ಕತ್ತಲೆಯಿಂದ ಬೆಳಕಿನೆಡೆಗೆ ಸಾಗಿ
ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಕರೆ
Team Udayavani, Aug 29, 2019, 11:49 AM IST
ಶೃಂಗೇರಿ: ಆದಿಚುಂಚನಗಿರಿ ಶಾಖಾ ಮಠದಲ್ಲಿ ಆಯೋಜಿಸಿದ್ದ ಶ್ರಾವಣ ಪೂಜೆ ಕಾರ್ಯಕ್ರಮಕ್ಕೆ ಶ್ರೀ ಗುಣನಾಥ ಸ್ವಾಮೀಜಿ ಚಾಲನೆ ನೀಡಿದರು.
ಶೃಂಗೇರಿ: ಕತ್ತಲು ಅಜ್ಞಾನ. ಬೆಳಕು ಜ್ಞಾನ. ಕತ್ತಲಿನಿಂದ ಬೆಳಕಿನೆಡೆಗೆ ಸಾಗುವುದೇ ಮಾನವನ ಮುಖ್ಯ ಗುರಿ. ಅದನ್ನು ಬಿಟ್ಟು ನಾವಿಂದು ಲೌಕಿಕ ಹಾದಿಯಲ್ಲಿ ಕಾಲ ವ್ಯರ್ಥ ಮಾಡುತ್ತಿದ್ದೇವೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಆಯೋಜಿಸಿದ್ದ ಕೊನೆಯ ಶ್ರಾವಣ ಪೂಜೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಅನ್ನ ಎಂಬುದು ಹಸಿವನ್ನು ನೀಗಿಸುತ್ತದೆ. ಸರ್ವ ಜನಾಂಗದವರು ಸ್ವೀಕರಿಸುವ ಉನ್ನತ ಪ್ರಸಾದ. ಹಾಗೆಯೇ, ಅಧ್ಯಾತ್ಮ ಎಂಬುದು ಸರ್ವರಿಗೂ ಲಭಿಸುವ ಮೌಲ್ಯ. ಈ ಮೌಲ್ಯಗಳನ್ನು ದಕ್ಕಿಸಿಕೊಂಡರೆ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯ. ಬೆಳಕು ನಮ್ಮದಾಗಬೇಕಾದರೆ ಭಗವಂತನ ಚಿಂತನೆ ಮುಖ್ಯ. ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಇರಬೇಕು. ನಾವು ಮಾಡುವ ಕಾರ್ಯದಲ್ಲಿ ಶ್ರದ್ಧೆ ಇರಬೇಕು. ದೇವರಲ್ಲಿ ಮತ್ತು ಅಧ್ಯಾತ್ಮದಲ್ಲಿ ನಂಬಿಕೆ ಬೇಕು. ಮಾನವ ಬೆಳಕಿಗಾಗಿ ನಿರಂತರ ಹುಡುಕಾಟ ಮಾಡಬೇಕು. ಆಗ ಮಾತ್ರ ಅಲೌಕಿಕ ಬೆಳಕು ಗೋಚರವಾಗುತ್ತದೆ ಎಂದರು.
ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ನಮ್ಮ ಸಂಸ್ಕೃತಿಯ ಮಹಾಮಹಿಮರು ಬೆಳಕಿನತ್ತ ಸಾಗಿದರು. ಅವರ ದೂರದೃಷ್ಟಿತ್ವ ಅಧ್ಯಾತ್ಮಿಕದ ಕಡೆಯಿತ್ತು. ಸ್ವಾರ್ಥದ ಬದುಕಿನಲ್ಲಿ ಕತ್ತಲು ಹೆಚ್ಚು. ನಿಸ್ವಾರ್ಥದಲ್ಲಿ ಬೆಳಕಿನ ಕಿಡಿ ಹೊರಹೊಮ್ಮಲು ಸಾಧ್ಯ. ಕತ್ತಲಿನಿಂದ ಬೆಳಕಿನೆಡೆಗೆ ಸಾಗುವುದೇ ಮಾನವನ ನಿಜವಾದ ಗುರಿ. ಈ ಹಾದಿ ಸಿಗಬೇಕಾದರೆ ನಮ್ಮೊಳಗಿನ ಅಹಂಕಾರವನ್ನು ಕಳಚಬೇಕು ಎಂದು ತಿಳಿಸಿದರು.
ಮಂಗಳೂರು ಆದಿಚುಂಚನಗಿರಿ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಭಗವಂತನು ಸರ್ವರಲ್ಲೂ ಇದ್ದಾನೆ ಎಂಬ ನಂಬಿಕೆಯಿಂದ ಗುರುಗಳಾದ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಅನ್ನ, ಆಹಾರ, ಆರೋಗ್ಯ, ಶಿಕ್ಷಣ, ಅರಣ್ಯ, ಅಭಯ ಎಂಬ ಯೋಜನೆಯನ್ನು ಹುಟ್ಟು ಹಾಕಿದರು. ಸರ್ವರಿಗೂ ಸಮಬಾಳು-ಸಮಪಾಲು ಎಂಬ ಅವರ ವಿಶಾಲ ದೃಷ್ಟಿಕೋನ ಸರ್ವರಿಗೂ ಮಾದರಿ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವಿಂದು ಮುನ್ನಡೆಯುವ ಯತ್ನದಲ್ಲಿದ್ದೇವೆ ಎಂದರು.
ಪೂಜಾ ಕಾರ್ಯಕ್ರಮದಲ್ಲಿ ದಸರಿಗಟ್ಟ ಆದಿಚುಂಚನಗಿರಿ ಶಾಖಾ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಕಬಳಿ ಮಠದ ಶಿವಪುತ್ರನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಮಠದ ಮಂಗಳನಾಥ ಸ್ವಾಮೀಜಿ, ಚುಂಚನಕಟ್ಟೆ ಮಠದ ಶಿವಾನಂದನಾಥ ಸ್ವಾಮೀಜಿ, ಚಿಕ್ಕಮಗಳೂರು ಬಿಜಿಎಸ್ ಶಾಖೆ ಆಡಳಿತಾಧಿಕಾರಿ ಕೆ.ಸಿ.ನಾಗೇಶ್, ಕಿರಣ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.