ಮಲೆನಾಡಿನ ವೈಭವ ಮರೆ: ಡಿಸಿ
ಸ್ವಚ್ಛತಾ ಕಾರ್ಯಕ್ರಮ•ಪರಿಸರ ರಕ್ಷಣೆಗೆ ಸಂಕಲ್ಪ ಮಾಡಿ
Team Udayavani, Jun 6, 2019, 4:10 PM IST
ಶಿವಮೊಗ್ಗ: ಗಾಂಧಿ ಬಜಾರ್ ರಸ್ತೆಯಲ್ಲಿ ಜಿಲ್ಲಾಧಿಕಾರಿ ಸ್ವಚ್ಛತೆ ಕಾರ್ಯ ಕೈಗೊಂಡರು. ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಮೇಯರ್ ಲತಾ ಗಣೇಶ್ ಇತರರಿದ್ದರು
ಶಿವಮೊಗ್ಗ: ಸಹ್ಯಾದ್ರಿಯ ಹೆಬ್ಟಾಗಿಲೆನಿಸಿದ್ದ ಹಾಗೂ ಜೀವ ವೈವಿಧ್ಯತೆಯ ತಾಣಕ್ಕೆ ಹೆಸರಾಗಿದ್ದ ಶಿವಮೊಗ್ಗ ಜಿಲ್ಲೆ ಕೆಲವೇ ವರ್ಷಗಳಿಂದೀಚೆಗೆ ತನ್ನ ಮಲೆನಾಡಿನ ವೈಭವವನ್ನು ಕಳೆದುಕೊಂಡು ಪರಿಸರದ ಅಸಮತೋಲನಕ್ಕೆ ಕಾರಣವಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಹೇಳಿದರು.
ಬುಧವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆಯು ಜಿಲ್ಲಾಡಳಿತ, ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನುಷ್ಯ ಪರಿಸರದ ಮೇಲೆ ಮಾಡುತ್ತಿರುವ ಅವ್ಯಾಹತ ದಾಳಿಯಿಂದಾಗಿ ಪರಿಸರದ ಅಸಮತೋಲನಕ್ಕೆ ಕಾರಣವಾಗಿದೆ. ವಾಡಿಕೆಯಂತೆ ಕಾಲಕಾಲಕ್ಕೆ ಆಗುತ್ತಿದ್ದ ಮಳೆ ಕಾಣೆಯಾಗಿದೆ. ಇದಕ್ಕೆ ನಮ್ಮಲ್ಲಿ ಪರಿಸರದ ಮೇಲಿನ ಅನಾಸಕ್ತಿಯೇ ಕಾರಣವಾಗಿದೆ ಎಂದರು.
ನಮ್ಮ ಸಂತೋಷಕ್ಕಾಗಿ ಬಳಸುವ ಪ್ಲಾಸ್ಟಿಕ್ ಇಂದು ದೈತ್ಯ ಭೂತವಾಗಿ ನಮ್ಮೆದುರು ನಿಂತಿದೆ. ಅದರ ಸೂಕ್ತ ವಿಲೇವಾರಿಗೂ ನಾವು ಗಮನ ಹರಿಸುತ್ತಿಲ್ಲ. ಇಚ್ಛಾಶಕ್ತಿಯ ಕೊರತೆಯೂ ಅದಕ್ಕೆ ಕಾರಣವಿರಬಹುದು. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ, ಅದರ ಸಮತೋಲನ ಕಾಯ್ದುಕೊಳ್ಳಲು ಎಲ್ಲರೂ ಸಂಕಲ್ಪ ಮಾಡಬೇಕು. ಕೇವಲ ಗಿಡ ನೆಟ್ಟು ಪರಿಸರ ದಿನ ಆಚರಿಸುವುದಕ್ಕಿಂತ ನೆಟ್ಟಿರುವ ಗಿಡಗಳನ್ನು ಜತನದಿಂದ ಕಾಯ್ದು ಪೋಷಿಸುವ ಅಗತ್ಯವಿದೆ. ಪ್ರಸ್ತುತ ಸಂದರ್ಭದಲ್ಲಿ ಶಿವಮೊಗ್ಗ ನಗರದಲ್ಲಿ ವಿಶೇಷವಾಗಿರುವಂತೆ ಆಚರಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಶಾಲಾ-ಕಾಲೇಜುಗಳ ಒಂದು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಒಂದೆಡೆ ಕಲೆತು ನಂತರ ಪಾಲಿಕೆ ವ್ಯಾಪ್ತಿಯ 35 ವಾರ್ಡುಗಳಲ್ಲಿ 35 ತಂಡಗಳಾಗಿ ಸಂಚರಿಸಿ, ಅಲ್ಲಿನ ಕಸ ಮತ್ತು ಪ್ಲಾಸ್ಟಿಕ್‌ನ್ನೂ ಆಯ್ದು ತರಲಾಗುವುದು. ಆ ಮೂಲಕ ನಗರದ ನಾಗರಿಕರಿಗೆ ಪರಿಸರ ಸ್ವಚ್ಛತೆಯ ಅರಿವು ಮೂಡಿಸಲಾಗುವುದು. ಅಲ್ಲದೆ ಕಸದ ವ್ಯವಸ್ಥಿತ ವಿಲೇವಾರಿ ಮಾಡುವಂತೆ ತಿಳಿಸಲಾಗುವುದು. ಪರಿಸರ ಸಂರಕ್ಷಣೆ ಕೇವಲ ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಜವಾಬ್ದಾರಿಯಲ್ಲ. ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸಲು, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂತೋನಿ ಮರಿಯಪ್ಪ, ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಜೆಸಿಂತಾ ಡಿಸೋಜ ಸೇರಿದಂತೆ ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.