![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 18, 2019, 6:21 PM IST
ಶಿವಮೊಗ್ಗ: ಉನ್ನತ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಶ್ರೇಣೀಕರಣ (ಕೆಎಸ್‌ಯುಆರ್‌ಎಫ್)ದ 2019ರ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮೂರನೇ ಸ್ಥಾನ ಲಭಿಸಿದೆ.
ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರು ಕುವೆಂಪು ವಿವಿಯ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅವರಿಗೆ ಪ್ರಮಾಣ ಪತ್ರ ನೀಡಿದರು.
ಹತ್ತು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿ ಪೂರೈಸಿರುವ ವಿವಿಗಳ ಪಟ್ಟಿಯಲ್ಲಿ ಒಂದು ಸಾವಿರಕ್ಕೆ 718 ಅಂಕ ಪಡೆದಿರುವ ಕುವೆಂಪು ವಿವಿ 2019ನೇ ಸಾಲಿನಲ್ಲಿ ಮೂರನೇ ಸ್ಥಾನ ಗಳಿಸಿದೆ. ಮೊದಲೆರಡು ಸ್ಥಾನಗಳನ್ನು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮತ್ತು ಕೆಎಲ್ಇ ವಿವಿಗಳು ಪಡೆದಿವೆ. ಸರ್ಕಾರಿ ಅನುದಾನಿತ ವಿವಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯು ಮೊದಲ ಸ್ಥಾನ ಪಡೆದು ಸಾಧನೆ ಮಾಡಿದೆ.
ಕೆಎಸ್‌ಯುಆರ್‌ಎಫ್ ರ್‍ಯಾಂಕಿಂಗ್ ಅನ್ನು ಶಿಕ್ಷಣ ಸಂಸ್ಥೆಯ ಸಂಶೋಧನೆ, ಆವಿಷ್ಕಾರ, ಭೋಧನೆ, ಮೂಲ ಸೌಕರ್ಯ ಹಾಗೂ ಸಾಮಾಜಿಕ ಪರಿಣಾಮ ಹೀಗೆ ಐದು ಮಾನದಂಡಗಳನ್ನು ಪರಿಗಣಿಸಿ ತಯಾರಿಸಲಾಗುತ್ತದೆ. ಕುವೆಂಪು ವಿವಿಯು ಸಂಶೋಧನೆ ಮತ್ತು ಬೋಧನೆ ವಿಭಾಗಗಳಲ್ಲಿ ಐದಕ್ಕೆ ಐದು ಅಂಕ ಗಳಿಸಿದ್ದು ವಿವಿಯ ಗುಣಮಟ್ಟವನ್ನು ಪ್ರತಿಬಿಂಬಿಸುತ್ತಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

You seem to have an Ad Blocker on.
To continue reading, please turn it off or whitelist Udayavani.