ಮೋದಿಮತ್ತೆ ಪಿಎಂ ಆಗೋದು ನಿಶ್ಚಿತ

ಪುಲ್ವಾಮಾ ದಾಳಿ ಬಗ್ಗೆ ಗೊತ್ತಿದ್ದರೂ ಕುಮಾರಸ್ವಾಮಿ ತಿಳಿಸದೇ ಇದ್ದುದು ಸರಿಯಲ್ಲ: ಬಿಎಸ್‌ವೈ

Team Udayavani, Apr 18, 2019, 12:11 PM IST

18-April-10

ಶಿಕಾರಿಪುರ: ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

ಶಿಕಾರಿಪುರ: ನರೇಂದ್ರ ಮೋದಿ ಅವರು ಅಧಿಕಾರ ವಹಿಕೊಂಡ ಸಮಯದಿಂದ ನಮ್ಮ ಭಾರತದ ಸಾಲ 54 ಲಕ್ಷ ಕೋಟಿ ಇತ್ತು. ಅವರ ಪ್ರಾಮಾಣಿಕತೆ ಹಾಗೂ ಉತ್ತಮ ಆಡಳಿತದಿಂದ ಇಂದು ನಾವು ಬೇರೆ ದೇಶಕ್ಕೆ ಸಾಲ ನೀಡುವ ಸ್ಥಿತಿಗೆ ಬಂದಿದೆ. ಮೋದಿ ಅವರು ವಿಶ್ವದ ನಾಯಕರಾಗಬೇಕೆಂದು ದೇಶದ ಜನ ಬಯಸುತ್ತಿದ್ದಾರೆ. ಈ ಬಾರಿ 300 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಪ್ರಧಾನಿಯಾಗುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಪುಲ್ವಾಮಾ ದಾಳಿ ನನಗೆ ಎರಡು ವರ್ಷದ ಹಿಂದೆ ಗೊತ್ತಿದೆ ಎಂದರು. ಇದನ್ನು ರಾಷ್ಟ್ರಕ್ಕೆ ಏಕೆ ತಿಳಿಸಲಿಲ್ಲ. ನೀವು ದೇಶದ ಮೇಲೆ ಇಟ್ಟಿರುವ ಅಭಿಮಾನ ಎಂತದ್ದು ಎಂದು ದೇಶದ ಜನರಿಗೆ ಗೊತ್ತಾಗಿದೆ. ರಾಜ್ಯದ ಗೌಪ್ಯತೆ ಕಾಪಾಡುವುದಾಗಿ ಹೇಳಿ ಪ್ರಮಾಣ ವಚನ ಸ್ವೀಕರಿಸಿದ ನೀವು ಐಟಿ ದಾಳಿಯಾಗುತ್ತದೆ ಎಂದು ನಿಮ್ಮವರನ್ನು ರಕ್ಷಿಸಿದ್ದೀರಿ. ಮಂಡ್ಯದಲ್ಲಿ ನಿಮ್ಮ ಪುತ್ರನ ಗೆಲುವಿಗೋಸ್ಕರ ರಾಜ್ಯದ ಜನರನ್ನು ನಿರ್ಲಕ್ಷಿಸುತ್ತಿದ್ದೀರಿ. ಐಟಿ ಕಚೇರಿ ಮುಂದೆ ಮುಖ್ಯಮಂತ್ರಿ ಸತ್ಯಾಗ್ರಹ ಮಾಡುತ್ತಾರೆ. ಇಂತಹ ಕೆಟ್ಟ ಸಂಸ್ಕೃತಿ ಇರುವ ನಿಮಗೆ
ಮುಖ್ಯಮಂತ್ರಿಯಾಗಿರುವುದಕ್ಕೆ ಯೋಗ್ಯತೆ ಇಲ್ಲ ಎಂದರು.

ನಮ್ಮ ದೇಶ ಕಾದು ನಮ್ಮನ್ನು ರಕ್ಷಣೆ ಮಾಡುವ ವೀರಯೋಧರನ್ನು ಬಡತನದಿಂದ ಎರಡು ಹೊತ್ತು ಊಟಕ್ಕೆ ಸೇನೆ ಸೇರುತ್ತಾರೆಂದು ಹೇಳುವ ನೀವು ಒಮ್ಮೆ ಯೋಚಿಸಿ ಮಾತನಾಡಬೇಕು. ರಾಜ್ಯದಲ್ಲಿ ನಮ್ಮ ಪಕ್ಷ ಕನಿಷ್ಟ 22 ಸೀಟು ಗೆಲ್ಲುವುದು. ಖಚಿತ. ನಿಮ್ಮ ತಂದೆಯವರಾದ ದೇವೇಗೌಡ್ರು ತುಮಕೂರಿನಲ್ಲಿ ಸೋಲುತ್ತಾರೆ. ಪ್ರಧಾನಿ ಮೋದಿ ಅವರ ಕನಸಿನಂತೆ ರಾಷ್ಟ್ರದ ನದಿಗಳ ಜೋಡಣೆ ಮಾಡಲಾಗುವುದು. ಎಂದರು.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ವಿರೋಧಪಕ್ಷಗಳು ಮೋದಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಾರೆ. ಮೋದಿ ಮಾಡಿದ
ದೇಶದ ಅಭಿವೃದ್ಧಿಯನ್ನು ಕಂಡ ದೇಶದ ಜನ ಮೋದಿಯವರನ್ನು
ನಂಬಿದ್ದಾರೆ. ದೇಶವನ್ನು ಸಮರ್ಥವಾಗಿ ಮನ್ನೆಡಸುವ ಏಕೈಕ ನಾಯಕ ಮೋದಿ ಎಂದರು.

ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿದರು. ಶಾಸಕರಾದ ಕುಮಾರ ಬಂಗಾರಪ್ಪ, ಎಂ.ಪಿ.ರೇಣುಕಾಚಾರ್ಯ, ಅಶೋಕ ನಾಯ್ಕ, ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ರುದ್ರೇಗೌಡ, ಭಾರತಿ ಶೆಟ್ಟಿ, ತಾರಾ ಅನುರಾಧಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.