ಇವಿಎಂ ಕೈಬಿಡಲು ಆಗ್ರಹ
ನ್ಯಾಯಸಮ್ಮತ ಚುನಾವಣೆಗೆ ಮತಪತ್ರ ಬಳಸಿ
Team Udayavani, Jun 30, 2019, 12:00 PM IST
ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ 'ಇವಿಎಂ ತೊಲಗಿಸಿ ಮತಪತ್ರ ಬಳಸಿ ಪ್ರಜಾಪ್ರಭುತ್ವ ಉಳಿಸಿ' ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಶಿವಮೊಗ್ಗ: ಚುನಾವಣೆಯಲ್ಲಿ ಮತದಾನಕ್ಕೆ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಸಂಶಯಗಳಿರುವ ಹಿನ್ನೆಲೆಯಲ್ಲಿ ಇವುಗಳ ಬಳಕೆಯನ್ನು ಕೈಬಿಟ್ಟು ಹಿಂದಿನ ರೀತಿಯಲ್ಲಿ ಮತಪತ್ರ ಬಳಸಬೇಕೆಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಹಾಗೂ ಜಿಪಂ ಸದಸ್ಯೆ ಕೆ. ಅನಿತಾ ಕುಮಾರಿ ಆಗ್ರಹಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ‘ಇವಿಎಂ ತೊಲಗಿಸಿ ಮತಪತ್ರ ಬಳಸಿ ಪ್ರಜಾಪ್ರಭುತ್ವ ಉಳಿಸಿ’ ಎಂಬ ಅಭಿಯಾನ ಹಮ್ಮಿಕೊಂಡಿದ್ದು, ಹೊಳೆಹೊನ್ನೂರು ಹೋಬಳಿ ವ್ಯಾಪ್ತಿಯ ಜಂಬೂರುಘಟ್ಟ ಮತ್ತು ಅರಹತೊಳಲಿನಲ್ಲಿ ರಾಷ್ಟ್ರಪತಿಗೆ ಪತ್ರ ಚಳವಳಿ ಹಿನ್ನೆಲೆಯಲ್ಲಿ ಪತ್ರ ಬರೆದು ಅಂಚೆ ಪೆಟ್ಟಿಗೆಗೆ ಹಾಕುವ ಮೂಲಕ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವತ್ರಿಕ ಚುನಾವಣೆಗಳು ಮಹತ್ತರ ಪಾತ್ರ ವಹಿಸಲಿವೆ. ಕೋಟ್ಯಂತರ ಮತದಾರರಿರುವ ನಮ್ಮ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವುದು ಸುಲಭದ ಕೆಲಸವಲ್ಲ. ಮತಗಟ್ಟೆ ಸ್ಥಾಪನೆ, ಅಕ್ರಮ ಮತದಾನ ತಡೆಗಟ್ಟುವಿಕೆ, ಮತ ಎಣಿಕೆ ಸುಲಭವಲ್ಲ ನ್ಯಾಯಸಮ್ಮತ ಹಾಗೂ ಸಮರ್ಪಕ ಚುನಾವಣೆ ನಡೆಸುವಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಎಲ್ಲಾ ಸವಾಲುಗಳನ್ನು ಎದುರಿಸಲು ಇವಿಎಂಗಳನ್ನು ಬಳಸಲಾಗುತ್ತಿದೆ ಎಂದರು.
1952ರಿಂದ 1999ರವರೆಗೆ ನಡೆದ ಎಲ್ಲಾ ಸಾರ್ವತ್ರಿಕ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ಮತಪತ್ರಗಳ ಮೂಲಕ ಮತದಾನ ನಡೆಯುತ್ತಿತ್ತು. ನಂತರ ನಡೆದ ಕೆಲ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳಲ್ಲಿ ಇವಿಎಂಗಳು ಬಳಕೆಯಾದರೂ 2004ರಲ್ಲಿ ಜರುಗಿದ ಲೋಕಸಭಾ ಹಾಗೂ ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಯಿತು.
ಅದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜರುಗಿದ 2008ರ ವಿಧಾನಸಭಾ ಚುನಾವಣೆಯಲ್ಲಿಯೂ ಈ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಯಿತು ಎಂದು ತಿಳಿಸಿದರು.
ಬೆಂಗಳೂರಿನ ಬಿ.ಇ.ಎಲ್. ಮತ್ತು ಹೈದ್ರಾಬಾದಿನ ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ 1989-90ರಲ್ಲಿ ರೂಪಿಸಿದ ಈ ವಿದ್ಯುನ್ಮಾನ ಮತಯಂತ್ರ ಬಳಕೆ ಸಾರ್ವಜನಿಕ ವಲಯದಲ್ಲಿ ಶಂಕೆಗೆ ಕಾರಣವಾಗಿದೆ. ಇಂದಿನ ಎಲೆಕ್ಟ್ರಾನಿಕ್ ಯುಗದಲ್ಲಿ ತಂತ್ರಾಂಶವನ್ನು ಅನುಕೂಲಕ್ಕೆ ತಕ್ಕಂತೆ ಬದಲಾಯಿಸಬಹುದಾಗಿದೆ. ನ್ಯಾಯ ಸಮ್ಮತ ಚುನಾವಣೆಗಾಗಿ ಮತಪತ್ರಗಳನ್ನು ಬಳಸುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾ, ಕೆಪಿಸಿಸಿ ಸದಸ್ಯೆ ಎಂ.ವಿ. ಕವಿತಾ, ಗ್ರಾಪಂ ಸದಸ್ಯೆಯರು ಹಾಗೂ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.