ಕಮಲಕೋಟೆಯಲ್ಲಿ ಮೈತ್ರಿಕೂಟಕ್ಕೆ ನಿರೀಕ್ಷೆ

ಉಪ ಚುನಾವಣೆಗಿಂತ 20 ಸಾವಿರ ಹೆಚ್ಚು ಮತ ಪಡೆಯುವ ಉತ್ಸಾಹ•ಬಿಜೆಪಿಗೆ ಮೋದಿ ಅಲೆ ಕೈ ಹಿಡಿಯುವ ನಿರೀಕ್ಷೆ

Team Udayavani, May 1, 2019, 4:41 PM IST

Udayavani Kannada Newspaper

ಶಿವಮೊಗ್ಗ: ಬಿಜೆಪಿಯ ಭದ್ರಕೋಟೆ ಎನಿಸಿರುವ ಶಿವಮೊಗ್ಗ ತಾಲೂಕು ಬಿಜೆಪಿಗೆ ಈ ಬಾರಿಯೂ ಕೈ ಹಿಡಿಯುವ ನಿರೀಕ್ಷೆಯಲ್ಲಿದೆ. ಇತ್ತ ಮೈತ್ರಿಕೂಟ ಲೀಡ್‌ ಪಡೆಯದಿದ್ದರೂ ಉಪ ಚುನಾವಣೆಗಿಂತಲೂ 20 ಸಾವಿರ ಹೆಚ್ಚು ಮತ ಪಡೆಯುವ ಉತ್ಸಾಹದಲ್ಲಿದೆ. ನಗರ ಪ್ರದೇಶದ ಬಿಜೆಪಿ ಕೈ ಹಿಡಿಯುತ್ತಾರೋ ಅಥವಾ ಜೆಡಿಎಸ್‌ ಕೈ ಹಿಡಿಯತ್ತಾರೋ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಬಿಜೆಪಿಗೆ ಒಂದು ಲಕ್ಷ ಮತಗಳು ಬಂದಿದ್ದವು. ಈ ಚುನಾವಣೆಯಲ್ಲಿ 1.70 ಸಾವಿರ ಮಂದಿ ಮತ ಚಲಾಯಿಸಿದ್ದರು. 40 ಸಾವಿರ ಮತಗಳ ಅಂತರದಿಂದ ಶಾಸಕ ಕೆ.ಎಸ್‌. ಈಶ್ವರಪ್ಪ ಜಯ ಗಳಿಸಿದ್ದರು. ಅಕ್ಟೋಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ 1.29 ಸಾವಿರ ಮಂದಿ ಮತ ಚಲಾಯಿಸಿದ್ದರು. ಈ ವೇಳೆ ಬಿಜೆಪಿಗೆ 25 ಸಾವಿರ ಮತಗಳ ಲೀಡ್‌ ಬಂದಿತ್ತು. ಜೆಡಿಎಸ್‌ 50 ಸಾವಿರ ಮತ ಪಡೆಯಲು ಯಶಸ್ವಿಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಗಿಂತಲೂ 8 ಸಾವಿರ (1.78ಲಕ್ಷ) ಹೆಚ್ಚಿನ ಮತದಾನವಾಗಿದ್ದು ಈ ಮತಗಳು ಯುವಕರದ್ದಾಗಿದ್ದು ಅವು ಸಹ ಮೋದಿ ಅಲೆಯಲ್ಲಿ ಬಿಜೆಪಿ ಪಾಲಾಗುವ ನಿರೀಕ್ಷೆ ಇಟ್ಟುಕೊಂಡಿದೆ. ನಗರದಲ್ಲಿ 1 ಲಕ್ಷಕ್ಕೂ ಅಧಿಕ ಮತ ಪಡೆಯುವ ಜತೆಗೆ 40 ಸಾವಿರಕ್ಕೂ ಹೆಚ್ಚು ಲೀಡ್‌ ಕೊಡಬೇಕೆಂಬ ದೃಷ್ಟಿಯಿಂದ ಬಿಜೆಪಿ ಕೆಲಸ ಮಾಡಿದೆ. ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರು ಸಹ ಬಿಜೆಪಿಯತ್ತ ಒಲವು ವ್ಯಕ್ತಪಡಿಸಿದ್ದರು. ಈ ಬಾರಿ ಇನ್ನೂ ಹೆಚ್ಚಿನ ಮತ ಸೆಳೆಯಲು ಅಲ್ಪಸಂಖ್ಯಾತರ ಘಟಕದ ಕಾರ್ಯಕರ್ತರು ಮನೆ ಮನೆ ತಲುಪಿ ಮನವಿ ಮಾಡಿದ್ದಾರೆ. ಅಲ್ಲದೇ ಈ ಬಾರಿ ಹಿಂದುತ್ವ ಬಗ್ಗೆ ಹೆಚ್ಚಿನ ಪ್ರಸ್ತಾಪ ಮಾಡದೇ ಇರುವುದರಿಂದ ಬಿಜೆಪಿಗೆ ಅನ್ಯಕೋಮಿನವರು ಮತ ಹಾಕುತ್ತಾರೆ ಎನ್ನುತ್ತಾರೆ ಬಿಜೆಪಿ ಮುಖಂಡರು.

