ನಕಲಿ ಹತ್ತಿ ಬೀಜಗಳ ಮಾರಾಟ ಜಾಲಕ್ಕೆ ಸಿಕ್ಕಿರೀ ಜೋಕೆ!

ಇಳುವರಿ ಹೆಚ್ಚಿಸುವ ಬೀಜ-ರಸಗೊಬ್ಬರ ಕಾಯ್ದಿರಿಸಲು ಸಲಹೆ

Team Udayavani, Jun 7, 2019, 11:43 AM IST

07-Jun-13

ಬಸವರೆಡ್ಡಿ
ಸಿರುಗುಪ್ಪ:
ಇನ್ನೇನು ಮುಂಗಾರು ಶುರುವಾಗುತ್ತಿದ್ದು, ತಾಲೂಕಿನೆಲ್ಲೆಡೆ ರೈತಾಪಿ ವರ್ಗ ಕೃಷಿ ಚಟುವಟಿಕೆಗೆ ಸಿದ್ಧತೆ ಮಾಡುತ್ತಿದೆ. ಇದರ ಜತೆಗೆ ಕೆಲ ಖಾಸಗಿ ಬಿತ್ತನೆ ಬೀಜ ಮಾರಾಟ ಕಂಪನಿಗಳು ತಾಲೂಕಿನ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಆದರೆ ಅಂತಹ ಕಡೆ ಖರೀದಿಸಿದ ಬೀಜಗಳು ಕೆಲವೊಮ್ಮೆ ವಿಫಲಗೊಳ್ಳುತ್ತಿದ್ದು, ರೈತರು ಕೈ ಸುಟ್ಟುಕೊಳ್ಳುವ ಸಾಧ್ಯತೆ ಇದೆ. ಇಂತಹ ಕಡೆ ಬೀಜಗಳನ್ನು ಖರೀದಿಸದಂತೆ ಅನೇಕ ಬಾರಿ ಎಚ್ಚರಿಕೆ ನೀಡಿದೆಯಾದರೂ ಗಡಿಭಾಗದ ಸೀಮಾಂದ್ರ ಮತ್ತು ತೆಲಂಗಾಣದ ಕೆಲವು ಖಾಸಗಿ ಕಂಪನಿಗಳು ಗಡಿಭಾಗದ ಪ್ರದೇಶಗಳಲ್ಲಿ ಪ್ರಚಾರ ಮಾಡುತ್ತಿವೆ.

ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಪ್ರದೇಶ, ಬೋರ್‌ವೆಲ್ ನೀರಿನ ಸೌಲಭ್ಯ ಹೊಂದಿದ ರೈತರು ಸುಮಾರು 22 ರಿಂದ 25ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯುತ್ತಾರೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹತ್ತಿಯನ್ನು ಬೆಳೆಯುವ ರೈತರು ತಾಲೂಕಿನಲ್ಲಿರುವುದರಿದಂದ ಹತ್ತಿ ಬೀಜ ಮಾರಾಟಗಾರರು, ರೈತರ ಹತ್ತಿರ ಬೀಜ ಮಾರಾಟ ಮಾಡಲು ಹಳ್ಳಿಗಳಿಗೆ ಬರುವುದು ಸಾಮಾನ್ಯವಾಗಿದೆ.

ಎಕರೆಗೆ 10ರಿಂದ 20 ಕ್ವಿಂಟಲ್ ಹತ್ತಿ ಇಳುವರಿ ಬರಲಿದೆ. ಕ್ರಿಮಿನಾಶಕದ ಹೆಚ್ಚಿನ ಅಗತ್ಯವಿಲ್ಲ, ರೋಗ, ರುಜಿನಗಳು ಕಡಿಮೆ, ದೊಡ್ಡ ಕಾಯಿಗಳು ಬಿಡುತ್ತವೆ. ಇದರಿಂದ ಇಳುವರಿ ಹೆಚ್ಚು ಬರುತ್ತದೆ ಎಂದೆಲ್ಲ ಹೇಳಿ ರೈತರ ಮನವೊಲಿಸುವ ಯತ್ನ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ಖಾಸಗಿ ವಾಹನಗಳಲ್ಲಿ ಮೈಕ್‌ ಅಳವಡಿಸಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಅಲ್ಲದೆ ಅಂಗಡಿಗಳಲ್ಲಿ ದೊರೆಯುವುದಕ್ಕಿಂತ ಕಡಿಮೆ ದರದಲ್ಲಿ ಬೀಜ ಸಿಗುತ್ತವೆ ಎಂದೆಲ್ಲಾ ಪ್ರಚಾರ ನಡೆಸಲಾಗುತ್ತಿದೆ.

