ಬೆಂಗಳೂರಿಗೆ ನೀರು ಹರಿಸಲು ವಿರೋಧ
ಮಲೆನಾಡಿನ ಸಂಪತ್ತು ನಾಶಪಡಿಸುವುದು ಖಂಡನೀಯ: ಪ್ರತಿಭಟನಾಕಾರರ ಆಕ್ರೋಶ
Team Udayavani, Jul 4, 2019, 11:51 AM IST
ಶಿವಮೊಗ್ಗ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು
ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧ ಮುಂದುವರಿದಿದ್ದು ಬುಧವಾರ ಕೂಡ ಹಲವು ಸಂಘಟನೆಗಳ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧಿಸಿ ಕೋಟೆ ಯುವಕ ಸಂಘ ಮತ್ತು ಕಲಾಜ್ಯೋತಿ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರಾದ ಮಂಜುನಾಥ್, ದೀನದಯಾಳು, ಬಾಲಚಂದ್ರ, ಚೇತನ್, ಸತ್ಯನಾರಾಯಣ, ರೇಣುಕಪ್ಪ ಮತ್ತಿತರರು ಇದ್ದರು.
ಸಿಹಿಮೊಗ್ಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧಿಸಿ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಬೆಂಗಳೂರಿಗೆ ಶರಾವತಿ ನೀರನ್ನು ಹರಿಸಬಾರದು ಎಂದು ಒತ್ತಾಯಿಸಿದರು. ಜೋಗದಿಂದ ಸುಮಾರು 400 ಕಿಮೀ ದೂರದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮುಂದಾದರೆ ಅರಣ್ಯ ಭೂಮಿ, ಸಂಪನ್ಮೂಲ ನಾಶವಾಗಿ ಪರಿಸರ ಅಸಮತೋಲನಕ್ಕೆ ಕಾರಣವಾಗುತ್ತದೆ ಎಂದರು. ಲಿಂಗನಮಕ್ಕಿ ಮತ್ತು ಇತರೆ ಅಣೆಕಟ್ಟುಗಳ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಕಾರ್ಯ ಆಗಿಲ್ಲ. ಈಗ ಶರಾವತಿಯನ್ನೇ ಕಬಳಿಸಲು ಹೊರಟಿರುವ ಪ್ರಸ್ತಾವನೆ ಸ್ಥಳೀಯ ಜನಸಮುದಾಯದ ಹಿತಕ್ಕೆ ವಿರುದ್ಧವಾಗಿದೆ ಎಂದರು.
ಈ ಪ್ರದೇಶದ ಜನಸಮುದಾಯಕ್ಕೆ ಮೂಲ ಸೌಕರ್ಯ ದೊರೆತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಶರಾವತಿ ನದಿ ನೀರು ಸರಬರಾಜು ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಪಿ.ಒ. ಶಿವಕುಮಾರ್, ಟಿ.ಜೆ. ರವಿಕುಮಾರ್, ಎಸ್.ಸಿ. ಮಂಜಪ್ಪ ಮತ್ತಿತರರು ಇದ್ದರು.
ಅನುದಾನ ರಹಿತ ಶಿಕ್ಷಣ ಶಿಕ್ಷಕರ ಸಂಘ: ಲಿಂಗನಮಕ್ಕಿ ಜಲಾಶಯದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಹುನ್ನಾರ ನಡೆಸುತ್ತಿರುವುದು ಸರಿಯಲ್ಲ. ಈ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ದೂರಿದರು. ಜಿಲ್ಲೆಯ ಎಲ್ಲ ಗ್ರಾಮಗಳಿಗೆ ನೀರಿನ ಬವಣೆ ನೀಗಿಸುವ ಮೂಲಕ ಜಿಲ್ಲೆಯ ಜನತೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಕಾರಿಗಳು ಇದ್ದರು.
ಖಾಸಗಿ ಬಸ್ ಏಜೆಂಟರ ಸಂಘ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಖಾಸಗಿ ಬಸ್ ಏಜೆಂಟರ ಸಂಘದಿಂದ ಶಿವಮೊಗ್ಗ ಮತ್ತು ಸಾಗರದಲ್ಲಿ ಪತ್ರ ಚಳವಳಿ ನಡೆಸಲಾಯಿತು. ಬೆಂಗಳೂರಿಗೆ ತೆರಳುವ ಬಸ್‌ಗಳಲ್ಲಿ ಶರಾವತಿ ಉಳಿಸಿ ಸಂದೇಶದ ಬ್ಯಾನರ್ ಹಾಕಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Manipal: ಅಪಘಾತ ತಡೆಯಲು ಹೀಗೆ ಮಾಡಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.