ಒಲಂಪಿಕ್ ಕ್ರೀಡಾಕೂಟದ ಯಶಸ್ಸಿಗೆ ಕರೆ
ಕ್ರೀಡಾಂಗಣ ಸುಸ್ಥಿತಿಯಲ್ಲಿಡಿದುರಸ್ತಿ ಕಾರ್ಯಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರ ಸೂಚನೆ
Team Udayavani, Oct 17, 2019, 2:30 PM IST
ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನ. 23ರಿಂದ 30ರವರೆಗೆ ನಡೆಯಲಿರುವ ರಾಜ್ಯಮಟ್ಟದ ಒಲಂಪಿಕ್ ಕ್ರೀಡಾಕೂಟದ ಯಶಸ್ವಿ ಆಯೋಜನೆಗೆ ಎಲ್ಲರೂ ಕೈ ಜೋಡಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಬುಧವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಕ್ರೀಡಾಕೂಟದ ಆಯೋಜನೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳ ವಾಸ್ತವ್ಯ, ಊಟ ಉಪಾಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕಾಗಿದೆ. ಎಲ್ಲಾ ಕ್ರೀಡಾಸಂಸ್ಥೆಗಳು ಸಕ್ರಿಯವಾಗಿ ಜವಾಬ್ದಾರಿ ವಹಿಸಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು.
ಕ್ರೀಡಾಕೂಟದ ಆಯೋಜನೆಗೆ ಪೂರ್ವದಲ್ಲಿ ಕ್ರೀಡಾಂಗಣವನ್ನು ಸುಸಜ್ಜೀಕರಣಗೊಳಿಸಬೇಕು. ದುರಸ್ತಿ ಕಾರ್ಯಗಳಿದ್ದರೆ ತಕ್ಷಣ ಪ್ರಸ್ತಾವನೆ ಸಲ್ಲಿಸಬೇಕು. ಕ್ರೀಡಾಕೂಟದ ಬಳಿಕ ಕ್ರೀಡಾ ಸಾಮಗ್ರಿಗಳನ್ನು ಜಿಲ್ಲೆಯ ಕ್ರೀಡಾ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಒಟ್ಟು 25 ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸುಮಾರು 4 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಶಿವಮೊಗ್ಗ ಹಾಗೂ ಕೆಲವು ತಾಲೂಕು ಕೇಂದ್ರಗಳಲ್ಲಿ ಕೆಲವು ಸ್ಪರ್ಧೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಅಥ್ಲೆಟಿಕ್ಸ್, ಸ್ವಿಮ್ಮಿಂಗ್, ರೆಸ್ಲಿಂಗ್, ಆರ್ಚರಿ, ಫೆನ್ಸಿಂಗ್, ಸೈಕ್ಲಿಂಗ್, ಜೂಡೋ, ಹಾಕಿ, ಬ್ಯಾಡ್ಮಿಂಟನ್, ನೆಟ್‌ಬಾಲ್, ಬಾಲ್‌ಬ್ಯಾಡ್ಮಿಟನ್ ಸೇರಿದಂತೆ 25 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗಳನ್ನು ನಡೆಸಬಹುದಾದ ಸ್ಥಳಗಳ ಪರಿಶೀಲನೆ ನಡೆಸಲಾಗಿದ್ದು, ನೆಹರು ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ, ಕೃಷಿ ವಿಶ್ವವಿದ್ಯಾಲಯ, ಪೆಸೆಟ್ ಕಾಲೇಜು, ಡಿವಿಎಸ್ ಕಾಲೇಜು, ಅಕ್ಷರ ಒಳಾಂಗಣ ಕ್ರೀಡಾಂಗಣಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಶಿವಮೊಗ್ಗದಲ್ಲಿ ಕ್ರೀಡಾಕೂಟ ಆಯೋಜನೆಯಿಂದ ಸ್ಥಳೀಯವಾಗಿ ಕ್ರೀಡಾ ಮೂಲ ಸೌಕರ್ಯಗಳ ಉನ್ನತೀಕರಣ ಸಾಧ್ಯವಿದೆ. ಹಾಗೂ ಸ್ಥಳೀಯ ಕ್ರೀಡಾಪಟುಗಳ ಭವಿಷ್ಯದ ದೃಷ್ಟಿಯಿಂದ ಇದೊಂದು ಉತ್ತಮ ಅವಕಾಶವಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಕ್ರೀಡಾಪಟುಗಳಿಗೆ ವಾಸ್ತವ್ಯಕ್ಕಾಗಿ ಈಗಾಗಲೇ ಪೂರ್ವಭಾವಿ ಸಿದ್ಧತೆ ನಡೆಸಲಾಗಿದೆ. ಶಿವಮೊಗ್ಗ ನಗರದಲ್ಲಿ 450, ಸಾಗರದಲ್ಲಿ 300 ಹಾಗೂ ಭದ್ರಾವತಿಯಲ್ಲಿ 100 ಹೊಟೇಲ್ ರೂಮ್‌ಗಳನ್ನು ಗುರುತಿಸಲಾಗಿದ್ದು, ಹಾಸ್ಟೆಲ್‌ಗಳು ಸೇರಿದಂತೆ ವಾಸ್ತವ್ಯಕ್ಕೆ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಸಿಇಒ ವೈಶಾಲಿ, ಶಾಸಕ ಅಶೋಕ ನಾಯ್ಕ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಕಾರ್ಯದರ್ಶಿ ಅನಂತರಾಜು, ಅರುಣ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.