ವಿವಿ ಸಾಧನೆ ತೃಪ್ತಿ ತಂದಿದೆ: ಪ್ರೊ| ಜೋಗನ್‌

ಟಾಪ್‌ 50 ವಿವಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಬರಲಿ •ವಿವಿ ಅಭಿವೃದ್ಧಿ ಪ್ರಕ್ರಿಯೆ ಶೀಘ್ರ ಪೂರ್ಣ

Team Udayavani, Jun 16, 2019, 12:15 PM IST

16-June-20

ಶಿವಮೊಗ್ಗ: ಕುವೆಂಪು ವಿವಿ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಂಘಗಳ ವತಿಯಿಂದ ಕುಲಪತಿ ಪ್ರೊ| ಜೋಗನ್‌ ಶಂಕರ್‌ ಅವರನ್ನು ಬೀಳ್ಕೊಡಲಾಯಿತು.

ಶಿವಮೊಗ್ಗ: ವಿಶ್ವವಿದ್ಯಾಲಯದ ಇಂದಿನ ಸಾಧನೆ ಹಿಂದೆ ಪ್ರಸ್ತುತದ ಎಲ್ಲ ಅಧ್ಯಾಪಕ ಮತ್ತು ಅಧ್ಯಾಪಕೇತರ ನೌಕರರ ಸಮರ್ಪಿತ ಶ್ರಮ ಹಾಗೂ ಹಿಂದಿನ ಆಡಳಿತಗಾರರ ದೂರದೃಷ್ಟಿಯ ಕೆಲಸವಿದೆ. ನನ್ನ ಆಡಳಿತಾವಧಿಯಲ್ಲಿ ಯಾವುದೇ ರೀತಿಯಾದ ರಾಜಕೀಯ, ಇನ್ನಿತರೆ ಹಿತಾಸಕ್ತಿಗಳ ಒತ್ತಡ ಬಂದಿಲ್ಲ. ಇದಕ್ಕಾಗಿ ಎಲ್ಲ ಸಿಬ್ಬಂದಿ ಮತ್ತು ಸ್ಥಳೀಯ ಜನರಿಗೆ ಧನ್ಯವಾದ ಎಂದು ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರೊ| ಜೋಗನ್‌ ಶಂಕರ್‌ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಂಘಗಳ ವತಿಯಿಂದ ಶನಿವಾರ ಸಂಜೆ ಪ್ರೊ| ಎಸ್‌. ಪಿ. ಹಿರೇಮs್ ಸಭಾಂಗಣದಲ್ಲಿ ಆಯೋಜಿಸಿದ್ದ ತಮ್ಮ (ಪ್ರೊ| ಜೋಗನ್‌ ಶಂಕರ್‌ ಅವರ) ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರೂಸಾದಡಿ ಮೂಲ ಸೌಕರ್ಯಗಳು, ಎಲ್ಲ ಸಮಾಜಗಳ ವಿದ್ಯಾರ್ಥಿಗಳಿಗೆ ಅಧ್ಯಯನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಪೂರ್ಣ ಸಹಾಯಹಸ್ತ ನೀಡಿದ್ದೇವೆ. ಪರೀಕ್ಷೆ ನಂತರ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟಿಸುವುದು, ಆನ್‌ಲೈನ್‌ ಪ್ರಮಾಣಪತ್ರಗಳ ವಿತರಣೆ ಸೇರಿದಂತೆ ವಿವಿಧ ವಿದ್ಯಾರ್ಥಿಪರ ಕ್ರಮಗಳನ್ನು ಕೈಗೊಂಡಿದೆ. ವಿದೇಶಿ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ, ಮಾನವಿಕ ವಿಜ್ಞಾನಗಳ ಕಟ್ಟಡ, ಅರಣ್ಯ ಇಲಾಖೆಯಿಂದ ಭೂಮಿ ಪಡೆಯುವ ಪ್ರಕ್ರಿಯೆಗಳು ಸದ್ಯದಲ್ಲಿಯೇ ಯಶಸ್ವಿಯಾಗಿ ಮುಗಿಯಲಿವೆ ಎಂದರು.