ನಗರದಲ್ಲಿ ಎಲ್ಲ ಜಾತಿ, ಸಮುದಾಯದ ಜನಗಳು ವಾಸವಾಗಿದ್ದು, ಇದರಲ್ಲಿ ಲಿಂಗಾಯತ, ಬ್ರಾಹ್ಮಣ ಹಾಗೂ ಮಸ್ಲಿಮರು ನಿರ್ಣಾಯಕರಾಗಿದ್ದಾರೆ. ಆದರೆ ಬಿಜೆಪಿ ಮಾತ್ರ ನಾವು ಜಾತಿ ಆಧಾರಿತವಾಗಿ ಚುನಾವಣೆ ನಡೆಸುವುದಿಲ್ಲ. ಎಲ್ಲ ಸಮುದಾಯದವರು ನಮಗೆ ಮತ ಹಾಕುತ್ತಾರೆ. ಈ ಬಾರಿ ಯುವ ಸಮದಾಯ ದೊಡ್ಡ ಪ್ರಮಾಣದಲ್ಲಿ ಮೋದಿಯತ್ತ ಆಕರ್ಷಿತರಾಗಿದ್ದು ಗೆದ್ದೇ ಗೆಲ್ಲುತ್ತೀವಿ ಎಂಬ ವಿಶ್ವಾಸದಲ್ಲಿದೆ.

ಉಪ ಚುನಾವಣೆಯಲ್ಲಿ ಜನರ ಬಳಿ ಹೋಗಲು ಆಗಿರಲಿಲ್ಲ. ಆದರೂ ನಮಗೆ 50 ಸಾವಿರ ಮತ ಕೊಟ್ಟಿದ್ದಾರೆ. ಈ ಬಾರಿ ಪ್ರತಿ ಮತದಾರರ ಬಳಿ ಮೂರು ಮೂರು ಬಾರಿ ಹೋಗಿದ್ದೇವೆ. ಮುಸ್ಲಿಮರೇ ಬಹುಸಂಖ್ಯಾತರೇ ಇರುವ ಏರಿಯಾಗಳಲ್ಲಿ ಉಪ ಚುನಾವಣೆಗಿಂತ ಶೇ.30ರಷ್ಟು ಹೆಚ್ಚಿನ ಮತದಾನವಾಗಿದೆ ಅವೆಲ್ಲವೂ ನಮಗೇ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. ಅಲ್ಲದೇ ಅಲ್ಪಸಂಖ್ಯಾತ ಮುಖಂಡರು ಪ್ರಚಾರ ಮಾಡಿದ್ದು, ಹಿಂದುಳಿದ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದು ಈ ಬಾರಿ ಕೈ ಹಿಡಿಯಲಿದೆ. ಜತೆಗೆ ಕಾಂಗ್ರೆಸ್‌ ಕಾರ್ಯಕರ್ತರು ಸಹ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಅದು ಸಹ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ ಮೈತ್ರಿಕೂಟದ ಮುಖಂಡರು.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.