ಹದಗೆಟ್ಟ ರಸ್ತೆ ದುರಸ್ತಿ ಮಾಡಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿ
ನಿರ್ಲಕ್ಷ್ಯಕ್ಕೊಳಗಾದ ಮರ್ಕಲ್ ಗ್ರಾಪಂ ವ್ಯಾಪ್ತಿಯ ಕಿಗ್ಗಾ ಸಿರಿಮನೆ ರಸ್ತೆ
Team Udayavani, Jul 25, 2019, 11:34 AM IST
ಶೃಂಗೇರಿ: ಮರ್ಕಲ್ ಗ್ರಾಪಂನ ಕಿಗ್ಗಾ ಸಿರಿಮನೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.
•ರಮೇಶ್ ಕರುವಾನೆ
ಶೃಂಗೇರಿ: ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುವ ತಾಲೂಕಿನ ಮರ್ಕಲ್ ಗ್ರಾಪಂ ವ್ಯಾಪ್ತಿಯ ಕಿಗ್ಗಾ ಸಿರಿಮನೆ ರಸ್ತೆ ಹಾಳಾಗಿರುವುದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರತಿದಿನ ನೂರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ದೇವಾಲಯದಲ್ಲಿ ದರ್ಶನ ಮಾಡಿದ ನಂತರ ಇಲ್ಲಿಂದ 8 ಕಿ.ಮೀ. ದೂರದಲ್ಲಿರುವ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಾದ ಸಿರಿಮನೆ ಜಲಪಾತ ವೀಕ್ಷಿಸಲು ತೆರಳುತ್ತಾರೆ. ಆದರೆ, ಸಿರಿಮನೆ ಜಲಪಾತಕ್ಕೆ ತೆರಳುವುದು ಹರಸಾಹಸವೇ ಆಗಿದೆ. ತೀವ್ರ ಹದಗೆಟ್ಟಿರುವ ರಸ್ತೆಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಡಾಂಬರು ಕಾಣದೆ ದಶಕಗಳೇ ಕಳೆದಿವೆ. ಕಲ್ಲು-ಮಣ್ಣು, ಜಲ್ಲಿ ಕಲ್ಲು ಮೇಲೆದ್ದಿರುವುದರಿಂದ ಸಂಚಾರಕ್ಕೆ ಇನ್ನಿಲ್ಲದ ಅಡಚಣೆಯಾಗಿದೆ.
ಇದೀಗ ಮಳೆಗಾಲದ ಸಮಯದಲ್ಲಿ ಮಳೆ ನೀರೆಲ್ಲ ರಸ್ತೆ ಮೇಲೆ ಹರಿಯುವುದರಿಂದ ದುರಸ್ತಿ ಕಾಣದ ಕಿರಿದಾದ ರಸ್ತೆಯಲ್ಲಿ ಪ್ರಯಾಣಿಕರು ಪ್ರಯಾಸಪಡಬೇಕಿದೆ.
ಈ ರಸ್ತೆ ಮರ್ಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹತ್ತಾರು ಹಳ್ಳಿಗಳಿಗೆ ಕಲ್ಪಿಸುವ ರಸ್ತೆಯಾಗಿದೆ. ಗ್ರಾಮಸ್ಥರು ಪಟ್ಟಣ, ಆಸ್ಪತ್ರೆ ಸೇರಿದಂತೆ ಎಲ್ಲಾ ಕಾರ್ಯಗಳಿಗೆ ವಾಹನಗಳಲ್ಲಿ ಇದೇ ರಸ್ತೆಯಲ್ಲಿ ಸಂಚರಿಸಬೇಕು. ಈ ರಸ್ತೆಯಲ್ಲಿ ಬಸ್ ಸಂಚಾರ ವ್ಯವಸ್ಥೆ ಇಲ್ಲ. ಖಾಸಗಿ ವಾಹನಗಳನ್ನು ಬಿಟ್ಟರೆ ಶಾಲಾ-ಕಾಲೇಜು ಹಾಗೂ ಆಸ್ಪತ್ರೆಗೆ ನಡೆದುಕೊಂಡೇ ಹೋಗಬೇಕಾಗಿದೆ. ಬಡತನ ರೇಖೆಗಿಂತ ಕೆಳಗಿರುವವರು ಅಗತ್ಯ ಕೆಲಸಗಳಿಗೆ ಬರಬೇಕಾದರೆ ಹಾಗೂ ರೋಗಿಗಳು ತುರ್ತು ಚಿಕಿತ್ಸೆಗೆ ತೆರಳಲು ಹರಸಾಹಸ ಪಡಬೇಕಾಗಿದೆ. ಈ ಹಿಂದೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಯ ಅಭಿವೃದ್ಧಿಗೊಂಡಿತ್ತು. ಆದರೆ, ಇದೀಗ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದೇ ಮಾರ್ಗದಲ್ಲಿ ಪ್ರತಿನಿತ್ಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಂಚರಿಸುತ್ತಲೇ ಇರುತ್ತಾರೆ. ರಸ್ತೆ ಸಂಪೂರ್ಣ ಹಾನಿಗೊಂಡಿದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ, ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿಲ್ಲ. ಇನ್ನಾದರೂ ಈ ಭಾಗದಲ್ಲಿನ ರಸ್ತೆಯ ಅಭಿವೃದ್ಧಿಗೆ ಆದ್ಯತೆ ನೀಡುವರೋ ಕಾದು ನೋಡಬೇಕಿದೆ.
•ಬಿ.ಶಿವಶಂಕರ್, ಜಿಪಂ ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.