ಆಟೋ ಕಾಂಪ್ಲೆಕ್ಸ್ ನಿರ್ವಹಣೆ ಪಾಲಿಕೆಗೆ
ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಒದಗಿಸಿ: ಡಿಸಿ ದಯಾನಂದ
Team Udayavani, Jul 5, 2019, 12:07 PM IST
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ನಡೆಯಿತು.
ಶಿವಮೊಗ್ಗ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸುಮಾರು 19ಎಕರೆ ಪ್ರದೇಶದಲ್ಲಿ ನಿರ್ಮಿಸಿ ಹಂಚಿಕೆ ಮಾಡಿರುವ ಅಟೋ ಕಾಂಪ್ಲೆಕ್ಸ್ ಮುಂದಿನ ನಿರ್ವಹಣೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಹಸ್ತಾಂತರ ಪ್ರಸ್ತಾವಕ್ಕೆ ಅನುಮೋದನೆ ನೀಡಿ ಅವರು ಮಾತನಾಡಿದರು.
ದೇವಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್, ಮೂಲ ಸೌಕರ್ಯ ಒದಗಿಸುವ ಕಾಮಗಾರಿಯನ್ನು ತ್ವರಿತಗೊಳಿಸಬೇಕು. ವಿದ್ಯುತ್ ಸಂಪರ್ಕ ಕೋರಿ ಅರ್ಜಿಯನ್ನು ನೋಂದಣಿ ಮಾಡಿದ 10ದಿನಗಳ ಒಳಗಾಗಿ ಸಂಪರ್ಕವನ್ನು ಕಲ್ಪಿಸಬೇಕು. ಅಲ್ಕೊಳ ಸಬ್ ಸ್ಟೇಷನ್‌ನಿಂದ ಮುದ್ದಿನಕೊಪ್ಪ ಕ್ರಾಸ್‌ವರೆಗೆ ಯುಜಿ ಕೇಬಲ್ ಅಳವಡಿಕೆ ಕಾರ್ಯ ಆರಂಭಿಸಬೇಕು. ಮುದ್ದಿನಕೊಪ್ಪ ಕ್ರಾಸ್‌ನಿಂದ ಕೈಗಾರಿಕಾ ಪ್ರದೇಶದವರೆಗೆ ಓವರ್ ಹೆಡ್‌ಲೈನ್‌ಗಳ ಮುಖಾಂತರ ಎಕ್ಸ್‌ಪ್ರೆಸ್ ಫೀಡರ್‌ಗಳನ್ನು ಎಳೆಯುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.
ಅಟೋ ಕಾಂಪ್ಲೆಕ್ಸ್‌ನಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ತಕ್ಷಣ ಕಲ್ಪಿಸುವಂತೆ ಅವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸ್ತಾಪ ಸಲ್ಲಿಕೆ: ಶಿವಮೊಗ್ಗದ ಮಾಚೇನಹಳ್ಳಿ-ನಿಧಿಗೆ ಕೈಗಾರಿಕಾ ಪ್ರದೇಶಗಳನ್ನು ಒಟ್ಟಿಗೆ ಸೇರಿಸಿ ಪ್ರತ್ಯೇಕ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆ ಮಾಡುವ ಪ್ರಸ್ತಾವನೆಯನ್ನು ಈಗಾಗಲೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪ್ರತ್ಯೇಕ ಪ್ರಾಧಿಕಾರ ರಚನೆ ಬಳಿಕ ಘನತ್ಯಾಜ್ಯಗಳ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಫೌಂಡ್ರಿ ಘಟಕಗಳಲ್ಲಿ ಉಪಯೋಗಿಸಿದ ಮರಳನ್ನು ಕಲ್ಲು ಗಣಿಗಳಲ್ಲಿ ಹಾಕಲು ಅನುಮತಿ ನೀಡುವಂತೆ ಕೋರಿ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರು ನೀಡಿರುವ ಮನವಿಯನ್ನು ಪರಿಶೀಲಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗೆ ಅವರು ಸೂಚನೆ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್, ಇಲಾಖೆಯ ಅಪರ ನಿರ್ದೇಶಕ ಹಾಗೂ ಜಿಲ್ಲೆಯ ನೋಡೆಲ್ ಅಧಿಕಾರಿ ಸತೀಶ್, ವಿವಿಧ ಇಲಾಖಾ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.