ಬದುಕುವ ಶೈಲಿ ಬಣಜಿಗರಲ್ಲಿ ಕಲಿಯಬೇಕು: ನಾಡಗೌಡ
ಬಣಜಿಗ ಸಮಾಜಕ್ಕೆ 2ಎ ಪ್ರಮಾಣಪತ್ರ ನೀಡಲಿ: ಶಿವಕುಮಾರ ಜವಳಿ
Team Udayavani, Jun 24, 2019, 4:06 PM IST
ಸಿಂಧನೂರು: ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಿಂಧನೂರು: ಅವರವರ ಕುಲಕಸಬುಗಳ ಮೇಲೆ ಜಾತಿಗಳು ಸೃಷ್ಟಿಯಾಗಿವೆ. ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯವಾಗಿದೆ. ಬಣಜಿಗ ಸಮಾಜದವರಿಂದ ಬದುಕುವ ಶೈಲಿ ಕಲಿಯಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ, ಬಣಜಿಗ ಸಮುದಾಯ ತಾಲೂಕು ಘಟಕ ಆಶ್ರಯದಲ್ಲಿ ರವಿವಾರ ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಿರಾಣಿ ಅಂಗಡಿ ವ್ಯಾಪಾರವೇ ಮುಖ್ಯ ಕುಲಕಸಬು ಮಾಡಿಕೊಂಡು ಬಣಜಿಗ ಸಮಾಜದವರು ಇಂದು ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ರಂಗದಲ್ಲಿ ಮುಂದುವರಿದಿದ್ದಾರೆ. ಆದರೆ ಸಿಂಧನೂರು ಕ್ಷೇತ್ರದಲ್ಲಿ ರಾಜಕೀಯವಾಗಿ ಯಾರೂ ಬೆಳೆಯುತ್ತಿಲ್ಲ. ಇದು ಅವರಲ್ಲಿ ಒಗ್ಗಟ್ಟು ಇಲ್ಲದಿರುವುದನ್ನು ತೋರಿಸುತ್ತದೆ. ಆದರೆ ಯಾವುದೇ ಪಕ್ಷವಿರಲಿ ಅವರ ಸಮಾಜದವರಿಗೆ ಟಿಕೆಟ್ ನೀಡಿದರೆ ಅವರಿಗೆ ಒಮ್ಮತದಿಂದ ಆಯ್ಕೆ ಮಾಡುವ ಮನೋಭಾವನೆ ಇಂದಿನ ದಿನಮಾನಗಳಲ್ಲಿ ಇಲ್ಲದಿರುವುದು ಎದ್ದು ಕಾಣುತ್ತದೆ ಎಂದರು.
ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿದರೆ ಮಾತ್ರ ಆರ್ಥಿಕವಾಗಿ ಸಮುದಾಯ ಇನ್ನೂ ಎತ್ತರ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲ ಪಾಲಕರು ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸಬೇಕು ಎಂದರು.
ವ್ಯಕ್ತಿತ್ವ ವಿಕಸನ ಉಪನ್ಯಾಸಕಿ ಲೀಲಾ ಮಲ್ಲಿಕಾರ್ಜುನ ಮಾತನಾಡಿ, ಮಹಿಳೆಯರಿಗೆ ಸಮಾನತೆ ನೀಡಿದ ಆಗಿನ ಎಲ್ಲ ಶರಣೆಯರನ್ನು ಒಳಗೊಂಡಂತೆ ಶರಣ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಸಂಸ್ಕೃತಿಯೆಡೆಗೆ ಹೋಗಲು ಸಾಧ್ಯ. ಕಿರಾಣಿ ವ್ಯಾಪಾರದ ಜೊತೆಗೆ ಪರ್ಯಾಯ ವೃತ್ತಿಯಲ್ಲೂ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು ಎಂದರು.
ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಶಿವಬಸಪ್ಪ ಹೆಸರೂರು ಮಾತನಾಡಿ, ಸಮುದಾಯ ಸಂಘಟನೆಗಾಗಿ ಒಗ್ಗೂಡಬೇಕು. ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯ ಶ್ಲಾಘನೀಯವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಬಣಜಿಗ ಸಮುದಾಯದವರು ಇತರ ಸಮುದಾಯದವರೊಂದಿಗೆ ಅನ್ಯೋನ್ಯತೆಯಿಂದ ಬಾಳಬೇಕು ಎಂದರು.
ಸಮುದಾಯ ಮುಖಂಡ ಶಿವಕುಮಾರ ಜವಳಿ ಪ್ರಾಸ್ತಾವಿಕ ಮಾತನಾಡಿ, ಬಣಜಿಗ ಸಮದಾಯಕ್ಕೆ 2ಎ ಪ್ರಮಾಣ ಪತ್ರ, ರಾಜಕೀಯ ಪ್ರಾತಿನಿಧ್ಯ ಒದಗಿಸಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಾದಾಮಿ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಸಮಾಜದ ಅಧ್ಯಕ್ಷ ಗುಂಡಪ್ಪ ಬಳಿಗಾರ ಮಾತನಾಡಿದರು. ಡಾ| ಸುರೇಶ ಸಗರದ, ಸಿದ್ರಾಮಪ್ಪ ಸಾಹುಕಾರ ಮಾಡಸಿರವಾರ, ಜೆಡಿಎಸ್ ಅಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು, ನಾಗರಾಜ ಅರಳಿ, ಗವಿಸಿದ್ದಪ್ಪ ಇದ್ದರು. ಕೆ.ಬಿ.ಹವಾಲ್ದಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.