ಕ್ರೀಡೆ ಜೀವನದ ಅವಿಭಾಜ್ಯ ಅಂಗ
•ದೇಶಿ ಕ್ರೀಡೆ ಉಳಿವಿಗೆ ಸರ್ಕಾರಗಳು ಹೆಚ್ಚು ಪ್ರಾಶಸ್ತ್ಯ ನೀಡಲಿ: ಜೋಗುರು
Team Udayavani, Aug 30, 2019, 4:00 PM IST
ಸಿಂದಗಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಡಾ| ಶರಣಬಸವ ಜೋಗೂರ ಮಾತನಾಡಿದರು.
ಸಿಂದಗಿ: ಭಾರತೀಯ ಕ್ರೀಡೆಗಳ ಉಳುವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಶರಣಬಸವ ಜೋಗೂರ ಹೇಳಿದರು.
ಪಟ್ಟಣದ ಜ.ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಭಾಗದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪಾಲಕರು ಕ್ರೀಡೆಗಳ ಬಗ್ಗೆ ತಾತ್ಸಾರ ಮನೋಭಾವಕ್ಕೆ ಜಾರುತ್ತಿದ್ದಾರೆ ಅದು ಸಲ್ಲದು. ಕ್ರೀಡೆ ಮಗುವಿನ ಮಾನಸಿಕ ಮತ್ತು ದೈಹಿಕ ಶಕ್ತಿ ಬೆಳೆಸುತ್ತದೆ. ಕಲಿಕೆಗೂ ಕ್ರೀಡೆಗಳು ಪ್ರೇರಣೆಯಾಗಲಿವೆ. ಕ್ರೀಡೆಯಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆದರ್ಶವಾಗಿ ಬಳಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಆರ್.ಎಸ್.ಬುಶೆಟ್ಟಿ ಮಾತನಾಡಿ, ಇಂದು ಅನೇಕ ಕ್ರೀಡೆಗಳು ಅಳುವಿನ ಅಂಚಿನಲ್ಲಿವೆ ಅವುಗನ್ನು ಬೆಳೆಸಿ ಪೋಷಿಸುವಲ್ಲಿ ಸರ್ಕಾರಗಳು ಪ್ರಯತ್ನಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲಾ, ರಾಜ್ಯಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ನೌಕರಿಯಲ್ಲಿ ಯೋಗ್ಯ ಮೀಸಲಾತಿಯನ್ನು ಕಲ್ಪಿಸಿ ಕೊಟ್ಟಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲು ಮುಂದಾಗುತ್ತಾರೆ ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ರ.ವಿ.ಗೋಲಾ, ಪ್ರೊ| ಡಿ.ಎಂ. ಪಾಟೀಲ ಮತ್ತು ಇತರರು ವೇದಿಕೆ ಮೇಲೆ ಇದ್ದರು. ಪ್ರಾಧ್ಯಾಪಕರಾದ ಎಂ.ಎಚ್. ಲೋಣಿ, ಬಿ.ಎಸ್. ಹಿರೇಮಠ, ರವಿ ಲಮಾಣಿ, ಡಾ| ಪ್ರಕಾಶ ಲಮಾಣಿ, ಡಾ| ಶಿವಲಿಂಗಪ್ಪ ಬಂಡಾರಿ, ಡಾ| ಸುಮಾ ನಿರ್ಣಿ, ಡಾ| ಶ್ರೀಧರ ಕಾಂಬಳೆ, ಎಸ್.ಬಿ. ಗೌಡಪ್ಪಗೌಡರ, ಡಾ| ಸಂಕಪಾಲ, ಮಹಾಜನಶೆಟ್ಟಿ, ಅರಳಗುಂಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.