ಮಳೆ; ಗಗನಕ್ಕೇರಿದ ತರಕಾರಿ ಬೆಲೆ!

Team Udayavani, Nov 10, 2019, 3:22 PM IST

10-November-21

ಶಿವಮೊಗ್ಗ: ತರಕಾರಿ ಬೆಲೆಗಳು ನಿಜಕ್ಕೂ ಗಗನಕ್ಕೆ ಏರಿವೆ. ಅದರಲ್ಲೂ ಸೊಪ್ಪಿನ ಬೆಲೆಯಂತೂ ಮುಗಿಲು ಮುಟ್ಟಿದೆ. ಪ್ರಮುಖವಾಗಿ ಎಲ್ಲ ರೀತಿಯ ಸೊಪ್ಪುಗಳು ಮಾರುಕಟ್ಟೆಗೆ ಬಾರದೇ ಇರುವುದೇ ಇದಕ್ಕೆ ಕಾರಣವಾಗಿದೆ. ಹಾಗಾಗಿ ಗ್ರಾಹಕರು ಸೊಪ್ಪು ತಿನ್ನುವುದಕ್ಕೆ ಯೋಚಿಸುವಂತಾಗಿದೆ. ಒಂದು ಸಣ್ಣ ಮೆಂತೆಕಟ್ಟಿಗೆ 10 ರಿಂದ 15 ರೂ., ಪಾಲಕ್‌ ಕೂಡ ಒಂದು ಕಟ್ಟಿಗೆ 10ರೂ., ಕೊತ್ತಂಬರಿ 10 ರೂ., ಅಲ್ಲದೇ ತುಂಬಾ ಸರಳವಾಗಿ ಸಿಗುತ್ತಿದ್ದ ಎಳೆರ್ಬೆ, ದಂಟಿನಸೊಪ್ಪು, ಸಬ್ಬಸಿಗೆ, ಕಿರುಕ್‌ ಸಾಲೆ, ನುಗ್ಗೆಸೊಪ್ಪಿನ ಬೆಲೆಯೂ ಕೂಡ ತುಂಬಾ ಏರಿದೆ. 50 ರೂ. ಕೊಟ್ಟರೂ ಒಂದು ಹೊತ್ತಿನ ಸಾರಿಗೂ ಸಾಲದಾಗಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸೊಪ್ಪಿನ ಬೆಳೆ ಕೂಡ ನಾಶವಾಗಿದೆ. ಸೊಪ್ಪಿನ ಜೊತೆಗೆ ಇತರೆ ತರಕಾರಿಗಳಾದ ಬೆಂಡೆಕಾಯಿ, ಹಿರೇಕಾಯಿ, ಕ್ಯಾರೆಟ್‌, ಬೀನ್ಸ್‌, ಬದನೆಕಾಯಿ, ಪಡುವಲಕಾಯಿ, ಕುಂಬಳಕಾಯಿ, ಜವಳಿಕಾಯಿ ಸೇರಿದಂತೆ ಇತರೆ ತರಕಾರಿಗಳ ಬೆಲೆ ಕೂಡ ಏರಿಕೆಯಾಗಿದೆ. ಬೆಂಡೆಕಾಯಿ 40 ರೂ., ಹಿರೇಕಾಯಿ 50 ರೂ., ಕ್ಯಾರೆಟ್‌ 60 ರೂ., ಬೀನ್ಸ್‌ 60 ರೂ.,  ಮ್ಯಾಟೋ ಕೆಜಿಗೆ 25 ರೂ., ಇದೆ. ಇದು ಒಂದು ವಾರದಿಂದ ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಸೌತೆಕಾಯಿ ಬೆಲೆ ಕೂಡ ಜಾಸ್ತಿಯಾಗಿದೆ. ಇದರ ಜೊತೆಗೆ ಈರುಳ್ಳಿ ಬೆಲೆ ಕೂಡ ಗಗನಕ್ಕೆ ಏರಿದೆ. ಕೆಲವೇ ದಿನಗಳ ಹಿಂದೆ 20 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇಂದು ಕೆಜಿಗೆ 50 ರೂ. ದಾಟಿದೆ.

ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂ. ಆಗಿದೆ. ಹೀಗೆ ಸಾಲು ಸಾಲು ಹಬ್ಬಗಳ ನಡುವೆ ಬೆಲೆ ಏರಿಕೆಯಾಗುತ್ತಲೇ ಇದೆ. ಬಾಳೆಹಣ್ಣು, ಸೇಬು ಕೂಡ ಏರಿಕೆಯಾಗಿದೆ ಇದೆ. ಪೇರಲೆ ಹಣ್ಣು ಕೆಜಿಗೆ 100 ರೂ.ಎಂದರೆ ಆಶ್ಚರ್ಯವಾಗುತ್ತದೆ. ಇತರೆ ಚಿಕ್ಕ ಚಿಕ್ಕ ವಸ್ತುಗಳಾದ ನಿಂಬೆಹಣ್ಣು, ಶುಂಠಿ, ಪುದೀನ ಮುಂತಾದವುಗಳ ಬೆಲೆ ಕೂಡ ಏರಿಕೆಯಾಗಿದೆ.

ಇದರ ಜೊತೆಗೆ ಮದುವೆ, ಗೃಹ ಪ್ರವೇಶ,ನಾಮಕರಣ ಮುಂತಾದ ಕಾರ್ಯಕ್ರಮಗಳು ಕೂಡ ಹೆಚ್ಚಾಗಿರುವುದರಿಂದ ತರಕಾರಿಗೆ ಬೇಡಿಕೆ ಹೆಚ್ಚಿದೆ. ತರಕಾರಿ ಸರಬರಾಜು ಕಡಿಮೆಯಾಗಿರುವುದರಿಂದ ಕೊಳ್ಳುವವರ ಸಂಖ್ಯೆ ಹೆಚ್ಚಾಗಿ ಬೆಲೆ ವಾರದಿಂದ ವಾರಕ್ಕೆ ಏರುತ್ತಲೇ ಇದೆ.

ಗುಣಮಟ್ಟದ ತರಕಾರಿಗಳು ಕೂಡ ಇಲ್ಲವಾಗಿದೆ. ಸೊಪ್ಪುಗಳೆಲ್ಲ ಹಳದಿ ಬಣ್ಣಕ್ಕೆ ತಿರುಗಿವೆ. ಆದರೂ ಕೂಡ ಕೆಲವು ಸಣ್ಣ ಮತ್ತು ದೊಡ್ಡ ಹೊಟೇಲ್‌ ನವರು ಇಂತಹ ಗುಣಮಟ್ಟವಲ್ಲದ ತರಕಾರಿಗಳನ್ನೇ ಕೊಂಡುಕೊಂಡು ಹೋಗಿ ಬಳಸುತ್ತಾರೆ. ಇದು ಹೊಟೇಲಿನಲ್ಲಿ ಊಟ ಮಾಡುವ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಒಟ್ಟಾರೆ ಹಬ್ಬಗಳು ಮುಗಿಯುತ್ತಾ ಬಂದರೂ ಕೂಡ ಬೆಲೆ ಏರಿಕೆ ಕಡಿಮೆಯಾಗುತ್ತಲೇ ಇಲ್ಲ.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.