ವಿಶ್ವವಿದ್ಯಾಲಯವು ನ್ಯಾಕ್‌ನಿಂದ ‘ಎ’ ಗ್ರೇಡ್‌ ಪಡೆದಿದ್ದಲ್ಲದೇ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ- ಎನ್‌ಐಆರ್‌ಎಫ್‌ ರಾಷ್ಟ್ರ ಮಟ್ಟದ ರ್‍ಯಾಂಕಿಂಗ್‌ನಲ್ಲಿ 73ನೇ ಸ್ಥಾನ ಗಳಿಸಿದೆ. ಮುಂದಿನ ದಿನಗಳಲ್ಲಿ ಟಾಪ್‌ 50 ವಿವಿಗಳ ಪಟ್ಟಿಯಲ್ಲಿ ಹಾಗೂ ನ್ಯಾಕ್‌ನಿಂದ ಎ+ ಪಡೆಯುವತ್ತ ಶ್ರಮ ವಹಿಸಬೇಕು ಎಂದು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿಶೇಷ: ಕಾರ್ಯಕ್ರಮದಲ್ಲಿ ಕುಲಪತಿಗಳ ಪತ್ನಿ ಶಶಿಕಲಾ ಅವರು ಮಾತನಾಡಿ, ಕುಲಪತಿಗಳ ಪತ್ನಿಯರು ವಿವಿಗಳಲ್ಲಿ ಲಾಬಿ ಮಾಡುತ್ತಾರೆಂದು ತಿಳಿದು ಹೌಹಾರಿದ್ದೆನು. ಈ ಅಪವಾದದಿಂದ ಹೊರಗುಳಿಯುಲು ನಿರ್ಧರಿಸಿದ್ದೆನು. ನನ್ನ ಪತಿ ಪ್ರೊ| ಜೋಗನ್‌ ಶಂಕರ್‌ ಅವರು ಕುವೆಂಪು ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ನಿಯೋಜಿತಗೊಂಡ ನಂತರ ವಿವಿ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಯತ್ತ ಸಂಪೂರ್ಣ ಗಮನಹರಿಸಲು ಸಹಕಾರ ನೀಡಲು ನಿರ್ಧರಿಸಿದೆ. ನಾನು ಕುಟುಂಬದ ಜವಾಬ್ದಾರಿ ವಹಿಸಿಕೊಂಡು ಬೆಂಗಳೂರಿನಲ್ಲಿದ್ದು, ವಿವಿಯ ಹೆಸರನ್ನು ಎತ್ತರಕ್ಕೆ ಒಯ್ಯಬೇಕೆಂಬ ಮಹದಾಸೆಯೊಂದಿಗೆ ವಿವಿಯ ಜವಾಬ್ದಾರಿಯೊಂದಿಗೆ ಅವರನ್ನು ಅಲ್ಲಿರಲು ಅವರಿಗೆ ಬಿಟ್ಟಿದ್ದೆ. ಅದರ ಫಲಿತಾಂಶವಾಗಿ ವಿವಿಯು ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದೆ ಹಾಗೂ ಅದರ ಜೊತೆಗೆ ವಿವಿ ಸಿಬ್ಬಂದಿಯ ಅಪಾರ ಪ್ರೀತಿ ದೊರಕಿರುವುದು ಖುಷಿ ನೀಡಿದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿಯ ಹಿರಿಯ ಡೀನ್‌ ಪ್ರೊ| ಎಸ್‌.ಎಸ್‌. ಪಾಟೀಲ್, ಪ್ರಸ್ತುತದ ಕುಲಪತಿಗಳು ವಿಶ್ವವಿದ್ಯಾಲಯವನ್ನು ಮುನ್ನಡೆಸುವ ರೀತಿನೀತಿಗಳ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಸಾಧನೆಯ ಶಿಖರಕ್ಕೆರಿಸಿದ್ದಾರೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಈ ಸಂಬಂಧ ನಮಗೆ ನಿರಂತರ ಮಾರ್ಗದರ್ಶನ ನೀಡಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ನುಡಿನಮನ ಅರ್ಪಿಸಿದ ಕುಲಸಚಿವ ಪ್ರೊ| ಭೋಜ್ಯಾನಾಯ್ಕ, ಕುಲಪತಿಗಳು ಸದಾ ನಗುಮೊಗುದೊಂದಿಗೆ ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತಾ ಯಶಸ್ವಿಯಾಗಿ ಆಡಳಿತ ನಡೆಸಿದ ಸಮರ್ಥ ಆಡಳಿತಗಾರರು. ಸ್ವತಃ ರಾಷ್ಟ್ರಮಟ್ಟದ ಸಂಶೋಧನಾ ತಜ್ಞರಾಗಿರುವ ಅವರು ವಿವಿಯ ವಿಜ್ಞಾನ-ಸಮಾಜ ವಿಜ್ಞಾನ ನಿಕಾಯಗಳ ಸಂಶೋಧನಾ ಚಟುವಟಿಕೆಗಳಿಗೆ ಮಹತ್ವದ ಮಾರ್ಗದರ್ಶನ, ಸಹಕಾರ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಗೆ ಖ್ಯಾತಿ ತಂದುಕೊಟ್ಟರು. ಜಾತಿಧರ್ಮಗಳ ಪಕ್ಷಪಾತ ತೋರದೆ ಕೆಲಸಗಾರರನ್ನು ಗುರುತಿಸಿ ಅವಕಾಶ ನೀಡಿ ನಾಯಕತ್ವ ಗುಣಗಳನ್ನು ಬೆಳೆಸಿದರು ಎಂದರು.

ಕುಲಪತಿ ದಂಪತಿಗಳನ್ನು ವಿಶ್ವವಿದ್ಯಾಲಯದ ಕುವೆಂಪು ವಿವಿ ಅಧ್ಯಾಪಕರ ಸಂಘ ಮತ್ತು ಅಧ್ಯಾಪಕೇತರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿವಿಯ ಹಿರಿಯ ಡೀನ್‌ ಪ್ರೊ| ಎಸ್‌.ಎಸ್‌. ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ| ರಾಜಾನಾಯಕ, ಹಣಕಾಸು ಅಧಿಕಾರಿ ಪ್ರೊ| ಹಿರೇಮಣಿ ನಾಯ್ಕ, ಅಧ್ಯಾಪಕ ಸಂಘದ ಅಧ್ಯಕ್ಷ ಪ್ರೊ| ಬಿರಾದಾರ, ಅಧ್ಯಾಪಕೇತರರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿದರು. ವಿವಿಯ ಎಲ್ಲ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಮತ್ತು ಸಂಶೋಧನಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.