5500 ಕುಟುಂಬಗಳು ನೆರೆಬಾಧಿತ
•2400 ನೆರೆಬಾಧಿತ ಕುಟುಂಬಗಳಿಗೆ 10 ಸಾವಿರ ತುರ್ತು ಪರಿಹಾರ ಜಮಾ: ಶಿವಕುಮಾರ್
Team Udayavani, Aug 21, 2019, 1:33 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 5500 ಕುಟುಂಬಗಳು ನೆರೆಬಾಧಿತ ಎಂದು ಗುರುತಿಸಲಾಗಿದೆ. 2400 ಕುಟುಂಬಗಳಿಗೆ ಈಗಾಗಲೇ ತುರ್ತು ಪರಿಹಾರವಾಗಿ ತಲಾ 10 ಸಾವಿರ ರೂ. ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯ ಮಾಡಲಾಗಿದೆ. 492 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದ್ದು, 5ಲಕ್ಷ ರೂ. ಪರಿಹಾರ ಒದಗಿಸಲಾಗುವುದು. ಶೇ.25ರಷ್ಟು ಸಣ್ಣಪುಟ್ಟ ಹಾನಿಗೆ 25 ಸಾವಿರ ರೂ ಹಾಗೂ ಶೇ.25ರಿಂದ 75ರಷ್ಟು ಹಾನಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. 3 ಸಾವಿರ ಮನೆಗಳು ಭಾಗಶಃ ಹಾನಿಗೀಡಾಗಿವೆ. ಮನೆ ಕಟ್ಟಲು ಅಸಮರ್ಥರಾದವರಿಗೆ ಜಿಲ್ಲಾಡಳಿತದ ವತಿಯಿಂದ ಮನೆ ನಿರ್ಮಿಸಿ ನೀಡಲಾಗುವುದು ಎಂದು ಹೇಳಿದರು.
10 ತಿಂಗಳ ಬಾಡಿಗೆ ಮೊತ್ತ ಪಾವತಿ: ಪ್ರವಾಹದಲ್ಲಿ ಮನೆಯನ್ನು ಸಂಪೂರ್ಣವಾಗಿ ಕಳೆದುಕೊಂಡು 5 ಲಕ್ಷ ರೂ. ಪರಿಹಾರಕ್ಕೆ ಅರ್ಹರಾದ ಕುಟುಂಬಗಳಿಗೆ ಮಾಸಿಕ 5 ಸಾವಿರ ರೂ. ಬಾಡಿಗೆ ಹಣವನ್ನು ಪಾವತಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಈ ರೀತಿ ಬಾಡಿಗೆ ಹಣವನ್ನು ಗರಿಷ್ಟ 10 ತಿಂಗಳಿಗೆ ಸೀಮಿತಗೊಳಿಸಿ, ಮನೆಯನ್ನು ಮತ್ತೆ ನಿರ್ಮಿಸುವವರೆಗೆ ತಾತ್ಕಾಲಿಕ ವಸತಿಗಾಗಿ ನೀಡಲಾಗುವುದು. ಒಂದು ವೇಳೆ ನಿರ್ವಸಿತ ಕುಟುಂಬ 10 ತಿಂಗಳ ಅವಧಿಗೆ ಮುಂಚಿತವಾಗಿ ಮನೆ ನಿರ್ಮಿಸಿದರೆ, ಬಾಕಿ ಅವಧಿಯ ಬಾಡಿಗೆ ಮೊತ್ತವನ್ನು ಒಂದೇ ಕಂತಿನಲ್ಲಿ ಆ ಕುಟುಂಬಕ್ಕೆ ನೀಡಲಾಗುವುದು. ಪರ್ಯಾಯವಾಗಿ ನಿರ್ವಸಿತ ಕುಟುಂಬ ತಾತ್ಕಾಲಿಕ ತಗಡಿನ ಶೆಡ್ ವಸತಿ ನಿರ್ಮಾಣ ಮಾಡಿಕೊಂಡಲ್ಲಿ ಅವರಿಗೆ 50 ಸಾವಿರ ರೂ. ನೀಡಲಾಗುವುದು. ಪ್ರವಾಹ ಪೀಡಿತ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಪರಿಹಾರದ ಮೊದಲ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬಾಡಿಗೆ ಮನೆಯಲ್ಲಿದ್ದು ಮನೆ ಕಳೆದುಕೊಂಡಿರುವವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಇವರಿಗೆ ವಸತಿ ಯೋಜನೆಯಡಿ ಮನೆಗಳನ್ನು ಒದಗಿಸುವ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಅವರು ಈಗಾಗಲೇ ಸೂಚನೆ ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಾನಿ ವಿವರ: ಅತಿವೃಷ್ಟಿ ಹಾಗೂ ಪ್ರವಾಹದಿಂದ 70 ಜಾನುವಾರುಗಳು ಹಾಗೂ 23 ಸಾವಿರ ಕೋಳಿ ಸಾವಿಗೀಡಾಗಿವೆ. ಇವುಗಳ ಮಾಲಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ನೀಡುವ ಕಾರ್ಯ ಚಾಲನೆಯಲ್ಲಿದೆ. ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 10 ಮಂದಿ ಸಾವಿಗೀಡಾಗಿದ್ದು, ಅವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಎರಡು ಮೃತದೇಹಗಳಿಗಾಗಿ ಎನ್‌ಡಿಆರ್‌ಎಫ್ ತಂಡ ಇನ್ನೂ ಹುಡುಕಾಟ ಮುಂದುವರಿಸಿದೆ ಎಂದರು.
ಶಾಶ್ವತ ಪರಿಹಾರ ಪರಿಶೀಲನೆ: ಶಿವಮೊಗ್ಗ ನಗರದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಮನೆಗಳು ಪದೇ ಪದೇ ನೆರೆಗೆ ತುತ್ತಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ನೆರೆಯ ಬಳಿಕ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಆರೋಗ್ಯ ಇಲಾಖೆ ವತಿಯಿಂದ ಕ್ಲೋರಿನೇಶನ್, ಕೀಟನಾಶಕ ಸಿಂಪಡಿಕೆ ಕಾರ್ಯವನ್ನು ಯುಧ್ದೋಪಾಯಲ್ಲಿ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಉತ್ತಮ ಸಹಕಾರ: ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸಾರ್ವಜನಿಕರು, ಅನೇಕ ಸಂಘ- ಸಂಸ್ಥೆಗಳು ಸಕ್ರಿಯವಾಗಿ ಕೈ ಜೋಡಿಸಿದ್ದಾರೆ. ಕೆಲವು ಸಾಹಸ ಅಕಾಡೆಮಿ ಸದಸ್ಯರು ಬೋಟ್‌ಗಳೊಂದಿಗೆ ಬಂದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಎಲ್ಲರ ಸಹಕಾರದಿಂದಾಗಿ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಗಿದೆ. ಪರಿಹಾರ ಕಾರ್ಯದಲ್ಲಿ ಕೈ ಜೋಡಿಸಿರುವ ಎಲ್ಲರಿಗೂ ಜಿಲ್ಲಾಡಳಿತದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.