ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ತನಿಖೆಗೆ ಆಗ್ರಹ

ತಾಂತ್ರಿಕ ಮಹಾವಿದ್ಯಾಲಯ ಸಮಸ್ಯೆಗಳ ಸರಮಾಲೆಯಾಗಿದ್ದು ದುರಂತ: ಆರೋಪ

Team Udayavani, Jun 23, 2019, 4:56 PM IST

23–June-40

ಶಿವಮೊಗ್ಗ: ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಶಿವಮೊಗ್ಗ: ಬೆಳಗಾವಿಯ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್‌ ಪದವಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಂಡಿಸಿ ಶನಿವಾರ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಒಂದಲ್ಲ ಒಂದು ಹಗರಣಗಳಲ್ಲಿ ಸಿಲುಕಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬದಲು ಸಮಸ್ಯೆಗಳ ಸರಮಾಲೆಯಾಗಿ ಎದ್ದು ನಿಂತಿದೆ. ಈ ವಿವಿಯ ಭ್ರಷ್ಠಾಚಾರ, ಮೌಲ್ಯಮಾಪನ, ಪರೀಕ್ಷಾ ಗೊಂದಲಗಳು, ಅಂಕಪಟ್ಟಿ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳ ನಡುವೆ ನರಳುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು.

ಇದೆಲ್ಲರ ನಡುವೆ ಮೊನ್ನೆಯಿಂದ ಆರಂಭವಾದ ಇಂಜಿನಿಯರಿಂಗ್‌ ಪರೀಕ್ಷೆಯ ಪ್ರತಿಯೊಂದು ಪ್ರಶ್ನೆ ಪತ್ರಿಕೆಯು ಸೋರಿಕೆಯಾಗುತ್ತಿರುವುದು ಖಂಡನೀಯ. ಪ್ರಶ್ನೆ ಪತ್ರಿಕೆಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ವಿದ್ಯಾರ್ಥಿಗಳಿಗೆ ತಲುಪಿಸಬೇಕಾದ ವಿವಿಯು ಇಂದು ಬೀದಿಯಲ್ಲಿ ಬಿಕಾರಿಯಾಗಿ ಪ್ರಶ್ನೆ ಪತ್ರಿಕೆಗಳು ಹರಿದಾಡುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ವಿವಿಯೇ ಇತ‌ಂಹ ಹಗರಣಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ ವಿಷಯ. ಪ್ರತಿಯೊಂದು ಪ್ರಶ್ನೆಪತ್ರಿಕೆ10 ಸಾವಿರ ರೂ.ಗೆ ಮಾರಾಟವಾಗುತ್ತಿರುವುದು ಬಯಲಾಗಿದೆ. ವಿವಿಯಲ್ಲಿ ಸ್ಟ್ರಾಂಗ್‌ ರೂಂ ಇತ್ಯಾದಿ ವ್ಯವಸ್ಥೆಗಳಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ವಿವಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟಪಡಿಸುತ್ತದೆ ಹಾಗೂ ವಿವಿಯು ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಾವಂತ ಹಾಗೂ ಪ್ರಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮುಂದೆಂದೂ ಈ ರೀತಿ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಹಾಗೂ ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಎಬಿವಿಪಿ ನಗರ ಕಾರ್ಯದರ್ಶಿ ಅರುಣ್‌ಕುಮಾರ್‌, ಸಚ್ಚಿನ್‌, ಸುಭಾಷ್‌, ಪ್ರಜ್ವಲ್, ವಿವೇಕ್‌, ಪ್ರೇವå, ಸಂಜಯ್‌ ವಹಿಸಿದ್ದು, ಡಿವಿಎಸ್‌ ಹಾಗೂ ಗುರುಕುಲ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.