ಇಂತದ್ದೇ ಬೀಜಗಳನ್ನು ಖರೀದಿಸಿ ಈ ಹಿಂದೆ ತಾಲೂಕಿನ ಸಾಕಷ್ಟು ರೈತರು ಮೋಸ ಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಮೊಳಕೆ ಬಾರದೆ ಬೆಳೆಯನ್ನು ರೈತರು ಕೆಡಿಸಿದ ನಿದರ್ಶನಗಳಿವೆ. ಕೆಲ ನಕಲಿ ಬೀಜ ಬಿತ್ತನೆ ಕಂಪನಿಗಳು ರೈತರನ್ನು ವಂಚಿಸುತ್ತಿವೆ. ಕೆಜಿಗೆ ರೂ.500 ರಿಂದ 600 ಮಾತ್ರ ಎಂದು ಪುಸಲಾಯಿಸಿ ಮಾರಾಟ ಮಾಡುವವರು ಕಾಣುವುದೇ ಇಲ್ಲ. ಆದರೆ ಅಂತಹ ಬೀಜ ಖರೀದಿಸಿದ ರೈತರು ಅತ್ತ ಹಣವು ಉಳಿಯದೆ ಇತ್ತ ಇಳುವರಿಯೂ ಬಾರದೆ ಸಂಕಷ್ಟ ಅನುಭವಿಸಿದ್ದಾರೆ.

ಕೃಷಿ ಇಲಾಖೆ ಅಧಿಕಾರಿಗಳು ತಿಳಿಸುವಂತೆ ಬಿತ್ತನೆ ಬೀಜಗಳನ್ನು ಎಲ್ಲಿ ಬೇಕಾದಲ್ಲಿ ಖರೀದಿಸಬಾರದು. ಪ್ರಮಾಣಿತ ಕಂಪನಿಗಳ ಬೀಜಗಳನ್ನೇ ಖರೀದಿಸುವುದು ಸೂಕ್ತ. ಅದರಲ್ಲೂ ಅಂಗಡಿಗಳಿಗೆ ತೆರಳಿ, ರೈತ ಸಂಪರ್ಕ ಕೇಂದ್ರಗಳಿಂದ ಮಾಹಿತಿ ಪಡೆದು ಖರೀದಿಸಬೇಕು ಎನ್ನುತ್ತಾರೆ.

ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಕಂಪನಿಗಳ ಬಿತ್ತನೆ ಬೀಜ ಖರೀದಿಸಬಾರದು. ಒಂದು ವೇಳೆ ಖರೀದಿಸಿದರೆ ಕಡ್ಡಾಯವಾಗಿ ಬಿಲ್ ಪಡೆಯಬೇಕು. ಇಳುವರಿ ಕೈ ಸೇರುವವರೆಗೆ ಪ್ಯಾಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳಬೇಕು. ಒಂದು ವೇಳೆ ನಕಲಿಯಾಗಿದ್ದರೆ ಅಂತಹ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಮಗೆ ದಾಖಲೆ ಬೇಕಾಗುತ್ತದೆ. ಆದ್ದರಿಂದ ರೈತರು ಅಧಿಕೃತ ಅಂಗಡಿಗಳಲ್ಲಿ ಬಿತ್ತನೆ ಬೀಜ ಖರೀದಿಸುವುದು ಸೂಕ್ತ.
ಬಿ.ಆರ್‌.ಪಾಲಾಕ್ಷಿಗೌಡ,
ತಾಲೂಕು ಸಹಾಯಕ ಕೃಷಿ ಅಧಿಕಾರಿ

ಕೆಲ ಖಾಸಗಿ ಕಂಪನಿಗಳು ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಚಾರ ಮಾಡುತ್ತಿವೆ. ಕಡಿಮೆ ದರ, ಹೆಚ್ಚು ಇಳುವರಿ ಎಂದೆಲ್ಲಾ ಹೇಳಿ ರೈತರ ಮನವೊಲಿಸುತ್ತಿವೆ. ಅಂತಹ ಕಂಪನಿಗಳ ಮೇಲೆ ಕೃಷಿ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು.
ವಾ.ಹುಲುಗಯ್ಯ,
ರೈತ ಮುಖಂಡರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.