ಗಣೇಶೋತ್ಸವಕ್ಕೆ ಸುರಕ್ಷಾ ಕ್ರಮ

•ಕರ್ತವ್ಯ ಲೋಪ ಎಸಗುವವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Team Udayavani, Aug 31, 2019, 12:26 PM IST

31-Agust-20

ಶಿವಮೊಗ್ಗ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಚರ್ಚಿಸಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಕಾರಿ ಕೆ.ಬಿ. ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಪೆಂಡಾಲ್ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈ ಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ಮಾರ್ಗಗಳಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಯಾವುದೇ ಹೊಸ ಪೆಂಡಾಲ್ಗಳಿಗೆ ಅನುಮತಿ ನೀಡಬಾರದು. ಈ ವಿಷಯದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಗಮನ ನೀಡಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯುತ್‌ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಕೆಳಮಟ್ಟದಲ್ಲಿರುವ ವಿದ್ಯುತ್‌ ತಂತಿಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮರಗಳ ಗೆಲ್ಲುಗಳನ್ನು ಸವರುವ ಅಗತ್ಯವಿದ್ದರೆ ಮೊದಲೇ ಕ್ಲಿಯರ್‌ ಮಾಡಬೇಕು ಎಂದು ಸೂಚನೆ ನೀಡಿದರು.

ಅಗ್ನಿಶಾಮಕ ದಳ ಸನ್ನದ್ಧ ಸ್ಥಿತಿಯಲ್ಲಿರಬೇಕು. ಪೆಂಡಾಲ್ಗಳಲ್ಲಿ ವಿದ್ಯುತ್‌ ಅವಘಡಗಳು ಸಂಭವಿಸದಂತೆ ಮೊದಲೇ ಪರಿಶೀಲನೆ ನಡೆಸಬೇಕು. ಆ್ಯಂಬುಲೆನ್ಸ್‌ ಮತ್ತು ವೈದ್ಯಾಧಿಕಾರಿಗಳ ತಂಡ ಸಹ ಸಜ್ಜಾಗಿರಬೇಕು. ಅಗತ್ಯ ಔಷಧ ಸಂಗ್ರಹ ಖಾತ್ರಿಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ಗಣೇಶ ಹಬ್ಬ ಆಚರಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಾಂತರಾಜ್‌ ಅವರು ಮಾತನಾಡಿ, ಗಣೇಶ ಹಬ್ಬದ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ತಂಡವಾಗಿ ಕಾರ್ಯ ನಿರ್ವಹಿಸಬೇಕು. ಪೊಲೀಸ್‌ ಇಲಾಖೆ ವತಿಯಿಂದ ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತೆ ವಹಿಸಲಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.