ಕೊನೆಗೂ ಬಂತು ಆರಿದ್ರಾ ಮಳೆ

•1995ರ ನಂತರ ಅತಿ ಕಡಿಮೆ ಮಳೆ ದಾಖಲು•ಮಳೆನಾಡಲ್ಲಿ 24 ವರ್ಷದ ಬಳಿಕ ಭೀಕರ ಬರ

Team Udayavani, Jul 1, 2019, 12:00 PM IST

Udayavani Kannada Newspaper

ಶಿವಮೊಗ್ಗ: ಜೂನ್‌ ಅಂತ್ಯಕ್ಕೆ ಮಲೆನಾಡಿನಲ್ಲಿ ಮುಂಗಾರು ತನ್ನ ಪ್ರಭಾವ ತೋರಿಸುತ್ತಿದ್ದು, ರೈತರು ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ನಲ್ಲಿ ರಚ್ಚೆ ಹಿಡಿಯಬೇಕಿದ್ದ ಮಳೆ ನಿರಾಸೆ ಮೂಡಿಸಿದ್ದು ಇಂತಹದೇ ಪರಿಸ್ಥಿತಿ 24 ವರ್ಷದ ಹಿಂದೆ ಬಂದಿತ್ತು.

2001ರಿಂದ 2003ರ ನಡುವೆ ಕಾಣಿಸಿಕೊಂಡ ಮೂರು ವರ್ಷದ ಬರವನ್ನು ಮೀರಿಸುವಂತಹ ಭೀಕರತೆ ಈ ವರ್ಷ ಎದುರಾಗಿದೆ. 1995ರಲ್ಲಿ ಜೂನ್‌ ಅಂತ್ಯಕ್ಕೆ ಶೇ.63ರಷ್ಟು ಮಳೆ ಕೊರತೆ ಕಂಡಿದ್ದ ಜಿಲ್ಲೆಯು 24 ವರ್ಷದ ಬಳಿಕ ತೀವ್ರ ಮಳೆ ಕೊರತೆ ಅನುಭವಿಸಿದೆ. ಜೂನ್‌ನಲ್ಲಿ ವಾಡಿಕೆಯಂತೆ 375.90 ಮಿ.ಮೀ. ಮಳೆಯಾಗಬೇಕಿತ್ತು. ಜೂ.27ರವರೆಗೆ ಕೇವಲ 168.70 ಮಿ.ಮೀ. ಮಳೆಯಾಗಿದ್ದು ಶೇ.55ರಷ್ಟು ಕೊರತೆಯಾಗಿದೆ.

ಹಿಂಗಾರು ಶೇ.55ರಷ್ಟು ವಿಫಲವಾಗಿದ್ದು, ಬೇಸಿಗೆಯಲ್ಲಿ ನಿರೀಕ್ಷಿತ ಮಳೆ ಬಾರದಿರುವುದು, ಮುಂಗಾರು ಹಂಗಾಮಿನ ಅಶ್ವಿ‌ನಿ, ಭರಣಿ, ಕೃತಿಕಾ, ರೋಹಿಣಿ, ಮೃಗಶಿರಾ ಮಳೆಗಳೂ ಕೈ ಕೊಟ್ಟವು. ಜನವರಿಯಿಂದ ಜೂನ್‌ ಅಂತ್ಯವರೆಗೆ ವಾಡಿಕೆಯಂತೆ 543 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ಅವಧಿಯಲ್ಲಿ ಕೇವಲ 220 ಮಿ.ಮೀ. (ಶೇ.59ಕೊರತೆ) ಮಳೆಯಾಗಿದೆ.

ಜೂನ್‌ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್‌ ಮಲೆನಾಡಿಗೆ ಕಾಲಿಟ್ಟಿದ್ದಲ್ಲಿ ಈ ಹೊತ್ತಿಗಾಗಲೆ ಹಳ್ಳ, ನದಿಗಳು ತುಂಬಿ ಹರಿದು ಕೆರೆ, ಕಟ್ಟೆ, ಜಲಾಶಯಗಳು ಶೇ.25ರಷ್ಟು ಭರ್ತಿಯಾಗಬೇಕಿತ್ತು. ಆದರೆ, ಕೆರೆ ಕಟ್ಟೆಗಳಿರಲಿ, ಜಲಾಶಯಗಳಿಗೂ ಹೊಸ ನೀರು ಬಂದಿಲ್ಲ. ಗಾಜನೂರು ಜಲಾಶಯ ಮತ್ತು ತುಂಗಾನದಿ ದಂಡೆ ಮೇಲಿರುವ ಶಿವಮೊಗ್ಗ ನಗರಕ್ಕೆ ಮಳೆಗಾಲದಲ್ಲೂ ದಿನಬಿಟ್ಟು ದಿನ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನೊಂದು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ.

ಕೇವಲ 3 ಟಿಎಂಸಿ ಸಾಮರ್ಥ್ಯದ ತುಂಗಾ ಜಲಾಶಯವು ಭರ್ತಿಯಾಗಿ ಗ್ರಾಮೀಣರು ಹೇಳುವಂತೆ ತುಂಗಾ ಹೊಳೆ ಕಟ್ಟಬೇಕಿತ್ತು. ನದಿಯಲ್ಲಿ ಕನಿಷ್ಠ 25ಸಾವಿರ ಕ್ಯೂಸೆಕ್‌ ನೀರು ಹರಿಯುತ್ತಿತ್ತು. ಆದರೆ, ಈ ಬಾರಿ ಜಲಾಶಯಕ್ಕೆ ಹೊಸ ನೀರು ಬರದೆ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌(1 ಟಿಎಂಸಿ) ತಲುಪಿದೆ. ರಾಜ್ಯಕ್ಕೆ ಶೇ.33ರಷ್ಟು ವಿದ್ಯುತ್‌ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1743.70 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1770.15 ಅಡಿ, (27 ಅಡಿ ಅಧಿಕ) ನೀರಿತ್ತು. ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ಜಲಾಶಯದಲ್ಲಿ 121.7 ಅಡಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 143 ಅಡಿ (22 ಅಡಿ ಅಧಿಕ) ನೀರಿತ್ತು.

ಟಾಪ್ ನ್ಯೂಸ್

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.