಸ್ವಾಮಿ ವಿವೇಕರ ಆಲೋಚನೆಗಳನ್ನು ಎಲ್ಲರೂ ಅಧ್ಯಯನ ನಡೆಸಬೇಕು. ಸ್ವಾಮಿ ವಿವೇಕರ ಕೃತಿಗಳು ಧನಾತ್ಮಕ ದಿಸೆಯಲ್ಲಿ ಜೀವನ ಬದಲಾಯಿಸುವ ಶಕ್ತಿ ಹೊಂದಿವೆ ಎಂದರು.

ಜೀವನದಲ್ಲಿ ಸಫಲತೆ ಸಾಧಿಸಲು ಎಲ್ಲರ ಸೇವೆಯಲ್ಲಿಯೂ ಶಿವ ಸ್ವರೂಪ ಕಾಣಬೇಕು. ಪರರ ಸೇವೆಯಲ್ಲಿ ಭಗವಂತನ ಸೇವೆ ಮಾಡಬೇಕು. ಆತ್ಮವಿಶ್ವಾಸ ಮತ್ತು ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು. ನನಗಿಂತಲೂ ಸಹಸ್ರಪಟ್ಟು ಸಾಧಿ ಸಲು ಎಲ್ಲರಲ್ಲಿಯೂ ಶಕ್ತಿ ಇದೆ ಎಂದು ವಿವೇಕರು ಸಂದೇಶ ಸಾರುತ್ತಿದ್ದರು.

ವಿವೇಕಾನಂದರ ಸಂದೇಶಗಳಲ್ಲಿ ಅದ್ಭುತ ವ್ಯಕ್ತಿತ್ವ ಮತ್ತು ಮನೋಸಾಮರ್ಥ್ಯ ವೃದ್ಧಿಸುತ್ತದೆ ಎಂದು ಹೇಳಿದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣವು ವಿಶ್ವಕ್ಕೆ ಭಾರತದ ಸಂಸ್ಕೃತಿ ಹಾಗೂ ಭವ್ಯತೆಯನ್ನು ಸಾರಿತು. ವಿವೇಕಾನಂದರ ಪ್ರತಿಯೊಂದು ನುಡಿಯು ವಿಶ್ವದ ಎಲ್ಲರನ್ನು ಆಶ್ಚಯ ಚಕಿತರನ್ನಾಗಿ ಮಾಡಿಸಿತ್ತು ಎಂದು ಹೇಳಿದರು.

ಸದೃಢ ದೇಶದ ನಿರ್ಮಾಣಕ್ಕೆ ಯುವಜನರೇ ಶಕ್ತಿ ಎಂಬುದು ವಿವೇಕಾನಂದರ ಅದ್ಭುತ ಪರಿಕಲ್ಪನೆ. ಯುವಜನರಲ್ಲಿ ಜಾಗೃತಿ ಮೂಡಿಸಲು ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಯುವಜನತೆ ಗುರಿಯಾಗಿಸಿ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ರಾಮಕೃಷ್ಣ ಮಠಗಳು ಯುವಜನರಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಬಿತ್ತುವಲ್ಲಿ ಮಾಡುತ್ತಿರುವ ಕಾರ್ಯ ಅಭಿನಂದನೀಯ. ರಾಮಕೃಷ್ಣ ಮಠದ ಸ್ವಾಮೀಜಿಗಳು ವಿವೇಕಾನಂದರ ಜೀವನಚರಿತ್ರೆಯ ಪ್ರತಿಯೊಂದು ಸಂದೇಶಗಳನ್ನು ತಲುಪಿಸುವ ಕಾರ್ಯ ಮಾಡುತ್ತಿವೆ ಎಂದರು.

ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಕಾರ್ಯದರ್ಶಿ ಪರಮೇಶ್ವರ ಭಟ್‌
ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಮತ್ತು ಚಿಕಾಗೋ ಸಮ್ಮೇಳನದಲ್ಲಿ ನೀಡಿರುವ ಸಂದೇಶಗಳನ್ನು ಯುವಜನರಿಗೆ ತಲುಪಿಸುವುದೇ ಸಮ್ಮೇಳನದ ಆಶಯ ಎಂದು ತಿಳಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರು “ವಿವೇಕ ಮಾರ್ಗದರ್ಶಿ’ ಪುಸ್ತಕ ಲೋಕಾರ್ಪಣೆಗೊಳಿಸಿದರು.

ಸಮನ್ವಯ ಕಾಶಿ ಕಾರ್ಯಕ್ರಮ ರೂಪಿಸಿದರು. ಶಿವಮೊಗ್ಗ ನಗರದ ವಿವಿಧ ಕಾಲೇಜುಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌, ಸ್ವಾಮಿ ಮುಕ್ತಿದಾನಂದಜೀ, ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್‌, ಸ್ವಾಮಿ ಭೋದಸ್ವರೂಪಾನಂದಜೀ ಮಹಾರಾಜ್‌, ಸ್ವಾಮಿ ಮಂಗಳಾನಾಥನಂದ್‌ಜೀ ಸಾನ್ನಿಧ್ಯ ವಹಿಸಿದ್ದರು. ಶ್ರೀ ಶಾರದಾ ಅಂಧರ ವಿಕಾಸ ಕೇಂದ್ರದ ಅಧ್ಯಕ್ಷ ಡಾ| ಎಚ್‌.ವಿ. ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ಪೆಸಿಟ್‌ ಟ್ರಸ್ಟಿ ಎಸ್‌.ವೈ. ಅರುಣಾದೇವಿ, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ| ಎಂ.ಕೆ. ನಾಯ್ಕ ಮತ್ತಿತರರು ಇದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.