ಮರಳು ಮಾಫಿಯಾದಲ್ಲಿ ಅಧಿಕಾರಿ- ಜನಪ್ರತಿನಿಧಿಗಳು ಭಾಗಿ: ಆಯನೂರು
ಅಕ್ರಮ ಮರಳು ಆಂಧ್ರ- ತಮಿಳುನಾಡಿಗೆ ರವಾನೆ: ಮಂಜುನಾಥ್
Team Udayavani, May 2, 2019, 4:05 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಅಗಾಧವಾಗಿದೆ. ಮಧ್ಯಮ ವರ್ಗದವರು ಮತ್ತು ಕಾರ್ಮಿಕರು ಈ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರ್ ಮಂಜುನಾಥ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳಿನ ಸಮಸ್ಯೆ ಅಗಾಧವಾಗಿದೆ. ಮಧ್ಯಮ ವರ್ಗದವರು ಮತ್ತು ಕಾರ್ಮಿಕರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಗರ ಮತ್ತು ತೀರ್ಥಹಳ್ಳಿಯ ನಮ್ಮ ಶಾಸಕರು ಈ ಕುರಿತು ಹೋರಾಟ ಕೈಗೆತ್ತಿಕೊಂಡಿದ್ದಾರೆ. ಮರಳು ಮಾಫಿಯಾದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ ಎಂದರು.
ಹೊಸನಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಗಾಧವಾಗಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು. ಮರಳು ಗಣಿಗಾರಿಕೆ ನಡೆಸಲು 1.8 ಕಿ.ಮೀ. ಮಿತಿ ನಿಗದಿ ಪಡಿಸಿದ್ದರೂ 9 ಕಿ.ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇದನ್ನು ಖಂಡಿಸಿ ಶಾಸಕ ಹರತಾಳು ಹಾಲಪ್ಪ ಧರಣಿ ಆರಂಭಿಸಿದ ನಂತರ, ಡಿಸಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ಲಾರಿಗಳಿಗೆ ನಂಬರ್ ಇರುವ ಸ್ಟಿಕರ್ ಅಂಟಿಸಿರುವುದು, ಮರಳಿನ ಗುಡ್ಡವನ್ನು ಸಮ ಮಾಡಲು ಯಂತ್ರ ಬಳಸಿರುವುದು ಹಾಗೂ ಮರಳಿನ ಸ್ಟಾಕ್‌ನ್ನು ಅನುಮತಿ ಇಲ್ಲದ ಪ್ರದೇಶದಲ್ಲಿ ದಾಸ್ತಾನು ಮಾಡಿರುವುದು, ಸಿಸಿ ಟಿವಿ ಅಳವಡಿಸದಿರುವುದು ಹಾಗೂ ಮರಳಿನ ದರ ಫಲಕ ಅಳವಡಿಸದಿರುವುದು ಕಂಡು ಬಂತು. ಅಕ್ರಮ ಮರಳುಗಾರಿಕೆ ತಡೆಗಟ್ಟಲು ತಹಶೀಲ್ದಾರ್, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಆದರೆ ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು ಮನೆ, ಕೊಟ್ಟಿಗೆ ನಿರ್ಮಾಣ ಮತ್ತು ದುರಸ್ತಿಗೆ ಮರಳು ತೆಗೆದುಕೊಂಡು ಹೋದ 150ಕ್ಕೂ ಹೆಚ್ಚು ಜನರ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ. ಇಲ್ಲಿನ ಜನರಿಗೆ ಸಿಗದ ಮರಳು ಅಕ್ರಮವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ರವಾನೆಯಾಗುತ್ತಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಹೊಸನಗರದ ಪರಿಸ್ಥಿತಿಯೇ ಇಡೀ ಜಿಲ್ಲೆಯಲ್ಲಿದ್ದು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಜನಪ್ರತಿನಿಧಿಗಳಿಗೆ ಮಾಮೂಲಿ ನೀಡುವ ಕಾರಣಕ್ಕೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಹಣಕ್ಕೆ ಮರಳನ್ನು ಮಾರಾಟ ಮಾಡುತ್ತಿದ್ದೇವೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಆದರೂ ಎಲ್ಲಾ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಇದಲ್ಲದೆ ನೂತನ ಎಸ್ಪಿಯವರು ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಗಾಂಜಾ, ಮಟ್ಕಾ, ಜೂಜಾಟ ಮತ್ತಿತರ ಕಾನೂನು ಬಾಹಿರ ಚಟುವಟಿಕೆಯನ್ನು ನಿಯಂತ್ರಿಸಿ ಹೊಣೆಗಾರಿಕೆ ಮೆರೆಯಲಿ ಎಂದರು.
ಹೊಸನಗರ ಪಿಎಐ, ಇನ್ ಸ್ಪೆಕ್ಟರ್, ಡಿಎಸ್ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳುಗಾರಿಕೆಯಲ್ಲಿ ಶಾಮೀಲಾಗಿದ್ದಾರೆ. ಅದರಲ್ಲೂ ಪೊಲೀಸ್ ಅಧಿಕಾರಿಗಳು ದಬ್ಟಾಳಿಕೆ ನಡೆಸುತ್ತಿದ್ದಾರೆ. ಡಿಸಿಗೆ ಇದು ಮನವರಿಕೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದರ ಹೊರತಾಗಿ ಡಿಸಿ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು ಅವರು ಯಾವುದೇ ಒತ್ತಡಕ್ಕೆ ಒಳಗಾಗಬಾರದು.
• ಆಯನೂರು ಮಂಜುನಾಥ್, ವಿ.ಪ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.