ಬಾಲ ಕಾರ್ಮಿಕ ಪದ್ಧತಿ ನಿವಾರಿಸಿ
ಜೂ. 12ಕ್ಕೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಸಿದ್ಧತೆ: ಡಿಸಿ ದಯಾನಂದ್
Team Udayavani, Jun 1, 2019, 5:20 PM IST
ಶಿವಮೊಗ್ಗ: ಬಾಲ ಕಾರ್ಮಿಕ ಸೊಸೈಟಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಮಾತನಾಡಿದರು.
ಶಿವಮೊಗ್ಗ: ಕಾರ್ಮಿಕ ಇಲಾಖೆಯು ಜಿಲ್ಲಾಡಳಿತ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಹಯೋಗದೊಂದಿಗೆ ಜೂ. 12ರಂದು ನಗರದ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು. ಅಲ್ಲದೇ ವಿಶ್ವವಿದ್ಯಾನಿಲಯಗಳಲ್ಲಿ ವಿಚಾರ ಸಂಕಿರಣಗಳನ್ನು ಏರ್ಪಡಿಸಲಾಗುವುದು. ಈ ಕಾರ್ಯಕ್ರಮಗಳು ಎಲ್ಲರಲ್ಲೂ ಅರಿವು ಮೂಡಿಸುವುದರ ಜೊತೆಗೆ ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದವರು ನುಡಿದರು.
ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆ ಹಾಗೂ ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಿಗೊಳಿಸಿ ಅಥವಾ ಬಿಡುಗಡೆಗೊಳಿಸಿ ಬಾಲ ಕಾರ್ಮಿಕ ವಿಶೇಷ ಬಾಲ ಕಾರ್ಮಿಕ ವಿಶೇಷ ವಸತಿ ಶಾಲೆಯ ಮೂಲಕ ಮಕ್ಕಳಿಗೆ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಬಾಲ ಕಾರ್ಮಿಕ ಹಾಗೂ ಕಿಶೋರಾವಸ್ಥೆ ಕಾಯ್ದೆಯನ್ವಯ ನಿಗದಿಪಡಿಸಿದ 14 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿಯಲ್ಲದ ಕೆಲಸದಲ್ಲಿ ನೇಮಿಸುವುದು ಹಾಗೂ ಅಪಾಯಕಾರಿ ಉದ್ದಿಮೆ, ಕೈಗಾರಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ತಿಳಿಸಿದ ಅವರು, ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸುಮಾರು 609 ಬಾಲ ಕಾರ್ಮಿಕರ ತಪಾಸಣೆಗಳನ್ನು ನಡೆಸಲಾಗಿದೆ ಎಂದರು.
ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ವಲಯವನ್ನಾಗಿ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬಾಲಕಾರ್ಮಿಕ ಮುಕ್ತ ವಲಯವನ್ನಾಗಿ ಮಾಡುವ ಕುರಿತು ಸಮಾಲೋಚನೆ ಸಭೆ ಆಯೋಜಿಸಲಾಗಿದೆ. ಸ್ವ-ಸಹಾಯ ಸಂಘ, ಸ್ವಯಂಸೇವಕರು, ಶೈಕ್ಷಣಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ಎಸ್.ಡಿ.ಎಂ.ಸಿ., ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಧಾರ್ಮಿಕ ಮುಖಂಡರು, ಮಕ್ಕಳ ಸಹಾಯವಾಣಿ ಮುಂತಾದವುಗಳಲ್ಲಿ ಬಾಲಕಾರ್ಮಿಕ ಮುಕ್ತ ವಲಯದ ಬಗ್ಗೆ ಪರಿಕಲ್ಪನೆ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ ಪ್ರತಿ ವಾರ್ಡು, ಗ್ರಾಪಂವಾರು ಸದಸ್ಯರು ಮತ್ತು ಸ್ಥಳೀಯ ಸಂಸ್ಥೆ, ಉದ್ದಿಮೆಗಳ ಮಾಲೀಕರಿಂದ ಮುಚ್ಚಳಿಕೆ ಪತ್ರ ಪಡೆಯಲು ಉದ್ದೇಶಿಸಲಾಗಿದೆ. ಅಂತೆಯೇ ಹೊಟೇಲ್, ಕಿರಾಣಿ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಿತ್ತಿಪತ್ರ ಹಾಗೂ ಪೋಸ್ಟರ್‌ಗಳ ಮೂಲಕ ಅರಿವು ಮೂಡಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲಾ ಬಾಲ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ವ್ಯವಸ್ಥಿತ ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಬಂದಿದೆ. ಇದರಿಂದಾಗಿ ಗ್ಯಾರೇಜುಗಳಲ್ಲಿ ಈ ಹಿಂದೆ ಕಂಡು ಬರುತ್ತಿದ್ದ ಬಾಲಕಾರ್ಮಿಕರು ಪ್ರಸ್ತುತ ದಿನಗಳಲ್ಲಿ ಕಾಣಸಿಗುವುದಿಲ್ಲ ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್., ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.