ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ
•ನ್ಯಾಯ ಕೇಳಲು ಹೋದ ಪ್ರಿಯಾಂಕಾ ಗಾಂಧಿ ಬಂಧನದ ಹಿಂದೆ ಉತ್ತರ ಪ್ರದೇಶ ಸರ್ಕಾರದ ಷಡ್ಯಂತ್ರ
Team Udayavani, Jul 21, 2019, 11:22 AM IST
ಶಿವಮೊಗ್ಗ: ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಶಿವಮೊಗ್ಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಬಂಧನ ಖಂಡಿಸಿ ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನಾ ಮೆರವಣಿಗೆ ನಡೆಸಿತು.
ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಹೊರಟು ಮಹಾವೀರ ಸರ್ಕಲ್ನಲ್ಲಿ ಮಾನವ ಸರಪಳಿ ರಚನೆ ಮಾಡಿ ಘಟನೆ ಖಂಡಿಸಿದರು.
ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬಡವರ ಪರವಾಗಿ ನ್ಯಾಯ ಕೇಳಲು ಹೋಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ಬಿಜೆಪಿ ಸರ್ಕಾರದ ಕುಮ್ಮಕ್ಕಿನಿಂದ ಬಂಧಿಸಿದ್ದಾರೆ. ಇದು ಅತ್ಯಂತ ಖಂಡನೀಯ. ಬಿಜೆಪಿಯ ಯೋಗಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ದೂರಿದರು.
ಉತ್ತರ ಪ್ರದೇಶದಲ್ಲಿ ಭೂ ವಿವಾದದಲ್ಲಿ 10 ಬಡ ರೈತರನ್ನು ಒಕ್ಕಲೆಬ್ಬಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ನ್ಯಾಯ ಕೇಳಲು ಹೊರಟಿದ್ದಾಗ ಅದಕ್ಕೆ ಅವಕಾಶ ನೀಡಲಿಲ್ಲ. ಇದು ಅಸಂವಿಧಾನಿಕವಾಗಿದೆ. ಬಡವರ ಪರವಾಗಿ ನ್ಯಾಯ ಕೇಳಲು ಹೋದರೆ ಬಂಧಿಸುವ ಪರಿ ಪ್ರಜಾಪ್ರಭುತ್ವದಲ್ಲಿ ಎಷ್ಟರಮಟ್ಟಿಗೆ ಸರಿ ಎಂದು ಪ್ರತಿಭಟನಾಕಾರರು ಪ್ರಶ್ನೆ ಮಾಡಿದರು.
ಪ್ರಜಾಪ್ರಭುತ್ವದ ಮೌಲ್ಯ ದಮನಗೊಳಿಸಲು ಪ್ರಯತ್ನಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಈ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಲ್. ಸತ್ಯನಾರಾಯಣ್ ರಾವ್, ಎಲ್. ರಾಮೇಗೌಡ, ರಮೇಶ್ ಹೆಗ್ಡೆ, ವೈ.ಎಚ್. ನಾಗರಾಜ್, ಸತ್ಯನಾರಾಯಣ್ ಆರ್, ಚಂದ್ರಭೂಪಾಲ್, ಹುಲ್ತಿಕೊಪ್ಪ ಶ್ರೀಧರ್, ಡಾ| ಶ್ರೀನಿವಾಸ್, ಎಸ್.ಪಿ. ದಿನೇಶ್, ವಿಜಯಲಕ್ಷ್ಮಿ ಸಿ.ಪಾಟೀಲ್, ವಿಶ್ವನಾಥ್ ಕಾಶಿ, ನಾಗರಾಜ್, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.