ಕೃಷಿ-ಗೋ ಸಂಪತ್ತನ್ನು ರಕ್ಷಿಸಿ
•ಪ್ಲಾಸ್ಟಿಕ್ ಮುಕ್ತ ದೇಶಕ್ಕೆ ಸಹಕರಿಸಿ: ಸಂಸದ ರಾಘವೇಂದ್ರ
Team Udayavani, Sep 12, 2019, 4:00 PM IST
ಶಿವಮೊಗ್ಗ: ಜಾನುವಾರುಗಳ ರೋಗ ನಿಯಂತ್ರಣ ಹಾಗೂ ಕೃತಕ ಗರ್ಭಧಾರಣೆ ಕಾರ್ಯಕ್ರಮಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.
ಶಿವಮೊಗ್ಗ: ಪ್ರಕೃತಿಯ ಮೇಲೆ ನಾವು ಎಷ್ಟೇ ಅತಿಕ್ರಮಣ ಮಾಡಿದರೂ, ನಮ್ಮ ಭವಿಷ್ಯದ ದೃಷ್ಟಿಯಿಂದ ಕೃಷಿ ಮತ್ತು ಗೋ ಸಂಪತ್ತನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.
ಬುಧವಾರ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕೃತಕ ಗರ್ಭಧಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗೋವು ದೇಶದ ಆರ್ಥಿಕ ಚಟುವಟಿಕೆಗಳ ಬೆನ್ನೆಲುಬಾಗಿದೆ. ಆದರೆ ವಯಸ್ಸಾದ ತಂದೆ- ತಾಯಂದಿರನ್ನು ವೃದ್ಧಾಶ್ರಮಕ್ಕೆ ಸೇರಿಸುವ ರೀತಿಯಲ್ಲಿ ಅಶಕ್ತ ಮತ್ತು ವಯಸ್ಸಾದ ಗೋವುಗಳನ್ನು ಕಟುಕರಿಗೆ ಮಾರುತ್ತಿರುವುದು ದುರದೃಷ್ಟಕರ. ಕುಟುಂಬದ ಸದಸ್ಯರಿಗೆ ರೋಗ ಬಂದರೆ ಯಾವ ರೀತಿಯಲ್ಲಿ ಅವರಿಗೆ ಆರೈಕೆ ಮಾಡುತ್ತೇವೆಯೋ ಅದೇ ರೀತಿ ಗೋವುಗಳಿಗೆ ಅನಾರೋಗ್ಯ ಬಂದರೆ ಔಷಧ ಉಪಚಾರ ಮಾಡಬೇಕು. ನಾವು ಪ್ರತಿನಿತ್ಯ ಬಳಸಿ ಬಿಸಾಡುವ ಪ್ಲಾಸ್ಟಿಕ್‌ಗಳನ್ನು ಸೇವಿಸಿ ಸಾವಿರಾರು ದನಕರುಗಳು ಗಂಭೀರ ಖಾಯಿಲೆಗಳಿಗೆ ತುತ್ತಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅ. 2ರಿಂದ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಸಂಕಲ್ಪಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದು ಹೇಳಿದರು.
ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ| ಟಿ.ಎಂ.ಸದಾಶಿವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲುಬಾಯಿ ರೋಗವನ್ನು ತಡೆಯಲು ಜಿಲ್ಲೆಯಲ್ಲಿ 6.45ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಸೆ. 30ರಿಂದ ಅ. 19ರವರೆಗೆ ನಡೆಯಲಿದೆ. ಗರ್ಭ ಧರಿಸುವ ಹಸುಗಳಲ್ಲಿ ಕಂಡು ಬರುವ ಕಂದು ರೋಗವನ್ನು ತಡೆಯಲು 4ರಿಂದ 8 ತಿಂಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗುವುದು. ಕೃತಕ ಗರ್ಭಧಾರಣಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 100 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದ್ದು, ತಲಾ ಒಂದು ಹಳ್ಳಿಗೆ 200 ರಾಸುಗಳಂತೆ ಒಟ್ಟು 2 ಲಕ್ಷ ರಾಸುಗಳಿಗೆ ಕೃತಕ ಗರ್ಭಧಾರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.15ರಿಂದ 6 ತಿಂಗಳ ಕಾಲ ಉಚಿತ ಗರ್ಭಧಾರಣಾ ಕಾರ್ಯ ಮಾಡಲಾಗುವುದು ಎಂದರು.
ಮಹಾವಿದ್ಯಾಲದಯ ಕುಲಪತಿ ಡಾ| ಎಂ.ಕೆ. ನಾಯ್ಕ ಅವರು ಮಾತನಾಡಿ, 2030ರ ಒಳಗಾಗಿ ರಾಷ್ಟ್ರವನ್ನು ಜಾನುವಾರುಗಳ ಕಾಲುಬಾಯಿ ಬೇನೆ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಗೆ ಪೂರಕವಾಗಿ ಈ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎಸ್.ಪಿ. ನಟರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.